ಉತ್ತರಪ್ರದೇಶ: ಉತ್ತರಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಕೇಂದ್ರ ಸಚಿವ ಅಜಯ್​ ಮಿಶ್ರಾ ಪುತ್ರ ಆಶೀಶ್​ ಮಿಶ್ರಾ ಇಂದು ಪೊಲೀಸರೆದುರು ವಿಚಾರಣೆಗೆ ಹಾಜರಾಗಿದ್ದಾರೆ. ನಿನ್ನೆ ವಿಚಾರಣೆಗೆ ಹಾಜರಾಗಬೇಕಿದ್ದು ಆಶೀಶ್ ಮಿಶ್ರಾ ಅನಾರೋಗ್ಯದ ಕಾರಣ ನೀಡಿ ಗೈರಾಗಿದ್ದರು.

ಆದ್ರೆ ಇಂದು ಉತ್ತರಪ್ರದೇಶದ ಅಪರಾಧ ವಿಭಾಗದ ಪೊಲೀಸರೆದುರು ಹಾಜರಾಗಿದ್ದಾರೆ. ಮಾಧ್ಯಮದವರಿಂದ ತಪ್ಪಿಸಿಕೊಳ್ಳೋ ಸಲುವಾಗಿ ಪೊಲೀಸ್​ ಕಚೇರಿಯ ಹಿಂಬಾಗಿಲಿನಿಂದ ಆಶೀಶ್ ಒಳಪ್ರವೇಶಿಸಿದ್ರು.. 

ಪ್ರತಿಭಟನಾ ನಿರತ ರೈತರ ಮೇಲೆ ವಾಹನ ಹರಿಸಿದ ಪ್ರಕರಣದಲ್ಲಿ ಆಶೀಶ್​ ಮಿಶ್ರಾ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ. ಸದ್ಯ ವಿಚಾರಣೆಗೆ ಹಾಜರಾಗಿರೋ ಆರೋಪಿ ಆಶೀಶ್ ನನ್ನು ಪೊಲೀಸರು ಈವರೆಗೂ ಬಂಧಿಸಿಲ್ಲ.

ಬ್ಯೂರೋ ರಿಪೋರ್ಟ್, ಕರ್ನಾಟಕ ಟಿವಿ