Political News
ಬೆಂಗಳೂರು(ಫೆ.8): ರಾಜ್ಯ ರಾಜಕಾರಣದಲ್ಲಿ ಇನ್ನೇನು ಚುನಾವಣೆ ಹತ್ತಿರದಲ್ಲಿರುವ ಹಿನ್ನಲೆಯಲ್ಲಿ ಹೊಸ ಹೊಸ ಬದಲಾವಣೆಗಳಾಗುತ್ತಿವೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ವಿವಿಧ ಯೋಚನೆಗಳ ಮೂಲಕ ಜನಮನ ಗೆಲ್ಲಲು ಮುಂದಾಗುತ್ತವೆ. ಈ ಹಿನ್ನಲೆಯಲ್ಲಿ ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮಗಳಾದ ಐಶ್ವರ್ಯ ಅವರನ್ನು ಸಿಬಿಐ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.10 ದಿನದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.
ಡಿಕೆಶಿ ಅಕ್ರಮ ಆಸ್ತಿ ಸಂಪಾದನೆ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು, ಎರಡು ತಿಂಗಳು ನಿರಂತರವಾಗಿ ದಾಖಲೆಗಳನ್ನು ಪರಿಶೀಲಿಸಿ ಬಳಿಕ ಗ್ಲೋಬಲ್ ಕಾಲೇಜಿನಲ್ಲಿ ನಿರ್ದೇಶಕಿ ಆಗಿರುವ ಐಶ್ವರ್ಯಗೆ ನೋಟಿಸ್ ನೀಡಿದ್ದಾರೆ.ಇದಾದ ಬಳಿಕ ತನಿಖೆ ನಡೆಸಿ ಕಾಲೇಜಿನ ಫೀಸ್, ಕಾಲೇಜಿನ ಆಯವ್ಯಯ ಪಟ್ಟಿಯ ಸಮೇತ ವಿಚಾರಣೆಗೆ ಹಾಜರಾಗಲು ಐಶ್ವರ್ಯಗೆ ನೋಟಿಸ್ ನೀಡಿದೆ. ಸಿಬಿಐ ತನಿಖೆ ಕೊನೆಯ ಹಂತಕ್ಕೆ ಬಂದಿದ್ದು, ಕೆಲವೇ ದಿನಗಳಲ್ಲಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸುವ ಸಾಧ್ಯತೆ ಇದೆ.
ಈ ಕುರಿತಾಗಿ ಮಾಧ್ಯಮದವರೊಂದಿಗೆ ತನ್ನ ನೋವನ್ನು ತೋಡಿಕೊಂಡ ಡಿಕೆ ಶಿವಕುಮಾರ್, ಫೆ.24 ರಂದು ಇಡಿ ನನ್ನನ್ನು ವಿಚಾರಣೆಗೆ ಕರೆದಿದ್ದಾರೆ. ನಾನು ಪ್ರಜಾಧ್ವನಿ ಯಾತ್ರೆ ಮಾಡೋದಾ? ಇಡಿಯವರ ಬಳಿ ಹೋಗೋದಾ? ಅಂತ ಅಸಮಾಧಾನ ವ್ಯಕ್ತಪಡಿಸಿದರು. ಮುಂದೇನಾಗುತ್ತೆ ಅಂತ ಮುಂದಿನ ದಿನಗಳಲ್ಲಿ ನೋಡೋಣ ಅಂತ ತನ್ನ ಬೇಸರ ವ್ಯಕ್ತಪಡಿಸಿದರು.