ಬೆಂಗಳೂರು: ಭಾರತದ ಮುಂಚೂಣಿಯ ಅಮ್ಯೂಸ್ ಮೆಂಟ್ ಪಾರ್ಕ್ ಸರಣಿ ವಂಡರ್ ಲಾ ಹಾಲಿಡೇಸ್ ಲಿಮಿಟೆಡ್ ಮೇ 31ರವರೆಗೆ ಬೆಂಗಳೂರು ಪಾರ್ಕ್ ನಲ್ಲಿ `ಸಮ್ಮರ್‌ಲಾ ಫಿಯೆಸ್ಟಾ’ ಆಯೋಜಿಸಿದೆ.
ಬೇಸಿಗೆ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ವಂಡರ್‌ಲಾ ವಿಸ್ತಾರ ಶ್ರೇಣಿಯ ಚಟುವಟಿಕೆಗಳನ್ನು ಆಯೋಜಿಸಿದ್ದು ಅದರಲ್ಲಿ ಲೈವ್ ಕಾರ್ಯಕ್ರಮಗಳು, ಸ್ಟ್ರೀಟ್ ಫುಡ್ ಫೆಸ್ಟಿವಲ್ಸ್, ಫನ್‌ಗೇಮ್ಸ್ ಮತ್ತುಡಿಜೆ ಮುಂತಾದ ಹಲವು ಕಾರ್ಯಕ್ರಮಗಳಿದ್ದು ವಂಡರ್‌ಲಾದ ಲ್ಯಾಂಡ್...
ಬೆಂಗಳೂರು: ರಾಜ್ಯದ ಸಮಗ್ರ ನೀರಾವರಿ ಯೋಜನೆಗಳ ಜಾರಿಗೆ ಸಂಕಲ್ಪ ಮಾಡಿ ಜಾತ್ಯತೀತ ಜನತಾ ದಳ ಹಮ್ಮಿಕೊಂಡಿರುವ ಜನತಾ ಜಲಧಾರೆ- ಗಂಗಾ ರಥಯಾತ್ರೆಗೆ ನಾಳೆಯಿಂದ (ಏಪ್ರಿಲ್ 16) ಚಾಲನೆ ಸಿಗಲಿದೆ.
ಶನಿವಾರ ಬೆಳಗ್ಗೆ 11 ಗಂಟೆಗೆ ರಾಜ್ಯದ 15 ಜೀವ ನದಿಗಳ ಪುಣ್ಯಜಲವನ್ನು ಕಲಶಕ್ಕೆ ತುಂಬಿಕೊಳ್ಳುವ ಕಾರ್ಯಕ್ರಮ ನಡೆಯಲಿದ್ದು, ಈಗಾಗಲೇ ಹದಿನೈದು ಗಂಗಾ ರಥಗಳು ನಿಗಧಿತ ಸ್ಥಳಗಳನ್ನು...
ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡೋ ಮುನ್ನಾ, ಇಂದು ಸಚಿವ ಈಶ್ವರಪ್ಪ ದೇವಸ್ಥಾನಗಳಿಗೆ ತೆರಳಿ, ದೇವರಿಗೆ ಪೂಜೆ ಸಲ್ಲಿಸಿದರು. ತಮ್ಮ ಮನೆದೇವರು ಅಲ್ಲದೇ, ನಗರದ ಗಣಪತಿ ದೇವಸ್ಥಾನಕ್ಕೂ ತೆರಳಿ ಪೂಜೆ ನೆರವೇರಿಸಿದರು. ಈ ವೇಳೆ ಅವರಿಗೆ ಪ್ರಕರಣದಲ್ಲಿ ಆರೋಪ ಮುಕ್ತರಾಗಿ, ಮತ್ತೆ ಸಚಿವರಾಗೋ ಮುನ್ಸೂಚನೆ, ಶುಭ ಸೂಚನೆಯೊಂದು...
ಬೆಂಗಳೂರು: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆಯಿಂದಾಗಿ ಕುಟುಂಬವು ಸಂಕಷ್ಟಕ್ಕೆ ಸಿಲುಕಿದೆ. ಹೀಗಾಗಿ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 1 ಕೋಟಿ ಪರಿಹಾರ ಘೋಷಿಸಬೇಕು. ಅವರ ಪತ್ನಿಗೆ ಸರ್ಕಾರಿ ನೌಕರಿ ಕೊಡಬೇಕು ಎಂಬುದಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸಂತೋಷ್ ಪಾಟೀಲ್ ಮಾಡಿರುವ ಕೆಲಸ ಕಾಮಗಾರಿ ಬಿಲ್ ಕ್ಲಿಯರ್ ಮಾಡ್ಬೇಕು. ನಾವು ನಾಳೆಯಿಂದ ಐದು...
ಬೆಂಗಳೂರು: 'ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಪ್ರೇರಣೆ ನೀಡಿರುವ ಸಚಿವ ಈಶ್ವರಪ್ಪ ಅವರು ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳುವ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಅವರು ಕಳಂಕಿತರ ರಕ್ಷಣೆಗೆ ಮುಂದಾಗಿದ್ದಾರೆ. ಆ ಮೂಲಕ ಅವರು ಬಹುದೊಡ್ಡ ಅಪರಾಧ ಮಾಡುತ್ತಿದ್ದಾರೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಿಡಿಕಾರಿದ್ದಾರೆ.
ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ವಿಧಾನಸೌಧದಲ್ಲಿ...
ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ನೇರ ಹೊಣೆಗಾರರಾಗಿರುವ ಕೆ.ಎಸ್ ಈಶ್ವರಪ್ಪ ಅವರು ಕಡೆಗೂ ತಮ್ಮ ತಪ್ಪಿನ ಅರಿವಾಗಿ ಇಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಪ್ರತಿಭಟನೆಗೆ ಸಂದ ಜಯ ಎಂಬುದಾಗಿ ಶಾಸಕ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.
https://twitter.com/BZZameerAhmedK/status/1514837429529706500?t=yk4AfwgWck6jnriLOOGRJw&s=19
ಇಂದು ಸರಣಿ ಟ್ವಿಟ್ ನಲ್ಲಿ ಅವರು, ಕೆ.ಎಸ್ ಈಶ್ವರಪ್ಪ ಅವರಿಂದ...
ಹುಬ್ಬಳ್ಳಿ : ಕಾಂಗ್ರೆಸ್ ಅವರು ವಕೀಲರು ಹಾಗೂ ನ್ಯಾಯಮೂರ್ತಿಗಳಾಗುವ ಅವಶ್ಯಕತೆ ಇಲ್ಲ. ಸಂತೋಷ್ ಆತ್ಮಹತ್ಯೆ ಪ್ರಕರಣ ಮುಕ್ತವಾಗಿ ತನಿಖೆಯಾಗಲು ಬಿಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಈಶ್ವರಪ್ಪ ಅವರನ್ನು ಬಂಧಿಸಬೇಕೆಂಬ ವಿರೋಧ ಪಕ್ಷಗಳ ಒತ್ತಾಯದ ಬಗ್ಗೆ ಪ್ರತಿಕ್ರಿಯೆ ನೀಡಿ ಪೊಲೀಸರಿಗೆ ತಮ್ಮ ಕೆಲಸ ಮಾಡಲು...
ರಾಯಚೂರು: ಬಿಸಿಲನಾಡು ನಾಡು ಎಂದು ಹೆಸರು ಪಡೆದ ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಣೆ ಎಗ್ಗಿಲದೆ ನಡೆಯುತ್ತಿದೆ. ಆದ್ರೆ ಇದು ಅಧಿಕಾರಿಗಳ ಗಮನಕ್ಕೆ ಇದ್ದರೂ ಮೌನಕ್ಕೆ ಶರಣಾಗಿದ್ದಾರೆ. ಆ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಲಾರಿ ಇಂದು ಓರ್ವ ಯುವಕನನ್ನು ಬಲಿ ಪಡೆದಿದೆ. ಎಲ್ಲಿ ಅಂತ ಮುಂದೆ ಸುದ್ದಿ ಓದಿ..
ಹೆಣದ ಮುಂದೆ ಆಳುತ್ತ ಕುಳಿತ ಕುಟುಂಬಸ್ಥರು,...
ಬೆಂಗಳೂರು: ಪಕ್ಷಕ್ಕೆ ಮುಜುಗರವಾಗಬಾರದು ಎಂಬುದಾಗಿ ತುಂಬಾ ಯೋಚನೆ ಮಾಡಿ ಈಶ್ವರಪ್ಪ ಸಚಿವಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಅವರ ರಾಜೀನಾಮೆಗೆ ಹೈಕಮಾಂಡ್ ನಿಂದ ಯಾವುದೇ ಒತ್ತಡ ಇರಲಿಲ್ಲ ಎಂಬುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಜೆ ಈಶ್ವರಪ್ಪ ನನಗೆ ದೂರವಾಣಿ ಕರೆ ಮಾಡಿದ್ದರು. ಆ ವೇಳೆ ರಾಜೀನಾಮೆ ಕೊಡುತ್ತೇನೆ ಅಂತಾ...
ಬೆಂಗಳೂರು: ಕೊನೆಗೂ ಸಚಿವ ಕೆ.ಎಸ್ ಈಶ್ವರಪ್ಪ ಒತ್ತಡಕ್ಕೆ ಮಣಿದಿದ್ದಾರೆ. ಈ ಮೂಲಕ ಮೂರು ದಿನಗಳ ಬಳಿಕ ಪಟ್ಟು ಸಡಿಲಿಸಿ, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಹೌದು.. ಕಳೆದ ಮೂರು ದಿನಗಳಿಂದ ರಾಜೀನಾಮೆ ನೀಡದೆ ದೂರ ಉಳಿದಿದ್ದ ಕೆಎಸ್ ಈಶ್ವರಪ್ಪ ಅವರ ನಡೆಯಿಂದ, ಸರ್ಕಾರಕ್ಕೆ ತೀವ್ರ ಮುಜುಗರವನ್ನು ತಂದೊಡ್ಡಿತ್ತು. ಅಲ್ಲದೇ ವಿಪಕ್ಷ ಕಾಂಗ್ರೆಸ್...