ಜಾತಿಗಣತಿ ಆರಂಭವಾದ್ರೂ ಟೀಕೆ-ಟಿಪ್ಪಣಿಗಳು ಮಾತ್ರ ನಿಂತಿಲ್ಲ. ಜಾತಿಗಣತಿ ನೆಪದಲ್ಲಿ ಹಿಂದೂ ಧರ್ಮವನ್ನು ಒಡೆಯುವ ಕೆಲಸಕ್ಕೆ, ರಾಜ್ಯ ಕಾಂಗ್ರೆಸ್ ಮುಂದಾಗಿದೆ. ಹೀಗಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನಡೆದ ಶರನ್ನವರಾತ್ರಿ ಧರ್ಮ ಸಮ್ಮೇಳನದಲ್ಲಿ, ರಾಜ್ಯ ಸರ್ಕಾರದ ವಿರುದ್ಧ ಬಿವೈವಿ ಕಿಡಿಕಾರಿದ್ದಾರೆ.
ಸಮಾಜದಲ್ಲಿ ವಿಷ ಬೀಜ ಬಿತ್ತುವ ಕೆಲಸವನ್ನ ಕಾಂಗ್ರೆಸ್ ಸರ್ಕಾರ...
ಧರ್ಮಸ್ಥಳ ಪ್ರಕರಣದ ತನಿಖೆ ಚುರುಕು ಪಡೆದಿದ್ದು, ಎಸ್‌ಐಟಿ ಅಧಿಕಾರಿಗಳು ಫಂಡಿಂಗ್ ಮಾಡ್ತಿದ್ದವರ ಬೆನ್ನು ಹತ್ತಿದ್ದಾರೆ. ಮಾಸ್ಕ್‌ಮ್ಯಾನ್ ಚಿನ್ನಯ್ಯ ಹಾಗೂ ಪತ್ನಿಯ ಅಕೌಂಟ್‌ಗೆ ಹಣ ವರ್ಗಾವಣೆಯಾಗಿರುವ ಬಗ್ಗೆಯೂ ಮಾಹಿತಿ ಕಲೆ ಹಾಕುತ್ತಿದೆ. ಪತ್ನಿ ಸೇರಿದಂತೆ ಚಿನ್ನಯ್ಯನ ಕುಟುಂಬದ ಪ್ರತಿಯೊಬ್ಬರ ಖಾತೆಗಳನ್ನೂ ಪರಿಶೀಲನೆ ಮಾಡಲಾಗ್ತಿದೆ. ಈಗಾಗಲೇ ಅಕೌಂಟ್ ಡೀಟೆಲ್ಸ್ ಪಡೆಯಲಾಗಿದೆ.
ಇನ್ನು, ಫಂಡಿಂಗ್ ಆರೋಪದ ಮೇಲೆ ಮಹೇಶ್ ಶೆಟ್ಟಿ...
ಹಬ್ಬಗಳನ್ನು ಸಂಪ್ರದಾಯಬದ್ಧವಾಗಿ ಮಾಡುವ ಮುಖೇಶ್ ಅಂಬಾನಿ ಕುಟುಂಬ ಪಿತೃ ಪಕ್ಷದಲ್ಲಿಯೂ ತನ್ನ ಕರ್ತವ್ಯವನ್ನು ಪಾಲಿಸಿಕೊಂಡು ಬರ್ತಿದೆ. ಬಿಹಾರದ ಗಯಾದಲ್ಲಿರುವ ಪ್ರಸಿದ್ಧ ವಿಷ್ಣುಪಾದ ದೇವಸ್ಥಾನಕ್ಕೆ ಅಂಬಾನಿ ಕುಟುಂಬ ಪಿಂಡದಾನ ಮಾಡಿದೆ.
ಪಿಂಡ ದಾನ ಸಮಾರಂಭದ ನಂತ್ರ ಪುರೋಹಿತರು ಮತ್ತು ಬ್ರಾಹ್ಮಣರಿಗೆ ದೇಣಿಗೆ ನೀಡುವುದನ್ನು ಕಡ್ಡಾಯ. ಮುಖೇಶ್ ಅಂಬಾನಿ ಅತ್ಯಂತ ಗೌರವದಿಂದ ಪುರೋಹಿತರಿಗೆ ದೇಣಿಗೆ ನೀಡಿದ್ದಾರೆ. ಹಾಜರಿದ್ದ ಪುರೋಹಿತರಿಗೆ...
ರಾಜ್ಯದಲ್ಲಿ ಜಾತಿಗಣತಿಗೆ ಆದೇಶ ಸಂಬಂಧ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ, ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಆಗಸ್ಟ್ 13ರಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ, ರಾಜ್ಯ ಒಕ್ಕಲಿಗರ ಸಂಘ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ, ಮಾಜಿ ಶಾಸಕ ಹಾಗೂ ಹಿರಿಯ ವಕೀಲ ಕೆ.ಎನ್. ಸುಬ್ಬಾರೆಡ್ಡಿ, ಮತ್ತಿತರರು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಿದ್ರು.
ನ್ಯಾಯಮೂರ್ತಿ...
ರಾಜ್ಯದೆಲ್ಲೆಡೆ ಜಾತಿಗಣತಿ ಭಾರೀ ಸದ್ದು ಮಾಡ್ತಿದೆ. ಎಲ್ಲಾ ಸಮುದಾಯಗಳು ನಿರಂತರ ಸಭೆಗಳನ್ನು ಮಾಡ್ತಿದ್ದು, ಜಾತಿ ಗಣತಿ ನೆಪದಲ್ಲಿ ಒಗ್ಗಟ್ಟು ಪ್ರದರ್ಶಿಸುತ್ತಿದ್ದಾರೆ. ಸೆಪ್ಟೆಂಬರ್ 20ರಂದು ಬೆಂಗಳೂರಿನಲ್ಲಿ ಒಕ್ಕಲಿಗ ಸಮುದಾಯದ, ಮಹತ್ವದ ಸಭೆ ಕರೆಯಲಾಗಿದೆ.
ಆದಿಚುಂಚನಗಿರಿ ಮಠದಲ್ಲಿ ನಿರ್ಮಲಾನಂಧನಾಥ ಸ್ವಾಮೀಜಿ ನೇತೃತ್ವದಲ್ಲಿ ಸಭೆ ನಡೆಯಲಿದೆ. ಇದರಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿಯಾಗಲಿದ್ದಾರೆ. ಪಕ್ಷಾತೀತವಾಗಿ ಸಮಾಜದ ಮುಖಂಡರು ಕೂಡ...
ಮನೆ, ಮನೆಗೂ ತೆರಳಿ ಜಾತಿಗಣತಿ ನಡೆಸುವ ಸರ್ಕಾರದ ನಿರ್ಧಾರಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮೇಲೆ ಹಲವು ಸಚಿವರು ಸಿಡಿಮಿಡಿಯಾಗಿದ್ದಾರೆ. ಜಾತಿ ಕಿಚ್ಚು, ಸರ್ಕಾರದ ಗೊಂದಲ ನಿವಾರಣೆಗಾಗಿ ದೆಹಲಿಯಿಂದ ಕಾಂಗ್ರೆಸ್ ಹೈಕಮಾಂಡ್ ನಾಯಕರೇ ಎಂಟ್ರಿ ಕೊಡಬೇಕಾಗಿ ಬಂದಿದೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ದಿಢೀರ್...
ರಾಜ್ಯದಲ್ಲಿ ಜಾತಿಗಣತಿ ಕಿಚ್ಚು ಧಗಧಗ ಹೊತ್ತಿ ಉರಿಯುತ್ತಿದೆ. ಸಚಿವ ಸಂಪುಟ ಸಭೆಯಲ್ಲಿ ಕಾವೇರಿದ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತರು ಸಮಾವೇಶಕ್ಕೆ ಸಜ್ಜಾಗಿದ್ದಾರೆ. ಹುಬ್ಬಳ್ಳಿಯಲ್ಲಿಂದು ವೀರಶೈವ ಲಿಂಗಾಯತ ಏಕತಾ ಸಮಾವೇಶ ನಡೆಯುತ್ತಿದೆ.
ಹುಬ್ಬಳ್ಳಿಯ ನೆಹರು ಮೈದಾನ ಸಮಾವೇಶಕ್ಕೆ ವೇದಿಕೆ ಸಜ್ಜಾಗಿದೆ. 1 ಸಾವಿರಕ್ಕೂ ಹೆಚ್ಚು ಮಠಾಧೀಶರು, 1 ಲಕ್ಷಕ್ಕೂ ಹೆಚ್ಚು ಜನರು ಭಾಗಿಯಾಗುವ...
ಧರ್ಮಸ್ಥಳ ನಿಗೂಢ ಸಾವಿನ ಪ್ರಕರಣ ಅಗೆದಷ್ಟು ಮತ್ತೆ, ಮತ್ತೆ ಮೇಲೇಳುತ್ತಿದೆ. ಈಗಾಗಲೇ ಮಾಸ್ಕ್‌ಮ್ಯಾನ್ ಚಿನ್ನಯ್ಯ ಸುಳ್ಳು ಹೇಳ್ತಿದ್ದಾನೆ ಅನ್ನೋದು ಎಸ್‌ಐಟಿ ಅಧಿಕಾರಿಗಳಿಗೆ ಅರ್ಥವಾಗಿದೆ. ಚಿನ್ನಯ್ಯನ ಹಿಂದೆ ಷಡ್ಯಂತ್ರ ಇದ್ದು, ಯಾವ ಕಾರಣಕ್ಕೆ ಸುಳ್ಳು ಹೇಳಿದ ಅನ್ನೋದನ್ನ ಪತ್ತೆ ಮಾಡಬೇಕಿದೆ. ಈ ಮಾಹಿತಿಯನ್ನ ರಾಜ್ಯ ಸರ್ಕಾರದ ಅಭಿಯೋಜಕರು, ಹೈಕೋರ್ಟ್‌ಗೆ ತಿಳಿಸಿದ್ದಾರೆ.
ಧರ್ಮಸ್ಥಳದಲ್ಲಿ ತಾವು ತೋರಿಸುವ ಸ್ಥಳಗಳಲ್ಲಿ ಉತ್ಖನನ...
ರಾಜ್ಯಾದ್ಯಂತ ಸೆಪ್ಟೆಂಬರ್ 22ರಿಂದ ಜಾತಿಗಣತಿ ಪ್ರಕ್ರಿಯೆ ಆರಂಭವಾಗಲಿದೆ. ಕ್ರಿಶ್ಚಿಯನ್ ಜೊತೆ ಹಿಂದೂ ಜಾತಿಗಳ ಹೆಸರು ಇರೋದಕ್ಕೆ ಬಿಜೆಪಿ ವಿರೋಧಿಸಿದೆ. ಈ ನಡುವೆ ಲಿಂಗಾಯತ ಸಮುದಾಯದಲ್ಲಿ ಧರ್ಮ ಮತ್ತು ಜಾತಿ ಕಾಲಂನಲ್ಲಿ ಏನು ಬರೆಸಬೇಕು ಎಂಬ ಬಗ್ಗೆ ಗೊಂದಲ ಉಂಟಾಗಿದೆ. ಈ ಹಿನ್ನೆಲೆಯಲ್ಲಿ, ಪಂಚಮಸಾಲಿ ಲಿಂಗಾಯತ ಮುಖಂಡರ ಸಭೆಯಲ್ಲಿ ತೀವ್ರ ಚರ್ಚೆ ಹಾಗೂ ಗದ್ದಲ ಉಂಟಾಗಿದೆ.
ಪಂಚಮಸಾಲಿ...
ಜಾತಿಗಣತಿಯ ಹಿನ್ನೆಲೆಯಲ್ಲಿ ರಾಜ್ಯದ ಲಿಂಗಾಯತ ಸಮುದಾಯದ ಯುದ್ಧ ಜೋರಾಗಿದೆ. ವೀರಶೈವ-ಲಿಂಗಾಯತರು ಧರ್ಮದ ಕಾಲಂನಲ್ಲಿ, ಹಿಂದೂ ಎಂದು ಬರೆಸುವಂತೆ ಪಟ್ಟು ಹಿಡಿದಿದ್ದಾರೆ. ಈ ಸಂಬಂಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಆಡಿದ ಮಾತಿಗೆ ಸಚಿವ ಎಂ.ಬಿ. ಪಾಟೀಲ್ ಕಿಡಿಕಾರಿದ್ದಾರೆ. ಬಿಜೆಪಿಯನ್ನು ಮೆಚ್ಚಿಸಲು ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ, ಹಿಂದು ಎಂದು ಬರೆಸುವಂತೆ ಕರೆ ನೀಡಿದ್ದಾರೆ. ಆದರೆ, ಅವರ...
ರಾಜಕೀಯಕ್ಕೆ ಭಾರತೀಯ ಬ್ಯಾಡ್ಮಿಂಟನ್ ಸ್ಟಾರ್ ಸೈನಾ ನೆಹವಾಲ್ ರಾಜಕೀಯಕಿಯಕ್ಕೆ ಎಂಟ್ರಿ ಕೊಡಲಿದ್ದಾರೆ ಅಂತ ಸುದ್ದಿ ಹರಿದಾಡುತ್ತಿದೆ. ಈ ಎಲ್ಲ ಊಹಾಪೋಹಗಳಿಗೆ ಅವರೇ ಉತ್ತರ ಕೊಟ್ಟಿದ್ದಾರೆ. ಉಡುಪಿಯಲ್ಲಿ...