ನವದೆಹಲಿ: ಇಷ್ಟು ದಿನ ಬಿಸಿಲಿನಿಂದ ತತ್ತರಿಸಿದ್ದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭರ್ಜರಿ ಮಳೆಯಾಗಿದೆ. ಇಡೀ ರಾತ್ರಿ ಸುರಿದ ಭಾರೀ ಮಳೆಯ ಪರಿಣಾಮವಾಗಿ ಶುಕ್ರವಾರ ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1 ರಲ್ಲಿ ಛಾವಣಿ ಕುಸಿದು ಓರ್ವ ಸಾವನ್ನಪ್ಪಿದ್ದಾರೆ. ಆರು ಮಂದಿಗೆ ಗಾಯಗಳಾಗಿವೆ.
ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶಾಕಿಂಗ್ ಘಟನೆ ಸಂಭವಿಸಿದೆ. ಇಲ್ಲಿ,...
ರಾಜ್ಯ ರಾಜಧಾನಿ ಬೆಂಗಳೂರಿಗೆ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಗತ್ಯವಿದೆ. ಬೆಂಗಳೂರಲ್ಲಿ ಮತ್ತೊಂದು ಏರ್‌ಪೋರ್ಟ್ ನಿರ್ಮಾಣಕ್ಕೆ ಸ್ಥಳ ಹುಡುಕಾಟ, ಮೂಲಸೌಕರ್ಯ ಅಭಿವೃದ್ದಿಗೆ ಸರ್ಕಾರ ಪ್ಲ್ಯಾನ್ ಮಾಡುತ್ತಿದೆ. ವೇಗವಾಗಿ ಬೆಳೆಯುತ್ತಿರುವ ಮತ್ತು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿರುವ ಬೆಂಗಳೂರು ಮಹಾನಗರದ ಮುಂಬರುವ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಮತ್ತೊಂದು ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧ ಮೂಲಸೌಕರ್ಯ ಅಭಿವೃದ್ಧಿ ಸಚಿವ...
ಮಹಿಳೆಯರಿಗೆ ಸಮಾಜದಲ್ಲಿ ಪುರುಷರಷ್ಟೇ ಸಮಾನ ಹಕ್ಕು ಮತ್ತು ಗೌರವ ನೀಡಬೇಕು ಎನ್ನುವ ಸಾಕಷ್ಟು ವರ್ಷಗಳ ಹೋರಾಟದ ನಂತರ ಮಹಿಳೆಯರಿಗೆ ತಕ್ಕ ಸ್ಥಾನ ಮಾನಗಳು ದೊರೆಯುತ್ತಿದೆ. ಉದ್ಯೋಗದಲ್ಲಿಯೂ ಮಹಿಳೆಯರಿಗೆ ಸಮಾನ ಅವಕಾಶಗಳನ್ನು ಪ್ರತಿಪಾದಿಸುತ್ತಿರುವ ನಡುವೆಯೇ ಆ್ಯಪಲ್ ಐಫೋನ್ ಗಳನ್ನು ಅಸೆಂಬಲ್ ಮಾಡಿಕೊಡುವ ತೈವಾನ್ ಮೂಲದ ಫಾಕ್ಸ್‌ಕಾನ್ ಕಂಪನಿಯ ಚೆನ್ನೈ ಶಾಖೆಯಲ್ಲಿ ವಿವಾಹಿತ ಮಹಿಳೆಯರಿಗೆ ಉದ್ಯೋಗ ನೀಡದಿರುವ...
ಲೋಕಸಭೆಯ ಮೊದಲ ಅಧಿವೇಶನ 4ನೇ ದಿನ ಲೋಕಸಭೆ ಮತ್ತು ರಾಜ್ಯಸಭೆಗಳ ಜಂಟಿ ಸದನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮಾತನಾಡಿದ್ರು.
ದೇಶದ ಯುವಜನತೆ ದೊಡ್ಡ ಕನಸು ಕಾಣಲು ಮತ್ತು ಅವುಗಳನ್ನು ಸಾಧಿಸಲು ಅನುವು ಮಾಡಿಕೊಡುವ ವಾತಾವರಣವನ್ನು ಸೃಷ್ಟಿಸಲು ಸರ್ಕಾರ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ಸಂವಿಧಾನದ ಮೇಲಿನ ದಾಳಿಯ ಅತಿ ದೊಡ್ಡ ಕರಾಳ ಅಧ್ಯಾಯ ಎಂದು ಹೇಳಿದ...
ಎಲ್ಲರಿಗೂ ಮದುವೆಯಾಗಬೇಕು ಅಂತ ಒಮ್ಮೆಯಾದರೂ ಅನಿಸುತ್ತದೆ, ಅಲ್ಲವೇ? ಕೆಲವರಿಗೆ ಒಂದಲ್ಲಾ ಒಂದು ವಯಸ್ಸಿನಲ್ಲಿ ಅನ್ನಿಸಿದರೆ ಮತ್ತೆ ಕೆಲವೊಬ್ಬರಿಗೆ ವಯಸ್ಸಲ್ಲದ ವಯಸ್ಸಿನಲ್ಲಿ ಅನ್ನಿಸುತ್ತದೆ. ಆದ್ರೆ, ಇತ್ತೀಚಿನ ದಿನಗಳಲ್ಲಿ ಯುವಕರಿಗೆ ಹೆಣ್ಣು ಸಿಗುತ್ತಿಲ್ಲ. ಅದಕ್ಕಾಗಿ ನಾನಾ ಜ್ಯೋತಿಷಿಗಳ ಬಳಿ ಹೋಗಿ ಸಲಹೆ ಕೇಳೋದು, ಪೂಜೆ- ಪುನಸ್ಕಾರ ಮಾಡೋದು, ಮ್ಯಾಟ್ರಿಮಾನಿ ವೆಬ್ಸೈಟ್ಗಳಲ್ಲಿ ತಮ್ಮ ಬಯೋಡಾಟವನ್ನು ಹಾಕಿಕೊಳ್ಳೋದು ಸಾಮಾನ್ಯವಾಗಿದೆ.
ಮದುವೆ ಸ್ವರ್ಗದಲ್ಲಿ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿದ್ದು, ಜೂನ್ 29ರಂದು ಪ್ರಧಾನಿ ನರೇಂದ್ರ ಮೋಧಿಯವರನ್ನು ಬೆಟಿ ಮಾಡಲಿದ್ಧಾರೆ. ಜೂ. 29 ರ ಬೆಳಗ್ಗೆ 8.00ಗಂಟೆಗೆ ಪ್ರಧಾನಿಗಳ ಭೇಟಿಗೆ ಸಮಯ ನಿಗದಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ...
ಮಂಬೈನ ಕಾಲೇಜು ಆವರಣದಲ್ಲಿ ಹಿಜಾಬ್, ನಖಾಬ್, ಬುರ್ಖಾ, ಕ್ಯಾಪ್ ಇತ್ಯಾದಿಗಳನ್ನು ಧರಿಸುವುದನ್ನು ನಿಷೇಧ ಮಾಡಲಾಗಿತ್ತು. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರಶ್ನಿಸಿ ಮಹಿಳಾ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ. ಮುಂಬೈ ನಗರದ ಕಾಲೇಜೊಂದು ತೆಗೆದುಕೊಂಡ ನಿರ್ಧಾರದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದ ನ್ಯಾಯಮೂರ್ತಿಗಳಾದ ಎಎಸ್‍ಚಂದೂರ್ಕರ್ ಮತ್ತು ರಾಜೇಶ್ ಪಾಟೀಲ್ ಅವರ ವಿಭಾಗೀಯ ಪೀಠವು ಕಾಲೇಜು...
ಸಾಮಾನ್ಯವಾಗಿ ನೆಗಡಿ-ಜ್ವರ, ತಲೆನೋವು, ಮೈಕೈ ನೋವು ಬಂದಾಗ ಪ್ಯಾರಾಸಿಟಮಾಲ್ ಮಾತ್ರೆಗಳನ್ನು ತೆಗೆದುಕೊಳ್ಳಲಾಗುತ್ತದೆ. ಆದರೆ ಇದೇ ಪ್ಯಾರಾಸಿಟಮಾಲ್ ಜೀವಕ್ಕೆ ಮಾರಕವಾಗಬಹುದು ಎಂಬ ವಿಷಯ ಬೆಳಕಿಗೆ ಬಂದಿದೆ.
ಔಷಧ ನಿಯಂತ್ರಣ ಮಂಡಳಿಯು ಜ್ವರ ಮತ್ತು ಇತರೆ ರೋಗಗಳನ್ನು ನಿಯಂತ್ರಿಸಲು ಬಳಸಲಾಗುವ ಕೆಲವು ಜೀವರಕ್ಷಕ ಔಷಧಗಳನ್ನು ಭಾರತದಾದ್ಯಂತ ಗುಣಮಟ್ಟದ ಔಷಧಿಗಳಲ್ಲ ಎಂದು ಕಂಡುಹಿಡಿದಿದೆ. ವ್ಯಾಪಕವಾಗಿ ಬಳಕೆಯಲ್ಲಿರುವ ಪ್ಯಾರಾಸಿಟಮಾಲ್, ಪ್ಯಾಂಟಾಪ್ರಜೋಲ್ ಸೇರಿದಂತೆ...
ದೇಶದ ಅತ್ಯಂತ ಕಿರಿಯ ಸಂಸದೆ ಎನಿಸಿಕೊಂಡಿರುವ ಶಾಂಭವಿ ಚೌಧರಿ ಅವರು ಪೇಪರ್ ನೋಡದೆ ಪ್ರಮಾಣ ವಚನವನ್ನು ಸ್ವೀಕರಿಸಿದ್ದಾರೆ.
26 ವರ್ಷ ವರ್ಷದ ಶಾಂಭವಿ ಅವರು ಹಿಂದಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಶಾಂಭವಿ ಅವರು ಬಿಳಿ ಬಣ್ಣದ ಸೀರೆ ಧರಿಸಿ ಪೇಪರ್ ನೋಡದೆ ಸಭೆಯನ್ನು ನೋಡಿಕೊಂಡೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ...