ಮಳೆ.. ಮಳೆ.. ಮಳೆ..! ಹೀಗೆ ಪದೇ ಪದೇ ಮಳೆ ಸುದ್ದಿಗಳನ್ನು ಕೇಳಿ ಕೇಳಿ ಜನರು ಸುಸ್ತಾಗಿದ್ದರೂ, ಮಳೆರಾಯ ಮಾತ್ರ ಸೈಲೆಂಟ್ ಆಗೋದಿಲ್ಲ, ಬದಲಾಗಿ ವೈಲೆಂಟ್ ಆಗ್ತಿದ್ದಾನೆ. ರಾಜ್ಯದ ಹಲವು ಭಾಗಗಳಲ್ಲಿ ಮಳೆ ಮುಂದುವರಿದಿದ್ದು, ಇದೀಗ ಮತ್ತೆ 72 ಗಂಟೆಗಳಲ್ಲಿ ಮಳೆ ಆರ್ಭಟ ಗ್ಯಾರಂಟಿ ಆಗಿದೆ. ಮಳೆ ನಿಂತು ಹೋಯ್ತು ಅಂತ ಸಂತೋಷಪಟ್ಟವರಿಗೂ ಮತ್ತೆ ಮಳೆ...
ಎಲ್ಲಾದರೂ ಇರು, ಎಂತಾದರೂ ಇರು, ಎಂದೆಂದಿಗೂ ನೀ ಕನ್ನಡವಾಗಿರು. ಇದೇ ನಾದದೊಂದಿಗೆ ಇಂದು ಸಂಪೂರ್ಣ ಕರ್ನಾಟಕವು 70ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ – ಸಡಗರದಿಂದ ಆಚರಿಸಲಾಗುತ್ತಿದೆ.
ರಾಜ್ಯಾದ್ಯಂತ ಕನ್ನಡ ಧ್ವಜ ಹಾರಾಟ, ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಕನ್ನಡದ ಗೌರವ ಕಾಪಾಡುವ ಉತ್ಸಾಹದ ನಡುವೆ ದೇಶದ ಪ್ರಮುಖ ನಾಯಕರು ಕನ್ನಡಿಗರಿಗೆ ಕನ್ನಡದಲ್ಲೇ ಶುಭ ಹಾರೈಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ...
ಧರ್ಮಸ್ಥಳ ಗ್ರಾಮದಲ್ಲಿ ನಡೆದಿದ್ದ ಶವ ಹೂತು ಪ್ರಕರಣ ಹೊಸ ಹಂತಕ್ಕೆ ಕಾಲಿಟ್ಟಿದೆ. ಈ ಪ್ರಕರಣದಲ್ಲಿ ವಶಕ್ಕೆ ಪಡೆಯಲಾದ ಮೃತದೇಹಗಳ ಅವಶೇಷಗಳ ಕುರಿತು ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಇದೀಗ ಎಸ್‌ಐಟಿಗೆ ತಲುಪಿದೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ.
ಸ್ನಾನಘಟ್ಟ ಪಕ್ಕದ ಬಂಗ್ಲೆಗುಡ್ಡೆ ಕಾಡಿನಲ್ಲಿ ನಡೆದ ಶೋಧ ಕಾರ್ಯದ ವೇಳೆ ಎರಡು ಸ್ಥಳಗಳಲ್ಲಿ (6 ಮತ್ತು 11ಎ) ಪತ್ತೆಯಾದ...
ಒಂದೆಡೆ ಚಳಿಗಾಲದ ರೇಸ್‌ಗಾಗಿ ಬೆಂಗಳೂರು ಟರ್ಫ್ ಕ್ಲಬ್ ಸಿದ್ಧತೆ ನಡೆಸುತ್ತಿದೆ. ಮತ್ತೊಂದೆಡೆ ಕುಣಿಗಲ್‌ಗೆ ಸ್ಥಳಾಂತರಗೊಳ್ಳಲು ರಾಜ್ಯ ಸರ್ಕಾರದ ಅಧಿಕೃತ ಆದೇಶಕ್ಕಾಗಿ ಕಾಯುತ್ತಿದ್ದಾರೆ.
ಬಿಟಿಸಿ ಅಧ್ಯಕ್ಷ ಮಂಜುನಾಥ ರಮೇಶ್ ಪ್ರತಿಕ್ರಿಯಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಿಂದ ಸ್ಥಳಾಂತರಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ. ಹೀಗಾಗಿ ಕುಣಿಗಲ್‌ಗೆ ಸ್ಥಳಾಂತರಗೊಳ್ಳುವುದನ್ನು ಬಿಟ್ಟು ನಮಗೆ ಬೇರೆ ದಾರಿಯಿಲ್ಲ.
ನಾವು ಸರ್ಕಾರದ ಸೂಚನೆಗಳನ್ನು ಪಾಲನೆ ಮಾಡಬೇಕಿದೆ ಎಂದು...
ವಣಗೂರಿನಿಂದ ಕುಕ್ಕೆ ಸುಬ್ರಮಣ್ಯಕ್ಕೆ ಮದುವೆಗೆ ಹೊರಟಿದ್ದ 30 ಮಂದಿ, ಆಸ್ಪತ್ರೆ ಪಾಲಾಗಿದ್ದಾರೆ. ಅದೃಷ್ಟವಷಾತ್ ಯಾವುದೇ ಪ್ರಾಣಾಪಾಯ ಆಗಿಲ್ಲ. ಬಿಸ್ಲೆ ಘಾಟ್ ಡಬಲ್ ಟರ್ನ್‌ನಲ್ಲಿ ಮದುವೆ ವ್ಯಾನ್ 30 ಅಡಿ ಎತ್ತರದಿಂದ ಮಗುಚಿ ಬಿದಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ವನಗೂರು ಬಳಿ ನಡೆದಿದೆ.
ವಣಗೂರು ಕುಣಿಕೆರೆ ಬಸವೇಗೌಡರ ಮಗ ಯೋಗೇಶ್ ಮದುವೆ,...
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿ ಬೀದಿನಾಯಿಗಳ ಹಿಂಡು ಹೆಚ್ಚಾಗಿದ್ದು, ಜನರ ನಿದ್ದೆಗೆಡಿಸಿದೆ. 5ನೇ ವಾರ್ಡ್ ಸೇರಿದಂತೆ ವಿವಿಧ ಕಡೆಗಳಲ್ಲಿ ಅಕ್ಟೋಬರ್ 29ರ ಬುಧವಾರ ಒಂದೇ ದಿನ 24 ಮಂದಿ ಬಾಲಕರಿಗೆ, ವಯಸ್ಸಾದವರಿಗೆ ಬೀದಿನಾಯಿಗಳು ಕಚ್ಚಿವೆ.
ಪಟ್ಟಣದ ಡಾ. ಹೆಚ್.ಎನ್.ವೃತ್ತ ಸೇರಿದಂತೆ ಗೂಳೂರು, ಕೊತ್ತಪಲ್ಲಿ, ಸಂತೆಮೈದಾನ, ಕುಂಬಾರಪೇಟೆ, ಆವುಲಮಂದೆ, ಪೊಲೀಸ್ ಹಾಗೂ ಆರೋಗ್ಯ ವಸತಿ ಗೃಹಗಳು ಸೇರಿದಂತೆ...
ಬಿಜೆಪಿ ನಾಯಕರು ರಾತ್ರಿಯಾದರೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನೆಯಲ್ಲಿ ರಾಗಿ ಮುದ್ದೆ ನಾಟಿ ಕೋಳಿ ತಿನ್ನುತ್ತಾರೆ. ಬೆಳಗ್ಗೆ ಸಿದ್ದರಾಮಯ್ಯ ಮನೆಯಲ್ಲಿ ತಟ್ಟೆ ಇಡ್ಲಿ ತಿನ್ನುತ್ತಿದ್ದಾರೆ. ಈ ಪಕ್ಷ ಹೇಗೆ ಉದ್ಧಾರ ಆಗುತ್ತದೆ?. ಹೀಗಂತ ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗುಡುಗಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿರುವ ಯತ್ನಾಳ್, ಮೇಲಿನವರು ಸುಮ್ಮನೆ ಕೂತಿದ್ದಾರೆ. ಈಗ ತಾನು ಹೋದರೆ...
2028ರ ಚುನಾವಣೆಯಲ್ಲಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ ಎಂದು, ಸಚಿವ ಜಮೀರ್ ಅಹಮ್ಮದ್ ಭವಿಷ್ಯ ನುಡಿದಿದ್ದಾರೆ. ಈ ಹಿಂದೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಬಡವರಿಗೆ ನಿವೇಶನ ಹಕ್ಕುಪತ್ರ ನೀಡಲಾಗಿತ್ತು. ನಂತರ ಅಧಿಕಾರಕ್ಕೆ ಬಂದ ಸಮ್ಮಿಶ್ರ ಸರ್ಕಾರ ಹಾಗೂ ಬಿಜೆಪಿ ಸರ್ಕಾರ ಒಂದೇ ಒಂದು ಹಕ್ಕುಪತ್ರ ಕೊಟ್ಟಿಲ್ಲ.
ರಾಜ್ಯದಲ್ಲಿ ಸರ್ವೆ ನಡೆಸಿ...
ಚಿತ್ತಾಪುರದಲ್ಲಿ ನಡೆಯಲಿರುವ ಆರ್‌ಎಸ್‌ಎಸ್ ಪಥಸಂಚಲನ ಕುರಿತ ಕಗ್ಗಂಟನ್ನು ಸೌಹಾರ್ದಯುತವಾಗಿ ಪರಿಹರಿಸಲು ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠವು ನವೆಂಬರ್ 5ರಂದು ಸಂಜೆ 5 ಗಂಟೆಗೆ ಮತ್ತೊಂದು ಶಾಂತಿ ಸಭೆ ನಡೆಸುವಂತೆ ಸೂಚಿಸಿದೆ.
ನ್ಯಾಯಮೂರ್ತಿ M.G.S. ಕಮಲ್ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ವಿಚಾರಣೆಯಲ್ಲಿ ಈ ನಿರ್ದೇಶನ ನೀಡಲಾಯಿತು. ವಿಚಾರಣೆ ವೇಳೆ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು...
2025ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಲಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಸಾಧಕರು, ಗಣ್ಯರಿಗೆ ಪ್ರತಿ ವರ್ಷ ರಾಜ್ಯೋತ್ಸವ ಪ್ರಶಸ್ತಿ ನೀಡುವ ಸಂಪ್ರದಾಯ ಇದೆ. ಈ ಬಾರಿ, ಸಚಿವ ಶಿವರಾಜ್ ತಂಗಡಗಿ ಅವರು ಪ್ರಶಸ್ತಿಗೆ ಭಾಜನರಾಗಿರುವ, 70 ಸಾಧಕರ ಹೆಸರನ್ನು ಘೋಷಿಸಿದ್ದಾರೆ.
ಸಾಹಿತ್ಯ ಕ್ಷೇತ್ರದಲ್ಲಿನ 6 ಸಾಧಕರು, ಜಾನಪದ ಮತ್ತು ಸಂಕೀರ್ಣ ಕ್ಷೇತ್ರದಲ್ಲಿ...