Friday, November 28, 2025

Latest Posts

ರಾಜ್ಯ ಸರ್ಕಾರದ ಸಾಧನೆಯ ಹೆಸರಲ್ಲಿ ಕೇಂದ್ರ ಸರ್ಕಾರ ಬೆನ್ನು ತಟ್ಟಿಕೊಳ್ಳುವುದು ಹೊಸ ವಿಷಯವೇನಲ್ಲ: ಪ್ರಿಯಾಂಕ್

- Advertisement -

Political News: ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯ ಸರ್ಕಾರಗಳ ಸಾಧನೆಯ ನೆರಳಲ್ಲಿ ಬಿಜೆಪಿಯ ಕೇಂದ್ರ ಸರ್ಕಾರ ಬೆನ್ನು ತಟ್ಟಿಕೊಳ್ಳುವುದು ಹೊಸ ವಿಷಯವೇನೂ ಅಲ್ಲ ಎಂದು ಕಿಡಿಕಾರಿದ್ದಾರೆ.

ಜಲಜೀವನ್ ಮಿಷನ್ ಹೆಸರಿಗೆ ಮಾತ್ರ ಕೇಂದ್ರ ಪುರಸ್ಕೃತ ಯೋಜನೆಯಾದರೂ ವಾಸ್ತವದಲ್ಲಿ ಕರ್ನಾಟಕದ ಮಟ್ಟಿಗೆ ಕೇಂದ್ರ ತೀರಸ್ಕೃತ ಯೋಜನೆಯಾಗಿದೆ ಎನ್ನಬಹುದು.

ಪ್ರಸಕ್ತ ಸಾಲಿನವರೆಗೆ JJM ಯೋಜನೆಗಾಗಿ ಒಟ್ಟು ₹35,698,58 ಕೋಟಿ ಖರ್ಚು ಮಾಡಲಾಗಿದೆ. – ಇದರಲ್ಲಿ ರಾಜ್ಯ ಸರ್ಕಾರ ಖರ್ಚು ಮಾಡಿರುವುದು ₹24,598,45 ಕೋಟಿ. – ಇದುವರೆಗೂ ಕೇಂದ್ರ ಸರ್ಕಾರ ಕೊಟ್ಟಿರುವುದು ₹11, 786, 63 ಕೋಟಿ ಮಾತ್ರ. – ಪ್ರಸಕ್ತ ಸಾಲಿನವರೆಗೆ ಕೇಂದ್ರ ಸರ್ಕಾರ ಬಿಡುಗಡೆಗೊಳಿಸಬೇಕಾದ ಮೊತ್ತ ₹13,004,63 ಕೋಟಿ ಎಂದು ಪ್ರಿಯಾಂಕ್ ಖರ್ಗೆ ಲೆಕ್ಕ ನೀಡಿದ್ದಾರೆ.

ಬಿಜೆಪಿಯ ಕೇಂದ್ರ ಸರ್ಕಾರದ ಕರ್ನಾಟಕದೆಡೆಗಿನ ಮಲತಾಯಿ ಧೋರಣೆ ಹೇಗಿದೆ ಎಂದು ನೋಡುವುದಾದರೆ 2024-25ನೇ ಆರ್ಥಿಕ ಸಾಲಿನಲ್ಲಿ JJM ಯೋಜನೆಗಾಗಿ ₹3,804,41 ಕೋಟಿಯನ್ನು ಕರ್ನಾಟಕಕ್ಕೆ ಹಂಚಿಕೆ ಮಾಡಿತ್ತು ಆದರೆ ಬಿಡುಗಡೆಯಾದ ಮೊತ್ತ ಕೇವಲ ₹570,66 ಕೋಟಿ ಮಾತ್ರ. ಯೋಜನೆಯ ಜಾರಿಗಾಗಿ ರಾಜ್ಯ ಸರ್ಕಾರವೇ ಆಸಕ್ತಿವಹಿಸಿ ಹಣ ಖರ್ಚು ಮಾಡಿದೆ, ಆದರೆ ಕೇಂದ್ರ ಸರ್ಕಾರದ ಅನ್ಯಾಯ ಮಾತ್ರ ಮುಂದುವರೆದೇ ಇದೆ ಎಂದು ಪ್ರಿಯಾಂಕ್ ಕಿಡಿಕಾರಿದ್ದಾರೆ.

ಈ ಹಿಂದೆಯೂ JJM ಯೋಜನೆಯ ಬಾಕಿ ಮೊತ್ತವನ್ನು ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರವನ್ನು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದರು, ಈಗಲೂ ಮತ್ತೊಮ್ಮೆ ಒತ್ತಾಸಿದ್ದಾರೆ. ಕೇಂದ್ರ ಸರ್ಕಾರದ ಇಂತಹ ಅನ್ಯಾಯಗಳಿಂದ, ನಿರ್ಲಕ್ಷ್ಯದಿಂದ, ಕರ್ನಾಟಕದೆಡೆಗಿನ ದ್ವೇಷದಿಂದ ರಾಜ್ಯದ ಆರ್ಥಿಕ ಪ್ರಗತಿಗೆ ಪೆಟ್ಟು ಬೀಳುತ್ತಿದ್ದರೂ ರಾಜ್ಯದ ಯಾವೊಬ್ಬ ಬಿಜೆಪಿ ನಾಯಕರು ಕರ್ನಾಟಕದ ಪರವಾಗಿ ಧ್ವನಿ ಎತ್ತುವ, ನ್ಯಾಯ ದೊರಕಿಸಿಕೊಡುವ ಪ್ರಯತ್ನ ಮಾಡದಿರುವುದು ಬಿಜೆಪಿಯ ರಾಜಕೀಯ ಮತ್ತು ನೈತಿಕ ದಿವಾಳಿತನಕ್ಕೆ ಸಾಕ್ಷಿ. ಬಿಜೆಪಿ ಪಕ್ಷದವರಿಗೆ ನಿಜಕ್ಕೂ ರಾಜ್ಯದ ಪರವಾಗಿ ಕಾಳಜಿ ಇದ್ದರೆ ಸರ್ಕಾರದ ಒತ್ತಾಯಕ್ಕೆ ದನಿಗೂಡಿಸಿ ತಮ್ಮ ಬದ್ಧತೆಯನ್ನು ನಿರೂಪಿಸಲಿ ಎಂದು ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ.

- Advertisement -

Latest Posts

Don't Miss