ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನದಿಂದ ಧಾರಾಕಾರ ಮಳೆಯಾಗುತ್ತಿದೆ. ಬಿಡುಬಿಡದೆ ಕಳೆದ ಮೂರ್ನಾಲ್ಕು ದಿನಗಳಿಂದ ಧಾರಕಾರ ಮಳೆಯಾಗುತ್ತಿದೆ. ರಾಜ್ಯದಲ್ಲಿ ಅಬ್ಬರಿಸುತ್ತಿರುವ ಆಶ್ಲೇಷ ಮಳೆ ಎಲ್ಲಾ ಕಡೆ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಕಳೆದ ಎರಡು ಮೂರು ದಿನದಿಂದ ಬಿಟ್ಟೂ ಬಿಡದೆ ಮಳೆಯಾಗುತ್ತಿದ್ದು, ಉತ್ತರದ ಜಿಲ್ಲೆಗಳಲ್ಲಂತೂ ನರಕವೇ ಸೃಷ್ಟಿಯಾಗಿದೆ.
ಇಷ್ಟು ದಿನ ಶಾಂತವಾಗಿದ್ದ ಹಳ್ಳಕೊಳ್ಳಗಳೆಲ್ಲಾ ಮತ್ತೆ ಹುಚ್ಚೆದ್ದು ಹರಿಯುತ್ತಿವೆ....
ರಾಜ್ಯದ 16 ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಕಾಲ, ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಮಲೆನಾಡು, ಕರಾವಳಿ ಭಾಗದ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 50ರಿಂದ 60 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣವಿದ್ದು, ಮುಂದಿನ...