National Political News: ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿವಾಸ ಮತ್ತು ಕಚೇರಿಯ ಮೇಲೆ ಸಿಬಿಐ ರೇಡ್ ನಡೆಸಿದೆ. ಕಿರು ಜಲ ವಿದ್ಯುತ್ ಯೋಜನೆಯಲ್ಲಿ ಬ್ರಷ್ಟಾಚಾರ ನಡೆದಿದೆ ಎಂಬ ಆರೋಪದಡಿಯಲ್ಲಿ, ಸತ್ಯಪಾಲ್ ನಿವಾಸ ಮತ್ತು ಕಚೇರಿ ಮೇಲೆ ಸಿಬಿಐ ದಾಳಿ ನಡೆಸಿದೆ.
ಸತ್ಯಪಾಲ್ ರಾಜ್ಯಪಾಲರಾಗಿದ್ದಂಥ ಸಂದರ್ಭದಲ್ಲಿ ಕಿರು ಜಲ ವಿದ್ಯುತ್ ಯೋಜನೆಗೆ ಸಂಬಂಧಿಸಿದಂತೆ, 300 ಕೋಟಿ ರೂಪಾಾಯಿ ಲಂಚ ಪಡೆದಿದ್ದರು ಎಂಬ ಆರೋಪವಿತ್ತು. ಅಲ್ಲದೇ ಯೋಜನೆಗೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಅನುಸರಿಸದೇ, ಗುತ್ತಿಗೆ ನೀಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ, ಇಂದು ಸಿಬಿಐ ದಾಳಿ ನಡೆಸಿದೆ.
ಈ ಬಗ್ಗೆ ಮಾತನಾಡಿರುವ ಮಾಜಿ ರಾಜ್ಯಪಾಲ ಸತ್ಯ ಪಾಲ್, ನಾನು ಎರಡು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದೇನೆ. ಇದನ್ನು ಅರಿತಿದ್ದು ಕೂಡ ನನ್ನ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಅಲ್ಲದೇ, ನನ್ನ ವಾಹನದ ಚಾಲಕ ಮತ್ತು ಮನೆಕೆಲಸದವನ ಮೇಲೂ ದಾಳಿ ಮಾಡಿ, ಅವರಿಗೂ ತೊಂದರೆ ಕೊಡಲಾಗಿದೆ ಎಂದು ಸತ್ಯಪಾಲ್ ಹೇಳಿದ್ದಾರೆ.
ರಾಜ್ಯದಲ್ಲಿ ಹುಕ್ಕಾಬಾರ್ ನಿಷೇಧ, ಸಿಗರೇಟ್ ನಿಷೇಧ ವಯೋಮಿತಿ ಹೆಚ್ಚಳ: ಸಚಿವ ಗುಂಡೂರಾವ್

