ಬೆಂಗಳೂರು: ಕೊಳದ ಮಠದ ಡಾ.ಶಾಂತವೀರ ಸ್ವಾಮೀಜಿಯವು, ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವಂತ ಅವರ ಆಪ್ತ ಸಹಾಯಕ ವೆಂಕಟಪ್ಪ, ನಿನ್ನೆ ಸಂಜೆ ವಾಕಿಂಗ್ ಕರೆದುಕೊಂಡು ಹೋಗಿ ಬಂದಿದ್ದೆ. ರಾತ್ರಿ ತುಂಬಾ ನಮ್ಮೊಡನೆ ಚೆನ್ನಾಗಿ ಮಾತನಾಡಿದ್ರು.. ಇಂದು ಮುಂಜಾಗನ ಬಾಗಿಲು ತೆಗೆದಿರದ ಕಾರಣ, ಹೋಗಿ ನೋಡಿದೆ. ಅವರಿಗೆ ಎಚ್ಚರವಿರಲಿಲ್ಲ. ವೈದ್ಯರನ್ನು ಕರೆಸಿ, ಪರೀಕ್ಷೆ ಮಾಡಿಸಿದಾಗ,...
ಬೆಂಗಳೂರು: How u can ಪಿಎಸ್ಐ ನೇಮಕಾತಿ ಪರೀಕ್ಷೆ ರದ್ದು ಮಾಡಲು ಸಾಧ್ಯ......? ಇಡೀ ದೇಶದಲ್ಲಿ ಕರ್ನಾಟಕದ ಬಗ್ಗೆ ಯಾವ ಸಂದೇಶ ಹೋಗಿದೆ ಗೊತ್ತಾ? ಬೇರೆ ಬೇರೆ ಇಲಾಖೆಗಳಲ್ಲೂ ನಡೀತಿದೆ. ಇದರ ಬಗ್ಗೆ ಯಾವ ಸಚಿವರೂ ಯಾಕೆ ಮಾತಾಡ್ತೀಲ್ಲ. ನಮ್ಮ ವಿರೋಧ ಪಕ್ಷದ ನಾಯಕರು ರಾಜೀನಾಮೆ ಕೇಳಿದ್ದಾರೆ. ನೀವು ರಾಜೀನಾಮೆ ಕೊಡಲ್ಲ ಅಂತ ಗೊತ್ತಿದೆ....
ಹುಬ್ಬಳ್ಳಿ ಗಲಭೆಯ ಆರೋಪಿಗಳಿಗೆ ಆರ್ಥಿಕ ಮತ್ತು ಆಹಾರ ಕಿಟ್ ಒದಗಿಸಲು ಹೊರಟ ಕಾಂಗ್ರೆಸ್ ಶಾಸಕರೊಬ್ಬರನ್ನು ಪ್ರಶ್ನಿಸುವಷ್ಟೂ ಸಾಮರ್ಥ್ಯ ಕೆಪಿಸಿಸಿ ಅಧ್ಯಕ್ಷರಿಗೆ ಇಲ್ಲವೇ? ಜಮೀರ್ ಅವರಿಗೆ ನೋಟಿಸ್ ನೀಡಿದರೆ ಸಿದ್ದರಾಮಯ್ಯ ಬಣದಿಂದ ಆಕ್ರೋಶ ವ್ಯಕ್ತವಾಗುವ ಭಯ ಡಿಕೆ ಶಿವಕುಮಾರ್ ಅವರನ್ನು ಕಾಡುತ್ತಿದೆಯೇ? ಎಂದು ಬಿಜೆಪಿ ಪ್ರಶ್ನಿಸಿದೆ.
https://twitter.com/BJP4Karnataka/status/1520267314926866432
ಕೆಪಿಸಿಸಿ #ಭ್ರಷ್ಟಾಧ್ಯಕ್ಷ ಡಿಕೆಶಿ ಅವರೇ, ಅವರಿಗೂ ನಮಗೂ ಸಂಬಂಧವಿಲ್ಲ...
ಬೆಂಗಳೂರು: ಕನ್ನಡಿಗರಾದ ಲೆಫ್ಟಿನೆಂಟ್ ಜನರಲ್ ಬಗ್ಗವಳ್ಳಿ ಸೋಮಶೇಖರ ರಾಜು ಅವರು ಭಾರತೀಯ ಸೇನಾಪಡೆಯ ಉಪ ಮುಖ್ಯಸ್ಥರಾಗಿ ನೇಮಕ ಆಗಿರುವುದು ಕನ್ನಡಿಗರೆಲ್ಲರಿಗೂ ಹೆಮ್ಮೆಯ ಕ್ಷಣ & ಸಂಭ್ರಮದ ಸಂದರ್ಭ. ರಾಷ್ಟ್ರ ರಕ್ಷಣೆಯಲ್ಲಿ ಸದಾ ಮುಂಚೂಣಿಯಲ್ಲಿರುವ ಕರ್ನಾಟಕದ ಪರಂಪರೆಯ ಇನ್ನೊಂದು ಗರಿ ಜನರಲ್ ಬಿ.ಎಸ್.ರಾಜು ಅವರು ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
https://twitter.com/hd_kumaraswamy/status/1520248748630511616?s=20&t=8FHPHr5nepAVHV4JDGLywg
ಈ ಬಗ್ಗೆ...
ಹುಬ್ಬಳ್ಳಿ: ಪಿಎಸ್ʼಐ ಆಯ್ಕೆ ಪರೀಕ್ಷೆಯನ್ನೂ ರದ್ದು ಮಾಡಿ, ಮತ್ತೆ ಹೊಸದಾಗಿ ಪರೀಕ್ಷೆ ನಡೆಸುವ ರಾಜ್ಯ ಸರಕಾರದ ನಿರ್ಧಾರವನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರೋಧಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ತಮ್ಮನ್ನು ಭೇಟಿಯಾದ ಪಿಎಸ್ʼಐ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳ ಜತೆ ಚರ್ಚೆ ನಡೆಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಣದ ದುರಾಸೆಗೆ ಬಿದ್ದು ಕೆಲ ಧನ ಪಿಶಾಚಿಗಳು ತಪ್ಪು ಮಾಡಿದ್ದಾರೆ. ಸುಲಭವಾಗಿ...
ದಾವಣಗೆರೆ : ಜಗಳೂರು ತಾಲ್ಲೂಕಿನ 57 ಕೆರೆ ತುಂಬಿಸುವ ಯೋಜನೆ ಪೂರ್ಣಗೊಂಡಿದ್ದು, ಜೂನ್-ಜುಲೈ ಮಾಹೆಯೊಳಗೆ ನೀರನ್ನು ತುಂಬಿಸಿ, ಮಧ್ಯ ಕರ್ನಾಟಕದಲ್ಲಿ ನೀರಾವರಿಯ ಕ್ರಾಂತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಜಗಳೂರು ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಇಂದು ಮಾತನಾಡಿದ ಅವರು, ನಾಯಕರಾದ ಬಿ.ಎಸ್.ಯಡಿಯೂರಪ್ಪನವರು ಕೃಷ್ಣಾ ಮೇಲ್ದಂಡೆ...
ಬೆಂಗಳೂರು : ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ಯೋಜನೆಯಡಿ ರೋಗಿಗಳನ್ನು ಹೆಚ್ಚುವರಿ ಚಿಕಿತ್ಸೆಗಾಗಿ ಉನ್ನತ ಮಟ್ಟದ ಸರ್ಕಾರಿ ಆಸ್ಪತ್ರೆ ಅಥವಾ SAST ನೋಂದಾಯಿತ ಖಾಸಗಿ ಆಸ್ಪತ್ರೆಗೆ ಶಿಫಾರಸು ಮಾಡಲು 'ಅಂತರ್ಜಾಲ ರೆಫರಲ್ ವ್ಯವಸ್ಥೆ' ಜಾರಿ ತರಲಾಗಿದೆ.
ದ್ವಿತೀಯ ಮತ್ತು ತೃತೀಯ ಹಂತದ ಚಿಕಿತ್ಸೆ ಅಗತ್ಯವಿರುವ ರೋಗಿಗಳನ್ನು ಸಕಾಲದಲ್ಲಿ ಮೇಲ್ಪಟ್ಟದ ಉನ್ನತ ಚಿಕಿತ್ಸಾ ಆಸ್ಪತ್ರೆಗೆ ನಿರ್ದೇಶಿಸುವುದು...
ಕಲಬುರ್ಗಿ: ಪಿಎಸ್ಐ ನೇಮಕಾತಿ ಅಕ್ರಮ ಸಂಬಂಧ ನಿನ್ನೆ ಸಿಐಡಿ ಪೊಲೀಸರು ಪ್ರಮುಖ ಕ್ವೀನ್ ಪಿನ್ ದಿವ್ಯಾ ಹಾಗರಗಿ ಸೇರಿದಂತೆ 7 ಮಂದಿಯನ್ನು ಸಿಐಡಿ ಪೊಲೀಸರು ಬಂಧಿಸಿದ್ದರು. ಇದೀಗ ಅವರಿಗೆ ನ್ಯಾಯಾಲಯವು 11 ದಿನ ಸಿಐಡಿ ಪೊಲೀಸರ ವಶಕ್ಕೆ ನೀಡಿದೆ.
ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಪರೀಕ್ಷೆಯ ಕ್ವೀನ್ ಪಿನ್ ದಿವ್ಯಾ ಹಾಗರಗಿ ಸೇರಿದಂತೆ ಹಲವು...
ಬೆಂಗಳೂರು: ಭವ್ಯ ಭಾರತದ ಭವಿಷ್ಯವನ್ನು ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ಬರೆಯಲಿದೆ. ಈ ಮಹತ್ವದ ಕಾರ್ಯದ ಪ್ರಮುಖ ಪ್ರಕ್ರಿಯೆಗಳು, ಚಟುವಟಿಕೆಗಳು ಕರ್ನಾಟಕದಲ್ಲಿ ನಡೆಯುತ್ತಿರುವುದು ಹೆಮ್ಮೆಯ ಸಂಗತಿ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ ನಾಗೇಶ್ ಹೇಳಿದರು.
ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಶುಕ್ರವಾರ (ಏ.29) ಆಯೋಜಿಸಿದ್ದ...
ದಾವಣಗೆರೆ : ಕನಿಷ್ಟ ಬೆಂಬಲ ಯೋಜನೆಯಡಿ ಹೆಚ್ಚುವರಿ 2 ಲಕ್ಷ ಮೆಟ್ರಿಕ್ ಟನ್ ರಾಗಿಯನ್ನು ಕೇಂದ್ರದ ಅನುಮತಿ ಪಡೆದು ಖರೀದಿಸಲಾಗುವುದು. ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, 2 ಲಕ್ಷ ಟನ್ ಹಾಗೂ 1 ,14,000 ಟನ್ ರಾಗಿ ಖರೀದಿ ಮಾಡಲು...