ಬೆಂಗಳೂರು: ಯಾವುದೇ ಕಾರಣಕ್ಕೂ ಕೈಗಾರಿಕಾ ಉದ್ದೇಶಗಳಿಗಾಗಿ ರೈತರಿಂದ ಬಲವಂತವಾಗಿ ಜಮೀನನ್ನು ಭೂಸ್ವಾಧೀನ ಮಾಡಿಕೊಳ್ಳಬಾರದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಗುರುವಾರ ಕರ್ನಾಟಕ ಉದ್ಯೋಗ ಮಿತ್ರ ಕಚೇರಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ , ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿ ರೈತರ ನಿಯೋಗ ಹಾಗೂ...
ಬೆಂಗಳೂರು: ವಿದ್ಯುತ್ ಶುಲ್ಕ ಪಾವತಿಗೆ ಬಿಲ್ ನೀಡಿದ ದಿನದಿಂದ 6 ತಿಂಗಳುಗಳ ಕಾಲಾವಕಾಶವಿರುತ್ತದೆ ಎಂಬ ಸುಳ್ಳು ಮಾಹಿತಿಯನ್ನು ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗುತ್ತಿದ್ದು, ಇಂತಹ ವದಂತಿ ಮತ್ತು ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು ಎಂದು ಬೆಸ್ಕಾಂ ಗ್ರಾಹಕರಿಗೆ ಮನವಿ ಮಾಡಿದೆ.
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಕಾಲಕಾಲಕ್ಕೆ ಅನುಮೋದಿಸುವ ದರದಲ್ಲಿ ಗ್ರಾಹಕರು ಬಳಸುವ ವಿದ್ಯುತ್ ಗೆ...
ಬೆಂಗಳೂರು : ಸನ್ಮಾನ್ಯ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವುದು ಕನ್ನಡ ನಾಡಿನ ಸಮಗ್ರ ಜನತೆಗೆ ಬಹಳ ಸಂತಸವುಂಟಾಗಿದ್ದು, ಅವರ ಅಗಾಧವಾದ ಅನುಭವ ಇಡೀ ದೇಶಕ್ಕೆ ಲಾಭವನ್ನು ತಂದುಕೊಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಶ್ರೀಯುತರು ನಾಲ್ಕೈದು ದಶಕಗಳಿಂದ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಮಾತ್ರವಲ್ಲ, ರಾಜ್ಯದಾದ್ಯಂತ...
ಬೆಂಗಳೂರು: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ-ಹೊರಗುತ್ತಿಗೆ ನೌಕರರ ವೇತನವನ್ನು ಹೆಚ್ಚಳ ಮಾಡಲು ಪ್ರಯತ್ನ ಮಾಡಲಾಗುತ್ತಿದೆ. ಜೊತೆಗೆ ಆರೋಗ್ಯ ವಿಮೆ ವಿಸ್ತರಿಸಲು ಕೂಡ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮುಷ್ಕರ ನಡೆಸುತ್ತಿರುವ ಗುತ್ತಿಗೆ-ಹೊರಗುತ್ತಿಗೆ ನೌಕರರನ್ನು ಭೇಟಿಯಾಗಿ ಚರ್ಚೆ ನಡೆಸಿದ ಬಳಿಕ...
ಬೆಂಗಳೂರು: ಬಿಜೆಪಿ ಸರಕಾರ ರೈತರ ಸಮಸ್ಯೆಗಳಿಗೆ ಪರಿಹಾರ ನೀಡಿದೆ. ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರ ಸರಕಾರ ಆರು ಸಾವಿರ ರೂಪಾಯಿ ಮತ್ತು ರಾಜ್ಯದ ಯಡಿಯೂರಪ್ಪ- ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರಕಾರಗಳು 4 ಸಾವಿರ ರೂಪಾಯಿ ನೆರವನ್ನು ಖಾತೆಗೆ ಜಮಾ ಮಾಡುತ್ತಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದರು.
ಬಿಜೆಪಿ ರಾಜ್ಯ...
ಶಿವಮೊಗ್ಗ : ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ವತಿಯಿಂದ 2022-23 ನೇ ಸಾಲಿಗೆ ನೂತನ ಶಿಕ್ಷಣ ನೀತಿ ಪ್ರಕಾರ(ಎನ್‍ಇಪಿ) ವಿವಿಧ ಕೋರ್ಸ್‍ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ(ಯುಯುಸಿಎಂಎಸ್)ಮೂಲಕ ಆನ್‍ಲೈನ್ ಹಾಗೂ ನೇರವಾಗಿ ವಿಶ್ವವಿದ್ಯಾಲಯದ ಹೆಲ್ಪ್‍ಡೆಸ್ಕ್ ಮೂಲಕ ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಬಹುದು.
ಬಿ.ಪಿ.ಎ...
https://www.youtube.com/watch?v=0IawfqxeYP0
ಈ ಹಿಂದೆ ರಾಜ್ಯದಲ್ಲಿ ಭ್ರಷ್ಟಾಚಾರ ಮುಚ್ಚಿಹಾಕುವ ಸರ್ಕಾರವಿತ್ತು, ಆದ್ರೆ ಈಗ ಭ್ರಷ್ಟಾಚಾರ ನಿರ್ಮೂಲನೆ ಮಾಡುವ ಸರ್ಕಾರವಿದೆ ಅಂತ ಹೇಳುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
https://www.youtube.com/watch?v=e_qEoKrdIGo
ಸಿದ್ದರಾಮಯ್ಯರನ್ನು ನೋಡಿದ್ರೆ ನನಗೆ ತುಂಬಾ ಕನಿಕರ ಬರುತ್ತೆ, ದಕ್ಷ ಆಡಳಿತಗಾರ ಎನ್ನುವ ಸಿದ್ದು, ಈ ಹಿಂದೆ ಡಿಜಿಪಿಯೊಬ್ಬರ ಕೇಸ್ ಮುಚ್ಚಿ ಹಾಕಿಲ್ವಾ...
ಬೆಂಗಳೂರು :ರಾಜ್ಯಸಭೆಗೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ನಾಮ ನಿರ್ದೇಶನಗೊಂಡಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹರ್ಷ ವ್ಯಕ್ತ ಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಡಾ. ಹೆಗ್ಗಡೆಯವರನ್ನು ಅಭಿನಂದಿಸಿರುವ ಮುಖ್ಯಮಂತ್ರಿಗಳು, ಆರೋಗ್ಯ, ಶಿಕ್ಷಣ, ಸ್ತ್ರೀಶಕ್ತಿ, ಗ್ರಾಮೀಣಾಭಿವೃದ್ಧಿ ಹೀಗೆ ವಿವಿಧ ಕ್ಷೇತ್ರಗಳ ಹಾಗೂ ಆಯಾಮಗಳಲ್ಲಿ...
ಮೈಸೂರು : ರಾಜ್ಯದಲ್ಲಿ ಪ್ರವಾಹವಾಗುವ ಪ್ರದೇಶಗಳನ್ನು ಪರಿಶೀಲಿಸಿ, ತಾತ್ಕಾಲಿಕ ಅಥವಾ ಶಾಶ್ವತ ಸ್ಥಳಾಂತರಿಸುವಿಕೆಯ ಬಗ್ಗೆ ಸರ್ವೇ ಮಾಡಲು ಸೂಚನೆ ನೀಡಲಾಗಿದೆ ಎಂದರು. ಅಲ್ಲದೇ ಇದೇ ವೇಳೆ ಮಕ್ಕಳಿಗೆ ಶೂ ಸಾಕ್ಸ್, ಬೈಸಿಕಲ್ ವಿತರಣೆ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ಮೈಸೂರು ವಿಮಾನ ನಿಲ್ದಾಣದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಪ್ರತಿ...
ನವದೆಹಲಿ: ಖ್ಯಾತ ಅಥ್ಲೀಟ್ ಪಿ.ಟಿ.ಉಷಾ ಮತ್ತು ಮಾಂತ್ರಿಕ ಇಳಯರಾಜಾ, ಧರ್ಮಸ್ಥಳ ದೇವಾಲಯದ ಆಡಳಿತಾಧಿಕಾರಿ ವೀರೇಂದ್ರ ಹೆಗ್ಗಡೆ ಮತ್ತು ಖ್ಯಾತ ಸಾಹಿತಿ ವಿ.ವಿಜಯೇಂದ್ರ ಪ್ರಸಾದ್ ಅವರನ್ನು ಸಂಸತ್ತಿನ ಮೇಲ್ಮನೆಗೆ ನಾಮನಿರ್ದೇಶನ ಮಾಡಲಾಗಿದೆ.
ಗಮನಾರ್ಹ ಪಿ.ಟಿ.ಉಷಾ ಜಿ ಪ್ರತಿಯೊಬ್ಬ ಭಾರತೀಯನಿಗೂ ಸ್ಫೂರ್ತಿಯಾಗಿದ್ದಾರೆ. ಕ್ರೀಡೆಗಳಲ್ಲಿ ಅವರ ಸಾಧನೆಗಳು ವ್ಯಾಪಕವಾಗಿ ತಿಳಿದಿವೆ ಆದರೆ ಕಳೆದ ಹಲವಾರು ವರ್ಷಗಳಲ್ಲಿ ಉದಯೋನ್ಮುಖ ಕ್ರೀಡಾಪಟುಗಳಿಗೆ ಮಾರ್ಗದರ್ಶನ...
Rain Alert: ಜೂನ್ ತಿಂಗಳಿಡೀ ಮಳೆ ಕೊರತೆಯಿಂದ ಕಂಗಾಲಾಗಿದ್ದ ರೈತರಿಗೆ ಈಗ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದೆ. ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳಲಿದ್ದು, ಕರಾವಳಿ, ಮಲೆನಾಡು...