ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(KUWJ)ದ ಮನವಿ ಮೆರೆಗೆ ಕಲಬುರಗಿ ಕನ್ನಡ ಬಂಧು ಪತ್ರಿಕೆಯ ಸಂಪಾದಕಿ ಶ್ರೀಮತಿ ಅನುರಾಧ ಕುಲಕರ್ಣಿ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2 ಲಕ್ಷ ರೂ ಪರಿಹಾರ ಮಂಜೂರು ಮಾಡಿದ್ದಾರೆ.
ಹಿರಿಯ ಪತ್ರಕರ್ತ ಜಯಪ್ರಕಾಶ್ ಕುಲಕರ್ಣಿ ಅವರು ಮೃತಪಟ್ಟ ಬಳಿಕ ಅವರ ಪತ್ನಿ ಅನುರಾಧ ಕುಲಕರ್ಣಿ ಪತ್ರಿಕೆ ಜವಾಬ್ದಾರಿ...
ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಈಗಾಗಲೇ ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ ಪೌಲ್ ಅವರನ್ನು ಎತ್ತಂಗಡಿ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವಂತ ಡಿವೈಎಸ್ಪಿ ಹಾಗೂ ಸಿಪಿಐ ಅಧಿಕಾರಿಗಳನ್ನು ಇದೀಗ ಅಮಾತನಗೊಳಿಸಲಾಗಿದೆ.
ರಾಯಚೂರು ಜಿಲ್ಲೆಯ ಲಿಂಗಸೂಗುರು ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ ಹಾಗೂ ಸಿಪಿಐ ಆನಂದ ಮೇತ್ರಿ ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದರು. ಇವರಿಪ್ಪರನ್ನು ನ್ಯಾಯಾಲಯವು ಸಿಐಡಿ ವಶಕ್ಕೂ...
ಬೆಂಗಳೂರು : ಯಾರು ಏನು ಹೇಳಿಕೆ ಕೊಡುತ್ತಾರೋ ಆ ಹೇಳಿಕೆಗಳಿಗೆ ಅವರೇ ಜವಾಬ್ದಾರರು ಹಾಗೂ ಅವರ ಹೇಳಿಕೆಗೆ ತಕ್ಕಂತೆ ದಾಖಲೆ, ಪುರಾವೆಗಳನ್ನು ಒದಗಿಸುವುದು ಅವರ ಕರ್ತವ್ಯ ಕೂಡ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.
ಅವರು ಇಂದು ತಮ್ಮ ಆರ್.ಟಿ.ನಗರದ ನಿವಾಸದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ಯಾರು ಏನು ಹೇಳಿಕೆ ನೀಡುತ್ತಾರೋ ಅದಕ್ಕೆ ಬದ್ಧವಾಗಿ ದಾಖಲೆಗಳನ್ನು...
ಬೆಳಗಾವಿ: ತಮ್ಮನ್ನು ಮುಖ್ಯಮಂತ್ರಿ ಮಾಡಲು 2500 ಕೋಟಿ ರೂಪಾಯಿ ದೆಹಲಿಯವರು ಕೇಳಿದ್ದರು ಎಂಬ ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಅವರ ಆರೋಪ ಗಂಭೀರ ಸ್ವರೂಪದ್ದಾಗಿದ್ದು ಸೂಕ್ತ ತನಿಖೆಯಿಂದ ಮಾತ್ರ ಇದರ ಹಿಂದಿನ ಸತ್ಯಾಸತ್ಯತೆ ಬಹಿರಂಗವಾಗಲು ಸಾಧ್ಯ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಮಾತನಾಡಿದ ಅವರು, ಯತ್ನಾಳ್ ಆರೋಪದ...
ಬೆಂಗಳೂರು: ರಾಜಕೀಯದಿಂದ ದೂರವಾಗಿ, ಸನ್ಯಾಸ ಸ್ವೀಕರಿಸೋದಾಗಿ ಈ ಹಿಂದೆ ಹೇಳಿದ್ದಂತ ಮಾಜಿ ಸಚಿವ ಬಿ.ಜೆ ಪುಟ್ಟಸ್ವಾಮಿ, ಈಗ ನುಡಿದಂತೆ ನಡೆದುಕೊಂಡಿದ್ದಾರೆ. ಖಾದಿ ಬಿಟ್ಟು, ಕಾವಿ ತೊಟ್ಟು, ಪೂರ್ಣಾನಂದ ಪುರಿ ಸ್ವಾಮಿಗಳಾಗಿದ್ದಾರೆ.
ಹೌದು.. ಮಾಜಿ ಸಚಿವ ಬಿ.ಜೆ ಪುಟ್ಟಸ್ವಾಮಿಯವರು, ತಮ್ಮ 50ನೇ ವರ್ಷದಲ್ಲಿ ರಾಜಕೀಯ ಜೀವನ ತ್ಯಜಿಸಿ, ಸನ್ಯಾಸ ಸ್ವೀಕರಿಸಿದ್ದಾರೆ. ಕೈಲಾಸ ಆಶ್ರಮ ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ...
ಬೆಂಗಳೂರು: ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಂತ ಕನ್ನಡದ ಹಿರಿಯ ಹಾಸ್ಯ ಕಲಾವಿದ ಮೋಹನ್ ಜುನೇಜ ಇಂದು ನಿಧನರಾಗಿದ್ದಾರೆ. ಈ ಮೂಲಕ ಚೆಂದನವನದ ಹಾಸ್ಯ ನಟ ಇನ್ನಿಲ್ಲವಾಗಿದ್ದಾರೆ.
ಬೆಂಗಳೂರಿನ ಉತ್ತರ ತಾಲೂಕಿನ ತಮ್ಮೇನಹಳ್ಳಿಯಲ್ಲಿ ಅವರು ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದರು. ಕಳೆದ ಕೆಲ ದಿನಗಳಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಅವರನ್ನು ಹೆಸರುಘಟ್ಟ ರಸ್ತೆಯ...
ಬೆಂಗಳೂರು : ಅಮೃತ ಯೋಜನೆಯ ಮನೆಗಳನ್ನೂ ಒಳಗೊಂಡಂತೆ ಒಟ್ಟು 6 ಲಕ್ಷ ಮನೆಗಳನ್ನು ಡಿಸೆಂಬರ್ ಮಾಹೆಯೊಳಗೆ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.
2022-23 ನೇ ಸಾಲಿನ ಆಯವ್ಯಯ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ವಸತಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಸಭೆಯ ಮುಖ್ಯಾಂಶಗಳು:
1. ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಗರಿಷ್ಠ...
ಬೆಂಗಳೂರು : ರಾಜ್ಯದಲ್ಲಿ ಅರಣ್ಯ ಜೀವಿಶಾಸ್ತ್ರ ವ್ಯವಸ್ಥೆಯ ಮೇಲೆ ಉಂಟಾಗಿರುವ ದುಷ್ಟಪರಿಣಾಮಗಳನ್ನು ಸರಿದೂಗಿಸಲು ಐಐಎಸ್ಸಿ ಸಂಸ್ಥೆಯ ತಜ್ಞರ ನೆರವಿನೊಂದಿಗೆ ಕ್ರಿಯಾ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದರು.
2022-23 ನೇ ಸಾಲಿನ ಆಯವ್ಯಯ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಅರಣ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಸಭೆಯ ಮುಖ್ಯಾಂಶಗಳು
1....
ಬೆಂಗಳೂರು : ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು, ಸಮುದಾಯ ಕೇಂದ್ರಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸುಪರ್ದಿಗೆ ನೀಡಲಾಗಿದೆ. ಆಡಳಿತಾತ್ಮಕ ಮತ್ತು ಆರ್ಥಿಕ ನಿಯಂತ್ರವಣವನ್ನು ಹೊಂದಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು, ಸಮುದಾಯ ಕೇಂದ್ರಗಳನ್ನು ಈಗ ಸರ್ಕಾರವೇ ನೇರವಾಗಿ ನಡೆಸಲು...
ಹಾಸನ: ರಾಜ್ಯದಲ್ಲಿ ಪಿಎಸ್ಐ ನೇಮಕಾತಿ ಅಕ್ರಮ ಕುರಿತಂತೆ ಸಿಐಡಿ ತನಿಖೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಸಿಕ್ಕವರೆಲ್ಲಾ ಸಣ್ಣ ಸಣ್ಣವರು. ಅಕ್ರಮ ಗ್ಯಾಂಗ್ ಲೀಡರ್ ಬೇರೆಯೇ ಇದ್ದಾರೆ. ಅವರ ಹೆಸರು ಹೇಳೋದಕ್ಕೆ ಸರ್ಕಾರ ಸಾಧ್ಯವೇ.? ಒಂದು ವೇಳೆ ಆ ಕಿಂಗ್ ಪಿನ್ ಟಚ್ ಮಾಡೋದಕ್ಕೆ ಹೋದ್ರೇ.. ರಾಜ್ಯ ಸರ್ಕಾರವೇ ಬೀಳುತ್ತದೆ ಎಂಬುದಾಗಿ ಮಾಜಿ ಸಿಎಂ ಹೆಚ್...