ಐಪಿಎಲ್ ಫೈನಲ್ ಪಂದ್ಯದಲ್ಲಿ ಆರ್ಸಿಬಿ ಐತಿಹಾಸಿಕ ಗೆಲುವು ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದ ಬೆನ್ನಲ್ಲೇ, ಹುಬ್ಬಳ್ಳಿಯಲ್ಲಿ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ನಗರದ ಪ್ರಮುಖ ಕೇಂದ್ರವಾದ ಚೆನ್ನಮ್ಮ ವೃತ್ತದಲ್ಲಿ ಸಾವಿರಾರು ಅಭಿಮಾನಿಗಳು ಜಮಾಯಿಸಿ ಪಟಾಕಿ ಸಿಡಿಸಿ, ನೃತ್ಯ ಮಾಡಿ ಹಾಗೂ ಘೋಷಣೆಗಳನ್ನು ಕೂಗಿ ವಿಜಯೋತ್ಸವವನ್ನು ಅದ್ದೂರಿಯಾಗಿ ಆಚರಿಸಿದ್ದಾರೆ.
ಆರ್ಸಿಬಿ ಫೈನಲ್ ಪಂದ್ಯ ವಿಜಯ ಸಾಧಿಸುತ್ತಿದ್ದಂತೆ ಹುಬ್ಬಳ್ಳಿಯ...
ಶಾಲಾ-ಕಾಲೇಜುಗಳಲ್ಲಿ ಹಿಜಾಬ್ಗೆ ಅನುಮತಿ ನೀಡಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿರುವ ಹಿಂದೂಪರ ಸಂಘಟನೆಗಳು, ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ಹಾಗೂ ಜಾಗೃತಿ ಅಭಿಯಾನಗಳನ್ನು ಆರಂಭಿಸಿವೆ.
ಹಿಜಾಬ್ ವಿಚಾರವಾಗಿ ರಾಜ್ಯ ಸರ್ಕಾರದ ನಡೆಗೆ ಆಕ್ಷೇಪ ವ್ಯಕ್ತಪಡಿಸಿರುವ ಶ್ರೀರಾಮ ಸೇನೆ ಹಾಗೂ ಇತರ ಹಿಂದೂಪರ ಸಂಘಟನೆಗಳು, ಹುಬ್ಬಳ್ಳಿಯಲ್ಲಿ ವಿಭಿನ್ನ ಅಭಿಯಾನಕ್ಕೆ ಚಾಲನೆ ನೀಡಿವೆ. ದಿನಿಂದ ರಾಜ್ಯದಾದ್ಯಂತ ಶಾಲಾ-ಕಾಲೇಜುಗಳ...
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನಗಳ ಕಾಲ ಮಳೆಯ ಚಟುವಟಿಕೆ ಹೆಚ್ಚಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ರಾಜ್ಯದ ವಿವಿಧ ಭಾಗಗಳಿಗೆ ಭಾರೀ ಮಳೆ, ಗುಡುಗು-ಮಿಂಚು ಹಾಗೂ ಬಿರುಗಾಳಿಯ ಎಚ್ಚರಿಕೆ ನೀಡಿದ್ದು, ಕೆಲವು ಜಿಲ್ಲೆಗಳಲ್ಲಿ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಜಾರಿಗೊಳಿಸಲಾಗಿದೆ.
ಶುಕ್ರವಾರ ಸಂಜೆ ಹಲವು ಭಾಗಗಳಲ್ಲಿ...
Bidar News: ಬೀದರ್: ಬೀದರ್ನ ಭಾಲ್ಕಿ ನಗರ ನಿವಾಸಿಗಳು, ಇದೀಗ ಕಳ್ಳತನದ ಆತಂಕದಲ್ಲೇ ದಿನಗಳೆಯುತ್ತಿದ್ದಾರೆ. ಮನೆ ಬಿಟ್ಟು ಹೋಗಲು ಹೆದರಿಕೆಯಾಗಿದ್ದು, ಮನೆಯಲ್ಲೇ ಇದ್ದರೂ ಯಾವಾಗ ಕಳ್ಳರು ಬಂದು ಅಟ್ಯಾಕ್ ಮಾಡಿ ಬಿಡ್ತಾರೋ ಅನ್ನೋ ಹೆದರಿಕೆಯಲ್ಲೇ ಜನ ದಿನ ದೂಡುವಂತಾಗಿದೆ.
ಭಾಲ್ಕಿ ನಗರದ ಲೆಕ್ಚರ್ ಕಲೋನಿಯಲ್ಲಿ ಕಳ್ಳತನ ನಡೆದಿದ್ದು, ಕಳ್ಳರು ಯಾರಿಗೂ ಅಂಜದೇ, ಲಾಂಗು-ಮಚ್ಚು ಹಿಡಿದು ಕಳ್ಳತನಕ್ಕೆ...
Hubli News: ಹುಬ್ಬಳ್ಳಿಯ ವಿದ್ಯಾನಗರದಲ್ಲಿ ವಿದ್ಯಾರ್ಥಿಗಳ ಪಿಜಿಗಳನ್ನು ಟಾರ್ಗೆಟ್ ಮಾಡಿ ಸರಣಿ ಕಳ್ಳತನ ನಡೆಸುತ್ತಿದ್ದ ಖದೀಮರನ್ನು ಪೊಲೀಸರು ಬಂಧಿಸಿದ್ದಾರೆ. ವಿದ್ಯಾರ್ಥಿಗಳ ವೇಷದಲ್ಲಿ ಎಂಟ್ರಿ ನೀಡಿ ಲ್ಯಾಪ್ಟಾಪ್ ಕಳವು ಮಾಡುತ್ತಿದ್ದ ಆರೋಪಿಗಳು ಇದೀಗ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಹುಬ್ಬಳ್ಳಿಯ ವಿದ್ಯಾನಗರ ಭಾಗದಲ್ಲಿ ಬಿವಿಬಿ ಕಾಲೇಜು ಸುತ್ತಮುತ್ತಲಿನ ವಿದ್ಯಾರ್ಥಿಗಳ ಪಿಜಿಗಳೇ ಕಳ್ಳರ ಪ್ರಮುಖ ಟಾರ್ಗೆಟ್ ಆಗಿದ್ದವು. ವಿದ್ಯಾರ್ಥಿಗಳಂತೆ ಹಾಡಹಗಲೇ...
Hubli News: ಹುಬ್ಬಳ್ಳಿಯಲ್ಲಿ ಕ್ಷುಲಕ ವಿಚಾರಕ್ಕೆ ಆರಂಭವಾದ ಜಗಳ ಮಾರಣಾಂತಿಕ ಹಲ್ಲೆಗೆ ತಿರುಗಿದೆ. ಕಾರ್ ಸೈಡ್ ವಿಚಾರಕ್ಕೆ ಯುವಕನನ್ನು ಮಧ್ಯರಸ್ತೆಯಲ್ಲೇ ಅಟ್ಟಾಡಿಸಿ ಹಲ್ಲೆ ನಡೆಸಿದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಹುಬ್ಬಳ್ಳಿಯ ಲಿಂಗರಾಜನಗರದಲ್ಲಿ ಕಾರ್ ಸೈಡ್ ವಿಚಾರಕ್ಕೆ ಮಾತಿನ ಚಕಮಕಿ ಆರಂಭವಾಗಿ, ಕ್ಷಣಾರ್ಧದಲ್ಲೇ ಜಗಳ ತೀವ್ರ ಸ್ವರೂಪ ಪಡೆದುಕೊಂಡಿದೆ....
Koppala News: ಕೊಪ್ಪಳ ಜಿಲ್ಲೆಯಲ್ಲಿ ಕೆಪಿಎಸ್ ಮ್ಯಾಗ್ನೆಟ್ ಯೋಜನೆ ವಿರೋಧಿಸಿ ಇಂದು ಬೃಹತ್ ಪ್ರತಿಭಟನೆ ನಡೆಯಿತು. AIDSO ಹಾಗೂ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಗ್ರಾಮಸ್ಥರು, ಪೋಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಕನಕದಾಸ ವೃತ್ತದಿಂದ ಅಶೋಕ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು,
“ನಮ್ಮೂರ ಶಾಲೆ...
Hubli News: ಹುಬ್ಬಳ್ಳಿಯಲ್ಲಿ ಬಕ್ರೀದ್ ಹಬ್ಬವನ್ನು ಮುಸ್ಲಿಂ ಸಮುದಾಯದವರು ಭಕ್ತಿಭಾವದಿಂದ ಆಚರಿಸಿದರು. ನಗರದ ಕಿತ್ತೂರು ಚೆನ್ನಮ್ಮ ವೃತ್ತದ ಬಳಿಯ ಚೆನ್ನಮ್ಮ ಈದ್ಗಾ ಮೈದಾನದಲ್ಲಿ ಸಾವಿರಾರು ಮಂದಿ ಸೇರಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಮೌಲಾನಾ ಹಪೀಸ್ ಮುಫ್ತಿ ಸುಭಾನ್ ನೇತೃತ್ವದಲ್ಲಿ ನಡೆದ ವಿಶೇಷ ನಮಾಜ್ನಲ್ಲಿ ದೇಶದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಸಮಾಜದ ಒಳಿತಿಗಾಗಿ ಪ್ರಾರ್ಥಿಸಲಾಯಿತು. ಹಬ್ಬದ ಅಂಗವಾಗಿ...
ಹಾನಗಲ್ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತನನ್ನು ಹಾನಗಲ್ ನಿವಾಸಿ 35 ವರ್ಷದ ಗೌಸ್ ಮೋದ್ದೀನ್ ಮೊಹಮ್ಮದ್ ರಫೀಕ್ ಎಂದು ಗುರುತಿಸಲಾಗಿದೆ. ಭಾನುವಾರ ದರ್ಗಾ ಕ್ರಾಸ್ ಬಳಿ ಶಕ್ತಿಧಾಮದ ಸಮೀಪ ಅಕ್ರಮವಾಗಿ ಗಾಂಜಾ...
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ರಾಜ್ಯದಲ್ಲೇ ಮೊದಲ ಬಾರಿಗೆ ಅತ್ಯಾಧುನಿಕ ಮೊಬೈಲ್ ಕಮಾಂಡ್ ಪೋಸ್ಟ್ ವಾಹನವನ್ನು ಪರಿಚಯಿಸಲಾಗಿದೆ. ವಿಮಾನ ಅಪಘಾತ, ಅಪಹರಣ ಸೇರಿದಂತೆ ತುರ್ತು ಸಂದರ್ಭಗಳಲ್ಲಿ ತ್ವರಿತ ನಿರ್ಧಾರ ಮತ್ತು ಸಮನ್ವಯ ಕಾರ್ಯಾಚರಣೆಗೆ ಈ ವಾಹನ ಪ್ರಮುಖ ಪಾತ್ರವಹಿಸಲಿದೆ.
ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ ವ್ಯಾಪ್ತಿಯ ವಿಮಾನ ನಿಲ್ದಾಣಗಳಲ್ಲಿ ಈ ರೀತಿಯ ಮೊಬೈಲ್ ಕಮಾಂಡ್ ಪೋಸ್ಟ್ ಹೊಂದಿರುವ...
Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...