Sunday, September 20, 2026

ಜಿಲ್ಲಾ ಸುದ್ದಿಗಳು

JDS ನಲ್ಲಿ ಭಾರಿ ಟ್ವಿಸ್ಟ್? JTD ‘ಹೊಸ’ ತಂತ್ರ!

ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರನ್ನು ಹಿರಿಯ ಜೆಡಿಎಸ್ ನಾಯಕ ಜಿ. ಟಿ. ದೇವೇಗೌಡ ಅಚಾನಕ್ ಭೇಟಿಯಾಗಿರುವುದು ರಾಜ್ಯ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಇತ್ತೀಚಿನ ರಾಜಕೀಯ ಬೆಳವಣಿಗೆಗಳ ನಡುವೆ ನಡೆದ ಈ ಭೇಟಿ ಹಲವು ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ. ಬೆಂಗಳೂರಿನಲ್ಲಿ ನಡೆದ ಈ ಭೇಟಿಯ ವೇಳೆ ಇಬ್ಬರು ನಾಯಕರು ಕೆಲಕಾಲ ರಾಜಕೀಯ ಬೆಳವಣಿಗೆಗಳು, ಪಕ್ಷದ ಒಳಾಂಗಣ...

ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಶಿರಸ್ತೇದಾರ!

ತಹಶೀಲ್ದಾರ್ ಕಚೇರಿಯಲ್ಲಿ ಭೂಮಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿರಸ್ತೇದಾರ್ ಸುರೇಶ್ ಅರಕೇರಿ ಅವರು ಖಾತೆ ಬದಲಾವಣೆ ಮಾಡಿಕೊಡಲು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ನಡೆದಿದೆ. ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲೂಕಿನ ದುಂಡಸಿ ಗ್ರಾಮದ ಹಜರತ್‌ಅಲಿ ತಂದೆ ಇಮಾಮ್‌ಸಾಬ್ ಅರಳಿಕಟ್ಟಿ ಅವರು ತಮ್ಮ ಭೂಮಿ ಖಾತೆ ಬದಲಾವಣೆಗಾಗಿ ಅರ್ಜಿ...

ಲಾರಿಗೆ ಕಾರು ಡಿಕ್ಕಿ! ಸ್ಥಳದಲ್ಲೇ ಇಬ್ಬರು ದುರ್ಮರಣ

ಹುಬ್ಬಳ್ಳಿಯಲ್ಲಿ ನಿಂತಿದ್ದ ಲಾರಿಗೆ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿ ಗ್ರಾಮೀಣ ಠಾಣೆ ವ್ಯಾಪ್ತಿಯ ಶಿರಗುಪ್ಪಿಯಲ್ಲಿ ನಡೆದಿದೆ. ಇಂದು ಬೆಳಗಿನ ಜಾವ ಗದಗ ಕಡೆಯಿಂದ ಹುಬ್ಬಳ್ಳಿಗೆ ಬರುತ್ತಿದ್ದ ಲಾರಿ ರಸ್ತೆ ಬದಿಯಲ್ಲಿ ಹಿಟಾಚಿ ಯಂತ್ರದೊಂದಿಗೆ ನಿಂತಿತ್ತು. ಇದೇ ವೇಳೆ ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ಲಾರಿಗೆ ಹಿಂಬದಿಯಿಂದ...

ಕೊಪ್ಪಳದಲ್ಲಿ ‘ನೀಟ್’ ಅಕ್ರಮದ ವಿರುದ್ಧ ಸಿಡಿದೆದ್ದ ಯುವಶಕ್ತಿ!

ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಎಐಡಿಎಸ್‌ಒ ನೇತೃತ್ವದಲ್ಲಿ ಕೊಪ್ಪಳದ ಬಸ್ ನಿಲ್ದಾಣದ ಕನಕದಾಸ ವೃತ್ತದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಈ ವೇಳೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಯನ್ನು ರದ್ದುಗೊಳಿಸಬೇಕು ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಾರಣರಾದವರ ವಿರುದ್ಧ ಕಠಿಣ ಶಿಕ್ಷೆ ವಿಧಿಸಬೇಕು ಎಂದು...

6 ರಾಜ್ಯಗಳಿಗೆ ಡೈರೆಕ್ಟ್ ಕನೆಕ್ಷನ್! 16 ಬೋಗಿಗಳ ಸೂಪರ್ ಟ್ರೈನ್!

ಹುಬ್ಬಳ್ಳಿ–ಯೋಗ ನಗರಿ ಋಷಿಕೇಶ ನಡುವಿನ ರೈಲು ಪ್ರಯಾಣಿಕರಿಗೆ ರೈಲ್ವೆ ಮಂಡಳಿ ಮಹತ್ವದ ಸಿಹಿ ಸುದ್ದಿ ನೀಡಿದೆ. ಈ ಮಾರ್ಗದಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿದ್ದ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ಸೇವೆಯನ್ನು ಇದೀಗ ಖಾಯಂ (ನಿಯಮಿತ) ರೈಲು ಸೇವೆಯಾಗಿ ಪರಿವರ್ತಿಸಲಾಗಿದೆ. ಇದರಿಂದ ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ, ಮಧ್ಯಪ್ರದೇಶ, ಉತ್ತರ ಪ್ರದೇಶ, ದೆಹಲಿ ಮತ್ತು ಉತ್ತರಾಖಂಡ ರಾಜ್ಯಗಳ ನಡುವೆ ಸಂಚಾರ...

ಧಾರವಾಡದಲ್ಲಿ ನಡುಕ ಹುಟ್ಟಿಸಿದ್ದ ಆ ಕಿಲಾಡಿ ಕಳ್ಳರು ಕೊನೆಗೂ ಲಾಕ್

ಧಾರವಾಡ ನಗರದಲ್ಲಿ ನಡೆದ ಸರ ಕಳ್ಳತನ ಹಾಗೂ ಮನೆ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಧಾರವಾಡ ಶಹರ ಪೊಲೀಸ್ ಠಾಣೆಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಹಲವು ದಿನಗಳಿಂದ ಆತಂಕ ಮೂಡಿಸಿದ್ದ ಕಳ್ಳತನ ಪ್ರಕರಣಗಳಿಗೆ ಬ್ರೇಕ್ ಹಾಕಲಾಗಿದೆ. ಬಂಧಿತರನ್ನು ಹುಬ್ಬಳ್ಳಿ ಮೂಲದ ಅಸೀಫ್ ಕಾಶಿಂಸಾಬ ಬೇಗ್ ಮತ್ತು ಅಮ್ಮಿನಭಾವಿ ಗ್ರಾಮದ ಗುರುಪ್ರಸಾದ ಶಿವಾನಂದ...

ನವಲಗುಂದ ಠಾಣೆಗೆ ಲೇಟೆಸ್ಟ್ ಬುಲೇರೊ ಹಸ್ತಾಂತರ – ಗಸ್ತು ತಿರುಗಲಿದೆ ಸಿಂಗಂ ಟೀಮ್!

ನವಲಗುಂದದಲ್ಲಿ ಪೊಲೀಸ್ ಇಲಾಖೆಯ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಉದ್ದೇಶದಿಂದ ಶಾಸಕರ ಕ್ಷೇತ್ರಾಭಿವೃದ್ಧಿ ನಿಧಿಯಡಿ ನೂತನ ಬುಲೇರೊ ವಾಹನವನ್ನು ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಯಿತು. ಈ ಮೂಲಕ ತುರ್ತು ಸೇವೆಗಳು ಇನ್ನಷ್ಟು ವೇಗವಾಗಿ ಜನರಿಗೆ ತಲುಪಲು ಸಹಾಯವಾಗಲಿದೆ ಎಂದು ನಿರೀಕ್ಷಿಸಲಾಗಿದೆ. ವಾಹನ ಹಸ್ತಾಂತರ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಎನ್. ಎಚ್. ಕೋನರೆಡ್ಡಿ ಅವರು, ಜನರ ಭದ್ರತೆ ಮತ್ತು ಕಾನೂನು ಸುವ್ಯವಸ್ಥೆ...

ಸಿಂದಗಿ ಮಳೆ ದುರಂತ: ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಸಾವು!

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಮೊರಟಗಿ ಗ್ರಾಮದಲ್ಲಿ ಮೇ 14ರ ಗುರುವಾರ ತಡರಾತ್ರಿ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಸುರಿದ ಭಾರೀ ಮಳೆಯ ನಡುವೆ  ಭೀಕರ ದುರಂತ ಸಂಭವಿಸಿದೆ. ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಗುರುನಾಥ ಬಡಿಗೇರ (35), ಜ್ಯೋತಿ ಬಡಿಗೇರ (28), ಕಾಳಮ್ಮ ಬಡಿಗೇರ (13) ಹಾಗೂ ಕೀರ್ತಿ...

ಕೊಪ್ಪಳದಲ್ಲಿ ನಡುಕ ಹುಟ್ಟಿಸಿದ ಲೈವ್ ಆಕ್ಸಿಡೆಂಟ್!

ಕೊಪ್ಪಳ ಜಿಲ್ಲೆಯ ತುಂಗಭದ್ರಾ ಸೇತುವೆ ಬಳಿ ನಡೆದ ಭೀಕರ ರಸ್ತೆ ಅಪಘಾತ ನಡೆದಿದೆ. ಈ ರಸ್ತೆ ಅಪಘಾತದಲ್ಲಿ 6 ಮಂದಿ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ಟ್ರ್ಯಾಕ್ಟರ್ ಮತ್ತು ಟ್ಯಾಂಕರ್ ನಡುವೆ ಸಂಭವಿಸಿದ ಡಿಕ್ಕಿಯ ನಂತರ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ನದಿಗೆ ಉರುಳಿದ ಪರಿಣಾಮ ಈ ದುರಂತ ಸಂಭವಿಸಿದೆ. ಮಾಹಿತಿಯ ಪ್ರಕಾರ, ಹುಲಿಗೆಮ್ಮ ಜಾತ್ರೆಗೆ ತೆರಳುತ್ತಿದ್ದ ಟ್ರ್ಯಾಕ್ಟರ್‌ಗೆ...

ಹೊಸ ಜಿಲ್ಲಾ ಪಂಚಾಯತ್ ಸಿಇಒ – ಶುಭಂ ಶುಕ್ಲಾ ಅಧಿಕಾರ ಸ್ವೀಕಾರ

ಹಾಸನ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಆಗಿ ಹೊಸ ನೇಮಕಾತಿ ನಡೆದಿದ್ದು, ಐಎಎಸ್ ಅಧಿಕಾರಿ ಶುಭಂ ಶುಕ್ಲಾ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ. ಈ ಹಿಂದೆ ಹಾಸನ ZP ಸಿಇಒ ಆಗಿದ್ದ ಅಧಿಕಾರಿಯನ್ನು ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಶುಭಂ ಶುಕ್ಲಾ ಅಧಿಕಾರ ಸ್ವೀಕರಿಸಿದ್ದಾರೆ. ಸರ್ಕಾರಿ ಆದೇಶದ ಪ್ರಕಾರ, ಸ್ಥಳೀಯ ಆಡಳಿತ,...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img