Friday, April 18, 2025

Latest Posts

ಸತ್ಯಪಾಲ್ ಮಲಿಕ್ ನಿವಾಸದ ಮೇಲೆ ಸಿಬಿಐ ರೇಡ್: ಇದು ಬಿಜೆಪಿಗರ ಕುಟಿಲ ಕಾರಸ್ತಾನವೆಂದ ಸಿಎಂ ಸಿದ್ದರಾಮಯ್ಯ

- Advertisement -

Political News: ಕಾಶ್ಮೀರದ ಮಾಜಿ ರಾಜ್ಯಪಾಲರಾದ ಸತ್ಯಪಾಲ್ ಮಲಿಕ್‌ ಅವರ ಮನೆ ಮತ್ತು ಕಚೇರಿ ಮೇಲೆ ಸಿಬಿಐ ರೇಡ್ ನಡೆದಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.

40 ದೇಶಪ್ರೇಮಿ ಸೈನಿಕರನ್ನು ಬಲಿತೆಗೆದುಕೊಂಡ ಪುಲ್ವಾಮ ದುರಂತದ ಬಗ್ಗೆ ಸತ್ಯ ಹೇಳಿದ್ದೇ ಮಾಜಿ ರಾಜ್ಯಪಾಲರು ಮತ್ತು ಬಿಜೆಪಿ ಪಕ್ಷದ ಮಾಜಿ ರಾಷ್ಟ್ರೀಯ ಉಪಾಧ್ಯಕ್ಷರಾದ ಸತ್ಯಪಾಲ್ ಮಲಿಕ್ ಅವರ ಅಪರಾಧವಾಗಿ ಹೋಯಿತು. ನಿರೀಕ್ಷೆಯಂತೆ ಅವರ ಮನೆ ಮೇಲೆ ಸಿಬಿಐ ದಾಳಿ ನಡೆಸಿ, ಬೆದರಿಸುವ ಪ್ರಯತ್ನ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಪುಲ್ವಾಮ ದುರಂತ ನಡೆದ ಸಮಯದಲ್ಲಿ ಸತ್ಯಪಾಲ್ ಮಲಿಕ್ ಅವರು ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರಾಗಿದ್ದ ಕಾರಣ ಕೇಂದ್ರದ ವಿರುದ್ಧದ ಅವರ ಆರೋಪವನ್ನು ತಳ್ಳಿಹಾಕಲಾಗದು. ಸತ್ಯವನ್ನು ಎದುರಿಸಲಾಗದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಿರೀಕ್ಷೆಯಂತೆ ಅವರಿಗೆ ಸಿಬಿಐ ತನಿಖೆ ಮೂಲಕ ಚಿತ್ರಹಿಂಸೆ ನೀಡಲು ಹೊರಟಿದೆ, ಈ ಕೃತ್ಯ ಅತ್ಯಂತ ಖಂಡನೀಯ. ಕೇಂದ್ರ ಸರ್ಕಾರ ತನ್ನ ದುಷ್ಟಬುದ್ದಿಯನ್ನು ತಿದ್ದಿಕೊಂಡು, ಸತ್ಯಪಾಲ್ ಮಲಿಕ್ ಅವರ ಮೇಲಿನ ದೌರ್ಜನ್ಯ ನಿಲ್ಲಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಸತ್ಯವನ್ನು ಸಹಿಸದಿರುವ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮನ್ನು ಪ್ರಶ್ನಿಸುವವರ ವಿರುದ್ಧ ಐಟಿ, ಇಡಿ, ಸಿಬಿಐಗಳನ್ನು ಛೂ ಬಿಟ್ಟು ಬಲತ್ಕಾರದಿಂದ ಬಾಯಿ ಮುಚ್ಚಿಸುವ ಪ್ರಯತ್ನನ್ನು ಮುಂದುವರಿಸಿದ್ದಾರೆ. ಆದರೆ ದೇಶದ ಜನತೆ ಇಂತಹ ಕುಟಿಲ ಕಾರಸ್ತಾನಗಳನ್ನು ಅರ್ಥಮಾಡಿಕೊಳ್ಳುವಷ್ಟು ಪ್ರಬುದ್ಧರಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ಹೊರಹಾಕಿದ ಬಾಲಿವುಡ್ ಸೆಲೆಬ್ರಿಟಿಗಳು..

ಮನೆಯಲ್ಲೇ ಗಾಂಜಾ ಸೇವಿಸುವಾಗ ಸಿಕ್ಕಿಬಿದ್ದ ಬಿಗ್‌ಬಾಸ್ ಸ್ಪರ್ಧಿ

ತ್ರಿಷಾ ವಿರುದ್ಧ 25 ಲಕ್ಷ ಪಡೆದ ಆರೋಪ ಹಾಕಿದ್ದ ಮುಖಂಡನ ವಿರುದ್ಧ ಕಾನೂನು ಸಮರ..

- Advertisement -

Latest Posts

Don't Miss