ಗಣೇಶ ವಿಸರ್ಜನೆಯ ಗಲಾಟೆ, ಕಲ್ಲು ತೂರಾಟಕ್ಕೆ ತುತ್ತಾದ ಮದ್ದೂರು ನಿಶ್ಯಬ್ಧವಾಗಿದೆ. ನಿಷೇಧಾಜ್ಞೆ ಜಾರಿಯಲ್ಲಿದ್ರೂ ಮದ್ದೂರು ಪಟ್ಟಣ ಬೂದಿ ಮುಚ್ಚಿದ ಕೆಂಡದಂತೆ ಇದೆ. ಸೆಪ್ಟೆಂಬರ್ 10ರ ಬೆಳಗ್ಗೆ 6ಗಂಟೆವರೆಗೆ ನಿಷೇಧಾಜ್ಞೆ ಮುಂದುವರಿಸಲಾಗಿದೆ.
ಸೆಪ್ಟೆಂಬರ್ 7ರ ರಾತ್ರಿ ನಡೆದ ಕಲ್ಲು ತೂರಾಟದ ಬಳಿಕ, ಹಿಂದೂ ಸಂಘಟನೆಗಳ ಕಿಚ್ಚು ಸ್ಫೋಟಗೊಂಡಿದೆ. 144 ಸೆಕ್ಷನ್ ಜಾರಿಯಲ್ಲಿದ್ರೂ ನಿನ್ನೆ ಸಾವಿರಾರು ಜನರು ಸೇರಿದ್ರು....
ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ, ಪರಪ್ಪನ ಅಗ್ರಹಾರ ಸೇರಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್, ನರಕಯಾತನೆ ಅನುಭವಿಸುತ್ತಿದ್ದಾರೆ. ಡೆವಿಲ್ ಮಾನಸಿಕವಾಗಿ ಕುಸಿದು ಹೋಗಿದ್ದು, ಜಡ್ಜ್ ಎದುರು ವಿಷಕ್ಕಾಗಿ ಅಂಗಲಾಚಿದ್ದಾರೆ.
ಬಳ್ಳಾರಿ ಕಾರಾಗೃಹಕ್ಕೆ ಸ್ಥಳಾಂತರ ಮತ್ತು ವಿಶೇಷ ಸೌಲಭ್ಯಗಳಿಗಾಗಿ ಮನವಿ ಮಾಡಿ, ಬೆಂಗಳೂರಿನ 57ನೇ CCH ನ್ಯಾಯಾಲದಲ್ಲಿ ಅರ್ಜಿ ವಿಚಾರಣೆ ನಡೆಸಲಾಯ್ತು. ಜೈಲಿನಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ದರ್ಶನ್...
ಮದ್ದೂರು ಕಲ್ಲು ತೂರಾಟ ಪ್ರಕರಣ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಉನ್ನತ ಸಭೆ ನಡೆಸಿ ಮಾಹಿತಿ ನೀಡಿದ್ದಾರೆ. ಹಿಂದೂಗಳಾಗ್ಲಿ ಮುಸಲ್ಮಾರೇ ಆಗ್ಲಿ, ಯಾರೇ ಮಾಡಿದ್ರೂ ತಪ್ಪು ತಪ್ಪೇ.. ಉಸ್ತುವಾರಿ ಸಚಿವರ ವರದಿ ಆಧರಿಸಿ, ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.
ಮದ್ದೂರಿನಲ್ಲಿ ಪೊಲೀಸ್‌ನವರು ಇಲ್ಲಿಯವರೆಗೆ ತಪ್ಪುಗಳನ್ನು ಮಾಡಿಲ್ಲ. ಕಾನೂನು ರೀತಿ ನಡೆದುಕೊಂಡಿದ್ದಾರೆ. ಮಸೀದಿ...
ಧರ್ಮಸ್ಥಳ ಪ್ರಕರಣದಲ್ಲಿ ಎಸ್‌ಐಟಿ ಅಧಿಕಾರಿಗಳು, ಇಂಚಿಂಚೂ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಬುರುಡೆ ಗ್ಯಾಂಗಿನ ಜನ್ಮ ಜಾಲಾಡ್ತಿದ್ದು, ಸುದೀರ್ಘ ವಿಚಾರಣೆಗೆ ಮುಂದಾಗಿದ್ದಾರೆ. ಮಾಸ್ಕ್‌ಮ್ಯಾನ್ ಚಿನ್ನಯ್ಯ ಬಹಳ ಸ್ಪಷ್ಟವಾಗಿ ಕೆಲವರ ಹೆಸರುಗಳನ್ನು ಹೇಳಿದ್ದಾನೆ. ಮಟ್ಟಣ್ಣವರ್, ತಿಮರೋಡಿ, ಜಯಂತ್, ಸಮೀರ್, ವಿಠಲ ಗೌಡ, ಪ್ರದೀಪ್ ಗೌಡ ಸೇರಿದಂತೆ, ಹಲವು ಯೂಟ್ಯೂಬರ್‌ಗಳ ಹೆಸರನ್ನೂ ಬಾಯ್ಬಿಟ್ಟಿದ್ದಾನೆ.
ಪ್ರತಿಯೊಬ್ಬರಿಗೂ ಬುಲಾವ್ ಕೊಟ್ಟಿದ್ದು, ತನಿಖೆಯನ್ನು ತೀವ್ರಗೊಳಿಸಿದೆ....
ವಿಧಾನ ಪರಿಷತ್ತಿನ 4 ಸ್ಥಾನಗಳ ನಾಮ ನಿರ್ದೇಶನದ ಪಟ್ಟಿಗೆ, ರಾಜ್ಯಪಾಲರು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಡಾ. ಆರತಿ ಕೃಷ್ಣ, ಎಫ್.ಹೆಚ್. ಜಕ್ಕಪ್ಪನವರ್, ಮೈಸೂರಿನ ಪತ್ರಕರ್ತ ಶಿವಕುಮಾರ್ ಕೆ. ಅವರ ಹೆಸರುಗಳಿದ್ದ ಪಟ್ಟಿಯನ್ನು, ರಾಜ್ಯ ಸರ್ಕಾರ ಕಳಿಸಿಕೊಟ್ಟಿತ್ತು. ಇದೀಗ ರಾಜ್ಯಪಾಲ ಥಾವರ್ ಚಂದ್...
ಮನೆ ಕೆಲಸದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣದಲ್ಲಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆಯಾಗಿದೆ. ಪರಪ್ಪನ ಅಗ್ರಹಾರದಲ್ಲಿರುವ ಪ್ರಜ್ವಲ್‌ಗೆ ಕೈದಿ ನಂಬರ್ 15,528ನೇ ನಂಬರ್ ನೀಡಲಾಗಿದೆ. ಜೊತೆಗೆ ಕಾರಾಗೃಹದಲ್ಲಿರುವ ಗ್ರಂಥಾಯದಲ್ಲಿ ಕ್ಲರ್ಕ್ ಕೆಲಸವನ್ನೂ ನೀಡಲಾಗಿದೆ.
ವಿಚಾರಣಾಧೀನ ಕೈದಿಗಳು ಹಾಗೂ ಸಜಾಬಂದಿಗಳಿಗೆ, ಜೈಲಿನ ಗ್ರಂಥಾಲಯದಿಂದ ಪುಸ್ತಕ ವಿತರಣೆ ಮಾಡುವುದು. ಯಾವ ಕೈದಿಗೆ ಯಾವ ಪುಸ್ತಕ ನೀಡಲಾಗಿದೆ...
ನಾಡಹಬ್ಬ ದಸರಾ ಉದ್ಘಾಟಕರಾಗಿ ಲೇಖಕಿ ಬಾನು ಮುಷ್ತಾಕ್ ಅವರಿಗೆ ಸರ್ಕಾರ ಆಹ್ವಾನ ನೀಡಲಾಗಿದೆ. ಇದು ಹಿಂದೂ ಸಂಘಟನೆಗಳು ಮತ್ತು ಬಿಜೆಪಿಗರ ಕೆಂಗಣ್ಣಿಗೆ ಗುರಿಯಾಗಿದೆ. ಇದೀಗ ಸರ್ಕಾರದ ಕ್ರಮ ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ, ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಬಾನು ಮುಷ್ತಾಕ್ ಅವರಿಗೆ ನೀಡಿರುವ ಆಹ್ವಾನವನ್ನು ಹಿಂಪಡೆಯಲು, ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದ್ದಾರೆ.
ಹೈಕೋರ್ಟ್‌ಗೆ ಸಾರ್ವಜನಿಕ...
ಧರ್ಮಸ್ಥಳ ಕೇಸ್‌ನಲ್ಲಿ ಲಾಕ್ ಆಗಿರುವ, ಮಾಸ್ಕ್‌ಮ್ಯಾನ್ ಚಿನ್ನಯ್ಯನಿಗೆ ಪಶ್ಚಾತಾಪ ಆಗಿದೆಯಂತೆ. ಎಸ್‌ಐಟಿ ಅಧಿಕಾರಿಗಳ ವಿಚಾರಣೆ ವೇಳೆ, ಏನೇ ಪ್ರಶ್ನೆ ಕೇಳಿದ್ರೂ ಕಣ್ಣೀರು ಹಾಕುತ್ತಿದ್ದಾನಂತೆ. ಸೆಪ್ಟೆಂಬರ್ 3ರಂದು ಬುಧವಾರ, ಚಿನ್ನಯ್ಯನ ಪೊಲೀಸ್ ಕಸ್ಟಡಿ ಮುಗಿದಿತ್ತು. ಹೀಗಾಗಿ, ಆತನನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಆಗ ಕೋರ್ಟ್‌ನಲ್ಲಿಯೂ ಆತ ಕಣ್ಣೀರು ಹಾಕಿದ್ದಾನಂತೆ. ಕೋರ್ಟ್‌ನಿಂದ ಹೊರಗೆ ಬರುತ್ತಿದ್ದಂತೆ ಅಲ್ಲಿಯೂ ಕಣ್ಣೀರು ಸುರಿಸಿದ್ದಾನೆ.
ಮತ್ತೆ...
ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಸ್ಟ್ ಹಾಕಿದ್ದ ಬರಹಗಾರ ಅಹೋರಾತ್ರಾ ಅವರಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ಕೋರ್ಟ್ ಸೂಚಿಸಿದ್ರೂ ಅಹೋರಾತ್ರಾ ಅವರು ಪೋಸ್ಟ್ ಡಿಲೀಟ್ ಮಾಡಿರಲಿಲ್ಲ. ನಿಗದಿಪಡಿಸಿದ ದಿನ ವಿಚಾರಣೆಗೂ ಹಾಜರಾಗಿರಲಿಲ್ಲ. ಹೀಗಾಗಿ 11ನೇ ಸಿಸಿಹೆಚ್ ನ್ಯಾಯಾಲಯ, ಅಹೋರಾತ್ರಾಗೆ 15 ದಿನಗಳ ಕಾಲ ಸೆರೆವಾಸ ವಿಧಿಸಿ ಆದೇಶ ಹೊರಡಿಸಿದೆ.
ಈ ಬಗ್ಗೆ ಮಾಧ್ಯಮವೊಂದಕ್ಕೆ ಅಹೋರಾತ್ರಾ ಅವ್ರು ಪ್ರತಿಕ್ರಿಯಿಸಿದ್ದಾರೆ....
ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದವರ ಬುಡಕ್ಕೆ, ಬೆಂಕಿ ಬಿದ್ದಿದೆ. ಮಾಸ್ಕ್‌ಮ್ಯಾನ್ ಚಿನ್ನಯ್ಯನವರು ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್, ಸಮೀರ್ ಸೇರಿದಂತೆ, ಹಲವರ ಹೆಸರು ಹೇಳಿದ್ದಾನೆ. ಆತ ಹೇಳಿದ ಎಲ್ಲರನ್ನೂ ವಿಚಾರಣೆಗೆ ಒಳಪಡಿಸಲು, ಎಸ್‌ಐಟಿ ಮುಂದಾಗಿದೆ.
ಮೊದಲ ಭಾಗವಾಗಿ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ, ಸರ್ಚ್ ವಾರೆಂಟ್ ಸಮೇತ ಅಧಿಕಾರಿಗಳು ಎಂಟ್ರಿ ಕೊಟ್ಟಿದ್ರು. ಮನೆಯ...