ಆಳಂದ ವಿಧಾನಸಭಾ ಕ್ಷೇತ್ರದಲ್ಲಿ 2023ರ ಚುನಾವಣೆಯಲ್ಲಿ ನಡೆದಿದ್ದ ‘ವೋಟ್ ಚೋರಿ’ ಪ್ರಕರಣದಲ್ಲಿ ಮಹತ್ವದಟ್ವಿಸ್ಟ್ ಸಿಕ್ಕಿದೆ. ಪ್ರತಿ ಮತದಾರರ ಹೆಸರನ್ನು ಅಳಿಸಲು ₹80 ರೂ. ಪಡೆದು, ದಲಿತ ಮತ್ತು ಅಲ್ಪಸಂಖ್ಯಾತ ಸಮುದಾಯದ ಸುಮಾರು 6,000 ಮತಗಳನ್ನು ಅಳಿಸಲು ಯತ್ನಿಸಿದ್ದ ಆರೋಪಿಗಳು ಈ ಪ್ರಕರಣದ ಕೇಂದ್ರಬಿಂದುವಾಗಿದ್ದಾರೆ.
ಪ್ರಮುಖ ಆರೋಪಿಗಳಾಗಿ ಮೊಹಮ್ಮದ್ ಅಶ್ಫಾಕ್ ಮತ್ತು ಮೊಹಮ್ಮದ್ ಅಕ್ರಂನನ್ನು ಗುರುತಿಸಲಾಗಿದೆ. ಪ್ರಮುಖ...
ರಾಜ್ಯದಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮೋಡ ಕವಿದ ವಾತಾವರಣ ಇದ್ದು, ಬಿರುಗಾಳಿಯೊಂದಿಗೆ ಗುಡುಗು-ಮಿಂಚು ಸಹಿರ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮತ್ತು 27 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅಕ್ಟೋಬರ್ 27ರವರೆಗೆ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 45ರಿಂದ 55ಕಿಲೋ ಮೀಟರ್ ವೇಗದಲ್ಲಿ ಬಿರುಗಾಳಿ...
ಸಿದ್ದರಾಮಯ್ಯ ಪುತ್ರ ಯತೀಂದ್ರ ಬಳಿಕ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಸರದಿ. ಸಿಎಂ ಬದಲಾವಣೆ ಬಗ್ಗೆ ಯತೀಂದ್ರ ಸ್ಫೋಟಕ ಹೇಳಿಕೆ ನೀಡಿದ್ರು. ಈಗ ಶಾಮನೂರು ಶಿವಶಂಕರಪ್ಪ ಪುತ್ರ ಮಲ್ಲಿಕಾರ್ಜುನ್ ಕೂಡ ಕುತೂಹಲಕಾರಿಯಾಗಿ ಮಾತನಾಡಿದ್ದಾರೆ. ದಾವಣಗೆರೆಯ ಸಭೆಯೊಂದ್ರಲ್ಲಿ ಮಾರ್ಮಿಕವಾಗಿ ಉತ್ತರ ನೀಡಿದ್ದಾರೆ.
ಕೋಡಿಹಳ್ಳಿ ಶ್ರೀ ನಿಮ್ಮ ಮನೆಗೆ ಭೇಟಿ ನೀಡಿದ್ದಾರೆ ಅಂದ್ರೆ, ನೆಕ್ಸ್ಟ್ ನೀವು ಸಿಎಂ ಆಗಬಹುದು ಎಂಬ...
ಬೀದರ್ ಜಿಲ್ಲೆಯ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಯ ನಿರ್ದೇಶಕರ ಚುನಾವಣೆಯಲ್ಲಿ, ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿಗೆ ಹಿನ್ನಡೆಯಾಗಿದ್ದು ತೀವ್ರ ಮುಖಭಂಗವಾಗಿದೆ.
ಹತ್ತು ವರ್ಷಗಳ ನಂತರ ನಡೆದ ಚುನಾವಣೆಯಲ್ಲಿ, 13 ಸ್ಥಾನಗಳೂ ಜೆಡಿಎಸ್ ಬೆಂಬಲಿತರಿಗೆ ಸಿಕ್ಕಿದೆ. ನಾಗಮಾರಪಳ್ಳಿ ಕುಟುಂಬದ ಪಾರುಪತ್ಯ ಮತ್ತೊಮ್ಮೆ ಶುರುವಾಗಿದೆ. ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹಿನ್ನಡೆ ಸಾಧಿಸಿದ್ದಾರೆ.
ಜೆಡಿಎಸ್ ನಾಯಕರಾದ ಸೂರ್ಯಕಾಂತ್...
ರಾಜ್ಯ ಕಾಂಗ್ರೆಸ್ನಲ್ಲಿ ಸಿಎಂ ಬದಲಾವಣೆ ಮತ್ತು ಸಂಪುಟ ಪುನಾರಚನೆ ವಿಚಾರ, ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರ ಧಗಧಗಿಸುತ್ತಿದೆ. ಈ ಮಧ್ಯೆ ಜೆಡಿಎಸ್ ಪಾಳಯಲ್ಲೂ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರ ಮುನ್ನೆಲೆಗೆ ಬಂದಿದೆ. ಈ ಬಗ್ಗೆ ಕೇಂದ್ರ ಸಚಿವ, ಹಾಲಿ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
ಸದ್ಯಕ್ಕೆ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆ ಇಲ್ಲ. ಈ ವಿಷಯ...
ಎಲೆಕ್ಟ್ರಾನಿಕ್ ಸಿಟಿ, ವೈಟ್ಫೀಲ್ಡ್ ಸೇರಿ ಬೆಂಗಳೂರಿನ ಹೊರ ವಲಯದ ಹಲವು ಪ್ರದೇಶಗಳನ್ನು, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ ತರಲಾಗುವುದು. ಹೀಗಂತ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಹಲವು ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ್ದು, ಈ ವಿಷಯದ ಕುರಿತು ಚರ್ಚಿಸಲು ಅಧಿಕಾರಿಗಳೊಂದಿಗೆ ಸಭೆ ಕರೆಯಲಾಗಿದೆ.
ಮುಂಬರುವ...
ತುಮಕೂರು:ರಾಜ್ಯದ ಹಿರಿಯ ಹಾಗೂ ಅನುಭವಿ ರಾಜಕಾರಣಿಗಳಲ್ಲಿ ಒಬ್ಬರಾಗಿರುವ ಶಿರಾ ಕ್ಷೇತ್ರದ ಶಾಸಕ ಮತ್ತು ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರರಿಗೆ ಬರುವ ನವೆಂಬರ್ನಲ್ಲಿ ನಡೆಯಲಿರುವ ಸಚಿವ ಸಂಪುಟ ವಿಸ್ತರಣೆಯಲ್ಲಿ ಪ್ರಭಲ ಸಚಿವ ಸ್ಥಾನ ನೀಡಬೇಕೆಂದು ಶಿರಾ ತಾಲ್ಲೂಕು ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದಾರೆ.
ಹೊಸೂರು ಗ್ರಾಮದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶಿರಾ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ...
ಮೈಸೂರು: ಭ್ರೂಣ ಪತ್ತೆ ಹಾಗೂ ಹತ್ಯೆ ಎಂಬ ಕಾನೂನುಬಾಹಿರ ಕೃತ್ಯಕ್ಕೆ ಮೈಸೂರಿನಲ್ಲೊಂದು ಗ್ಯಾಂಗ್ ಬಲೆಯೊಡ್ಡಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಮೆಲ್ಲಹಳ್ಳಿ ಸಮೀಪದ ಹುನಗನಹಳ್ಳಿ ಗ್ರಾಮದಲ್ಲಿರುವ ಐಶಾರಾಮಿ ಬಂಗಲೆಯಲ್ಲಿ ದಾಳಿ ನಡೆಸಿ, ಓರ್ವ ಮಹಿಳೆ ಸೇರಿ ಐವರನ್ನು ವಶಕ್ಕೆ ಪಡೆದಿದ್ದಾರೆ.
ಈ ಬಂಗಲೆಯಲ್ಲೇ ಗರ್ಭಿಣಿಯರ ಭ್ರೂಣ ಲಿಂಗ ಪತ್ತೆ ಮಾಡಿ, ಹೆಣ್ಣು ಭ್ರೂಣ ಎಂದು ತಿಳಿದರೆ ಹತ್ಯೆ...
ತಮ್ಮ ವಿರುದ್ಧದ ಪೋಕ್ಸೋ ಕೇಸ್ ರದ್ದು ಮಾಡುವಂತೆ ಕೋರಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ರು. ಇಂದು ವಿಚಾರಣೆ ನಡೆಸಿದಂತಹ ಹೈಕೋರ್ಟ್ ಪೀಠ ಆದೇಶ ಕಾಯ್ದಿರಿಸಿದೆ. ನ್ಯಾಯಮೂರ್ತಿ ಎಂಐ ಅರುಣ್ ಪೀಠದಲ್ಲಿ ವಿಚಾರಣೆ ನಡೆದಿದ್ದು ಆದೇಶ ಕಾಯ್ದಿರಿಸಲಾಗಿದೆ.
ಸಂತ್ರಸ್ತೆಯ ಹೇಳಿಕೆ ಬಿಟ್ಟು ಉಳಿದ ಸಾಕ್ಷ್ಯಗಳನ್ನು ಕೋರ್ಟ್ ಪರಿಗಣಿಸಿಲ್ಲ. ಯಡಿಯೂರಪ್ಪ ಮನೆಯಲ್ಲಿದ್ದ ಸಾಕ್ಷಿಗಳ ಹೇಳಿಕೆ,...