Sunday, July 5, 2026

ರಾಜ್ಯ

ಹರ್ ಘರ್ ತಿರಂಗ: ರಾಜ್ಯದಲ್ಲಿ 1 ಕೋಟಿ ಮನೆಗಳಲ್ಲಿ ತ್ರಿವರ್ಣ ಧ್ವಜ ಹಾರಿಸುವ ಗುರಿ – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಮನೆ ಮನೆಯಲ್ಲಿ ರಾಷ್ಟ್ರ ಧ್ವಜ ಹಾರಿಸುವ ‘ಹರ್ ಘರ್ ತಿರಂಗ’ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ಈ ಅಭಿಯಾನದ ಸಿದ್ಧತೆಯನ್ನು ಪರಿಶೀಲಿಸಿ ಮಾತನಾಡಿದರು. ಈ ಕಾರ್ಯಕ್ರಮವನ್ನು ಕೇವಲ ಕಾಟಾಚಾರಕ್ಕೆ ಮಾಡದೆ, ದೇಶದ ಮೇಲಿನ ಅಭಿಮಾನ ಪ್ರೀತಿಯಿಂದ ಆಯೋಜಿಸಬೇಕು. ಇದನ್ನು...

ಸ್ವಾತಂತ್ರ್ಯ ಹೋರಾಟಕ್ಕೆ ಜೆಡಿಎಸ್ ಕೊಡುಗೆ ಏನು? ಎಂದ ಸಿದ್ದರಾಮಯ್ಯಗೆ ತಿರುಗೇಟು ಕೊಟ್ಟ ಹೆಚ್ಡಿಕೆ

ಬೆಂಗಳೂರು: ಸ್ವಾತಂತ್ರ್ಯ ಹೋರಾಟಕ್ಕೆ ಜೆಡಿಎಸ್ ಪಕ್ಷದ ಕೊಡುಗೆ ಏನು? ಎಂದು ಕೇಳಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿಗಳು, ಸ್ವಯಂಘೋಷಿತ ಸಂವಿಧಾನ ರಕ್ಷಕ ಸಿದ್ದರಾಮಯ್ಯ ಮತ್ತೆ ಜೆಡಿಎಸ್ ಬಗ್ಗೆ ವಿಷ ಕಾರಿಕೊಂಡಿದ್ದಾರೆ. ಜೆಡಿಎಸ್ ಪಕ್ಷ ಸ್ವಾತಂತ್ರ್ಯ ಹೋರಾಟಕ್ಕೆ ನೀಡಿದ ಕೊಡುಗೆ...

ಬಿಜೆಪಿ ಸರ್ಕಾರ BBMP ಚುನಾವಣೆ ಮೀಸಲಾತಿ ಪಟ್ಟಿಯನ್ನು ತನಗೆ ಬೇಕಾದ ರೀತಿಯಲ್ಲಿ ಮಾಡಿಕೊಂಡಿದೆ – DKS

ಬೆಂಗಳೂರು: ಗಾಂಧೀಜಿ ಅವರು ಹಾಕಿಕೊಟ್ಟ ಮಾರ್ಗದರ್ಶನ, ನಮ್ಮ ದೇಶದ ಗೌರವ, ಸ್ವಾಭಿಮಾನ ಪ್ರತೀಕವಾಗಿರುವ ಪಾದಯಾತ್ರೆ ಮೂಲಕ ಪ್ರತಿ ಜಿಲ್ಲೆಯಲ್ಲಿ 75 ಕಿ.ಮೀ ನಷ್ಟು ದೂರ ಹೆಜ್ಜೆ ಹಾಕಿ ಸ್ವಾತಂತ್ರ್ಯ ಅಮೃತಮಹೋತ್ವವನ್ನು ಆಚರಿಸಲು ತೀರ್ಮಾನಿಸಿದ್ದೇವೆ. ಅದರ ಭಾಗವಾಗಿ ನಮ್ಮ ನಾಯಕರುಗಳು ಎಲ್ಲ ಜಿಲ್ಲೆಗಳಲ್ಲಿ ಈ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ನಾನು...

ಬಿಬಿಎಂಪಿ ಮೀಸಲಾಟಿ ಪಟ್ಟಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕೆಂಡಾಮಂಡಲ

ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ನಾವು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಅದರ ಅಂಗವಾಗಿ ಬೆಂಗಳೂರಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಪ್ರವಾಸ ಮಾಡುತ್ತಿದ್ದೇನೆ. ಸರ್ಕಾರ ಬಿಬಿಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಿಗೆ ಅವಕಾಶ ತಪ್ಪಿಸಲು ಬೇಕಾಬಿಟ್ಟಿಯಾಗಿ ಮೀಸಲಾತಿ ಪಟ್ಟಿ ಪ್ರಕಟಿಸಿದೆ. ಇದರ ವಿರುದ್ಧ ನಮ್ಮ ಪಕ್ಷದ ನಾಯಕರು ಪ್ರತಿಭಟಿಸಿ, ನಗರಾಭಿವೃದ್ಧಿ ಇಲಾಖೆ ಕಚೇರಿಗೆ ಬಿಜೆಪಿ ಕಚೇರಿ ಎಂದು ನಾಮಫಲಕ...

ಏತ್ತಿನಹೊಳೆ, ಕೆಸಿ ವ್ಯಾಲಿ ಎತ್ತುವಳಿಕಾಂಡ ಬಿಚ್ಚಿಡಬೇಕಾ? – ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ HDK ಗುಡುಗು

ಬೆಂಗಳೂರು: ಕೋಲಾರ ಜಿಲ್ಲೆಯ ಯರಗೊಳ್‌ ಯೋಜನೆಯ ಬಗ್ಗೆ ಪ್ರತಿಕ್ರಿಯೆ ನೀಡುವ ಭರದಲ್ಲಿ ಅಶ್ಲೀಲ ಹೇಳಿಕೆ ನೀಡುವುದರ ಜತೆ ತಮ್ಮ ಬಗ್ಗೆ ಅಸಂಬದ್ಧವಾಗಿ ನಾಲಿಗೆ ಜಾರಿರುವ ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು; ಮಾಜಿ ಸ್ಪೀಕರ್‌ ಅವರನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾರೆ. ವಿಕೃತ,...

ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಪರಿಹಾರ ಕೈಗೊಳ್ಳಲು 200 ಕೋಟಿ ರೂ ಅನುದಾನ ಬಿಡುಗಡೆ – ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಪ್ರಕೃತಿ ವಿಕೋಪ ಸಂದರ್ಭದಲ್ಲಿ ರಕ್ಷಣಾ ಕಾರ್ಯಾಚರಣೆ ವ್ಯವಸ್ಥೆಯನ್ನು ಬಲಪಡಿಸಲು ಇನ್ನೂ ಎರಡು ಎಸ್ಡಿಆರ್ಎಫ್ ತಂಡಗಳನ್ನು ರಚಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಸಚಿವರು ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಈ ಸಂದರ್ಭದಲ್ಲಿ ವಿವಿಧ...

ಕೇಂದ್ರ ನೀತಿ ಆಯೋಗದ ಮಾದರಿಯಲ್ಲಿ ಕರ್ನಾಟಕ ರಾಜ್ಯ ಪರಿವರ್ತನಾ ಸಂಸ್ಥೆ ರಚನೆಗೆ ಆದೇಶ

ಬೆಂಗಳೂರು : ಕೇಂದ್ರ ನೀತಿ ಆಯೋಗದ ಮಾದರಿಯಂತೆ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗವನ್ನು ಕರ್ನಾಟಕ ರಾಜ್ಯ ಪರಿವರ್ತನಾ ಸಂಸ್ಥೆ ಎಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ರಚಿಸಿ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ. ನವ ಭಾರತಕ್ಕಾಗಿ ನವ ಕರ್ನಾಟಕವನ್ನು ನಿರ್ಮಿಸುವ ಉದ್ದೇಶದಿಂದ ರಚಿಸಲಾಗಿರುವ ಸಂಸ್ಥೆಗೆ ಸರ್ಕಾರದ ಯೋಜನೆ ಹಾಗೂ ಸಂಬಂಧಿಸಿದ ವಿಷಯಗಳಲ್ಲಿ ಪರಿಣಿತರಾದವರನ್ನು ಸರ್ಕಾರದಿಂದ...

ಅದ್ದೂರಿ ದಸರಾ ಆಚರಣೆ, ಆ.7ರಂದು ಗಜಪಯಣಕ್ಕೆ ಚಾಲನೆ: ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು: ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ಸೆಳೆಯುವ ನಿಟ್ಟಿನಲ್ಲಿ ಈ ಬಾರಿ ಅದ್ದೂರಿ ದಸರಾ ಆಚರಣೆ ಮಾಡಲಾಗುವುದು ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2022 ಕಾರ್ಯಕಾರಿ ಸಮಿತಿ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಕೋವಿಡ್ ನಿಂದ ಕಳೆದ ಎರಡು ವರ್ಷಗಳಿಂದ ಸರಳ...

ರಾಜ್ಯದಲ್ಲಿ ಈವರೆಗೆ ಮಂಕಿ ಫಾಕ್ಸ್‌ ಪ್ರಕರಣ ಕಂಡುಬಂದಿಲ್ಲ, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ – ಸಚಿವ ಡಾ.ಕೆ.ಸುಧಾಕರ್‌

ಬೆಂಗಳೂರು : ರಾಜ್ಯದಲ್ಲಿ ಈವರೆಗೆ ಮಂಕಿ ಫಾಕ್ಸ್‌ ಪ್ರಕರಣ ಕಂಡುಬಂದಿಲ್ಲ. ಆರಂಭದಿಂದಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಸ್ಪಷ್ಟಪಡಿಸಿದರು. ವಿಶ್ವ ವ್ಯಾಸ್ಕ್ಯುಲರ್‌ ದಿನ ಪ್ರಯುಕ್ತ, ವ್ಯಾಸ್ಕ್ಯುಲರ್‌ ಸರ್ಜನ್ಸ್‌ ಅಸೋಸಿಯೇಶನ್‌ ವತಿಯಿಂದ ಆಯೋಜಿಸಿದ್ದ, ಟೌನ್‌ಹಾಲ್‌ನಿಂದ ಕಂಠೀರವ ಸ್ಟೇಡಿಯಂವರೆಗಿನ ಜಾಗೃತಿ ನಡಿಗೆ ಕಾರ್ಯಕ್ರಮದಲ್ಲಿ ಸಚಿವರು ಪಾಲ್ಗೊಂಡರು. ಬಳಿಕ ಸುದ್ದಿಗಾರರರೊಂದಿಗೆ ಮಾತನಾಡಿದ...

ರಾಜ್ಯದಲ್ಲಿ 34432.46 ಕೋಟಿ ರೂ. ಬಂಡವಾಳ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ: 48850 ಜನರಿಗೆ ಉದ್ಯೋಗಾವಕಾಶ ಸೃಷ್ಟಿ – ಸಿಎಂ ಬೊಮ್ಮಾಯಿ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 59ನೇ ಸಭೆಯಲ್ಲಿ ಒಟ್ಟು 34432.46 ಕೋಟಿ ರೂ.ಗಳ ಒಟ್ಟು 18 ಯೋಜನೆಗಳಿಗೆ ಒಪ್ಪಿಗೆ ನೀಡಲಾಯಿತು. ಇದರಿಂದ 48850 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ. ಟೊಯೊಟಾ ಮೋಟರ್ಸ್‌ ಸೇರಿದಂತೆ 8 ಹೊಸ ಕೈಗಾರಿಕಾ ಪ್ರಸ್ತಾವನೆಗಳು ಹಾಗೂ 10...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img