Kodagu news:
ಮೊಟ್ಟೆ ಮಹಾಯುದ್ಧ ಇದೀಗ ತಾರಕಕ್ಕೇರಿದೆ.ಕೊಡಗು ಇದೀಗ ರಾಜಕೀಯದ ಕೆಂಗಣ್ಣಿಗೆ ಗುರಿಯಾಗಿದೆ.ಆದ್ದರಿಂದ ಅವಮಾನವಾದಲ್ಲೇ ಆರ್ಭಟ ನಡೆಸೋಕೆ ಕಾಂಗ್ರೆಸ್ ಸಜ್ಜಾಗಿದೆ.ಜೊತೆಗೆ ಬಿಜೆಪಿಗರು ಅದಕ್ಕೆ ಕೌಂಟರ್ ಕೊಡಲು ಸಿದ್ಧರಾಗಿ ಪ್ರಚಾರ ಕಾರ್ಯ ನಡೆಸಲು ಕೊಡಗು ಸಮಾವೇಶ ಮಾಡಲು ನಿರ್ಧರಿಸಿದ್ದಾರೆ ಈ ಎಲ್ಲಾ ಕಾರಣದಿಂದ ಶಾಂತಿ ಕಾಪಾಡಲು ಕೊಡಗಿನಲ್ಲಿ ನಿಷೇದಾಜ್ಞೆ ಹೇರಲಾಗಿದೆ.
ಆ.26ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಾಗೂ...
ಹಾವೇರಿ: ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ ಆಗಸ್ಟ್ 24 ರಂದು ಬೆಳಿಗ್ಗೆ 10-30 ಗಂಟೆಯಿಂದ ಹಾವೇರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ.
ಅಭ್ಯರ್ಥಿಗಳು 18 ರಿಂದ 35 ವರ್ಷದೊಳಗಿರಬೇಕು. ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐಟಿಐ(ಯಾವುದೇ ಟ್ರೇಡ್) ಹಾಗೂ ಯಾವುದೇ ಪದವಿ ವಿದ್ಯಾರ್ಹತೆಯ ಯುವಕ, ಯುವತಿಯರು ಈ ನೇರ ಸಂದರ್ಶನದಲ್ಲಿ...
ಬೆಂಗಳೂರು: ಮತದಾರರ ಪಟ್ಟಿಯ ದತ್ತಾಂಶದೊಂದಿಗೆ ಆಧಾರ್ ಸಂಖ್ಯೆಯನ್ನು ಗುರುತಿಸಿ, ದೃಢೀಕರಿಸಿ ಜೋಡಣೆ ಮಾಡುವುದನ್ನು ಕಡ್ಡಾಯಗೊಳಿಸಿರುವುದಾಗಿ ಹಾಗೂ ಆಧಾರ್ ಲಿಂಕ್ ಮಾಡಿಕೊಳ್ಳದಿದ್ದಲ್ಲಿ, ಮತದಾರರ ಗುರುತಿನ ಚೀಟಿ ರದ್ದಾಗುವ ಸಾಧ್ಯತೆಗಳಿರುತ್ತದೆಂದು ಕೆಲವು ಪತ್ರಿಕೆ ಹಾಗೂ ದೃಶ್ಯ ಮಾಧ್ಯಮಗಳಲ್ಲಿ ಮತ್ತು ಸೋಷಿಯಲ್ ಮೀಡಿಯಾಗಳಲ್ಲಿ ವರದಿಯಾಗುತ್ತಿರುವುದು ನಮ್ಮ ಗಮನಕ್ಕೆ ಬಂದಿರುತ್ತದೆ. ಸದರಿ ಪ್ರಕಟಣೆಗಳಲ್ಲಿನ ಅಂಶಗಳು ಭಾರತ ಚುನಾವಣಾ ಆಯೋಗದ ನಿರ್ದೇಶನಕ್ಕೆ...
ಬೆಂಗಳೂರು: ಸಹೃದಯಿ ಪತ್ರಕರ್ತ, ಮುಖ್ಯಮಂತ್ರಿಯವರ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೋಳಿಮಠ ಅವರ ಅಕಾಲಿಕ ನಿಧನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಮದುರ್ಗದವರಾದ ಗುರುಲಿಂಗಸ್ವಾಮಿ ಹೋಳಿಮಠ ಅವರು ಕಳೆದ ಎರಡುವರೆ ದಶಕಗಳಿಂದ ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿದ್ದರು. ಅವರು ಸ್ನೇಹಜೀವಿಯಾಗಿದ್ದರು. ಶ್ರದ್ಧೆ,...
ಶಿವಮೊಗ್ಗ : ರಾಜ್ಯದಲ್ಲಿ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಪರಿಸರಸ್ನೇಹಿ ಗಣೇಶ ಹಬ್ಬ ಆಚರಿಸುವ ಸಂಬಂಧ ಈ ಕೆಳಕಂಡಂತೆ ಸೂಚನೆಗಳನ್ನು ನೀಡಿದೆ. ರಾಜ್ಯದಲ್ಲಿ ಜಲಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಮಂಡಳಿಯು ಪಿಓಪಿಯಿಂದ ಮಾಡುವ ವಿಗ್ರಹಗಳನ್ನು ಯಾವುದೇ ಜಲಮೂಲಗಳಿಗೆ ವಿಸರ್ಜನೆ ಮಾಡುವುದನ್ನು ನಿರ್ಬಂಧಿಸಿ ಅಧಿಸೂಚನೆಯನ್ನು 20/072016 ರಂದು ಹೊರಡಿಸಿದೆ.
ಬೇರೆ ರಾಜ್ಯದಿಂದ ಬರುವಂತಹ...
Mandya News:
ಪಾಂಡವಪುರದ ಬಿಜೆಪಿ ಮುಖಂಡ ಡಾ.ಇಂದ್ರೇಶ್ ಹುಟ್ಟು ಹಬ್ಬದ ಪ್ರಯುಕ್ತ ಪಾಂಡವಪುರ ಪಾಂಡವ ಕ್ರೀಡಾಂಗಣದಲ್ಲಿ ಬೃಹತ್ ಆರೋಗ್ಯ ಮೇಳ ನಡೆಯಿತು. ಜೀಯರ್ ಸ್ವಾಮೀಜಿ ಆರೋಗ್ಯ ಶಿಬಿರದ ವೇದಿಕೆ ಕಾರ್ಯಕ್ರಮಕ್ಕೆ ಆಗಮಿಸಿ ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ಉಧ್ಘಾಟನೆ ವೇಳೆ ಸ್ವಾಮೀಜಿಯ ಜೊತೆ ಸಚಿವ ನಾರಾಯಣಗೌಡ,ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಮೇಶ್ ಸೇರಿ ಹಲವು ಗಣ್ಯರು ಕೈ...
ಬೆಂಗಳೂರು : ಮುಖ್ಯಮಂತ್ರಿಯವರ ಮಾಧ್ಯಮ ಸಂಯೋಜಕ ಹೆಚ್. ಬಿ. ಗುರುಲಿಂಗಸ್ವಾಮಿ ಹೊಳಿಮಠರವರ ಅಕಾಲಿಕ ನಿಧನದಿಂದ ಪತ್ರಿಕೋದ್ಯಮಕ್ಕೆ ಹಾಗೂ ವೈಯಕ್ತಿಕವಾಗಿಯೂ ದೊಡ್ಡ ನಷ್ಟವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ನಿಧನ ಹೊಂದಿದ ಹೆಚ್. ಬಿ. ಗುರುಲಿಂಗಸ್ವಾಮಿ ಹೊಳಿಮಠ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಗುರುಲಿಂಗಸ್ವಾಮಿಯವರು ನನ್ನ ಯುವಸ್ನೇಹಿತ,...
ಶಿವಮೊಗ್ಗ : ಜಿಲ್ಲೆಯಲ್ಲಿ ಗಣೇಶೋತ್ಸವವನ್ನು ಶಾಂತಿಯುತವಾಗಿ ಮತ್ತು ವ್ಯವಸ್ಥಿತವಾಗಿ ನಡೆಸಲು ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಿದರು.
ಏಕಗವಾಕ್ಷಿ ವ್ಯವಸ್ಥೆ: ಶಿವಮೊಗ್ಗ ನಗರದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ವಿವಿಧ ಇಲಾಖೆಗಳಿಂದ ಪರವಾನಿಗೆ ಪಡೆಯುವ ಪ್ರಕ್ರಿಯೆಯನ್ನು ಸುಗಮಗೊಳಿಸಲು...
Vijayapura news:
ಸಾವರ್ಕರ್ ಫೋಟೋ ವಿವಾದ ಇನ್ನೂ ಬೂದಿ ಮುಚ್ಚಿದ ಕೆಂಡಂದಂತಿದೆ.ಇದೀಗ ವಿಜಯಪುರ ಜಿಲ್ಲೆಯಲ್ಲಿ ಕಾಂಗ್ರೆಸ್ ಕಚೇರಿಗೆ ಸಾವರ್ಕರ್ ಭಾವಚಿತ್ರ ಅಂಟಿಸಿ ದೊಡ್ಡ ಹೈಡ್ರಾಮವೇ ನಡೆದಿದೆ.ಈ ವಿಚಾರವಾಗಿ ಡಿ.ಕೆ ಶಿವಕುಮಾರ್ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜಲನಗರದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ರಾತ್ರೋರಾತ್ರಿ ಸಾವರ್ಕರ್ ಅವರ ಹತ್ತಾರು ಭಾವಚಿತ್ರಗಳನ್ನು ಅಂಟಿಸಿ ಕಿಡಿಗೇಡಿಗಳು ಪರಾರಿಯಾಗಿದ್ದಾರೆ....
ಶಿವಮೊಗ್ಗ : ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಆರ್ಥಿಕ ನೆರವು ಪಡೆಯಲು ಅರ್ಹ ರೈತ ಫಲಾನುಭವಿಗಳು ಇ-ಕೆವೈಸಿಯನ್ನು ಈ ಕೂಡಲೇ ಮಾಡಿಸಬೇಕು.
ಈಗಾಗಲೇ ಈ ಯೋಜನೆಯಡಿ ರೈತರು ಆರ್ಥಿಕ ಸಹಾಯಧನ ಪಡೆಯುತ್ತಿದ್ದು, ಮುಂದಿನ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿರುತ್ತದೆ. ಇ-ಕೆವೈಸಿ ಮಾಡದಿದ್ದಲ್ಲಿ ಆರ್ಥಿಕ ನೆರವು ಸ್ಥಗಿತಗೊಳ್ಳಲಿದೆ.
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್...