ಬೆಂಗಳೂರು: ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ್ದ ಅತಿವೃಷ್ಠಿ ಪರಿಹಾರ ಕಾರ್ಯಕ್ರಮಗಳನ್ನು ಫಲಾನುಭವಿಗಳಿಗೆ ವಿತರಿಸಿರುವ ಮಾಹಿತಿಯನ್ನು ನೀಡುವಂತೆ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಪತ್ರ ಬರೆದಿದ್ದಾರೆ.
ಕಳೆದ ವರ್ಷ ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ಅತಿವೃಷ್ಟಿಯಿಂದ ಆಗಿರುವ ಅನಾಹುತಗಳಿಗೆ ಸಂಬಂಧಿಸಿದಂತೆ ಜಮೀನು,ಮನೆ ಮತ್ತು ಜಾನುವಾರುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ಈಗಾಗಲೇ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಬಿಡುಗಡೆಯಾದ ಅನುದಾನದಲ್ಲಿ ಮೂಲಭೂತ ಸೌಕರ್ಯಗಳು ಹಾಗೂ ಮನೆಗಳ ನಿರ್ಮಾಣ ಕಾಮಗಾರಿಗಳ ಪ್ರಗತಿ ಯಾವ ಹಂತದಲ್ಲಿವೆ. ಹಾಗೂ ಪೂರ್ಣಗೊಂಡಿರುವ ಕಾಮಗಾರಿಗಳನ್ನು ಫಲಾನುಭವಿಗಳಿಗೆ ವಿತರಿಸಲಾಗಿರುವ ಬಗ್ಗೆ ಪೂರ್ಣ ಮಾಹಿತಿಯನ್ನು ಒದಗಿಸುವಂತೆ ಸಿಎಂ ಕುಮಾರಸ್ವಾಮಿ ಅವರಿಗೆ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಕೋರಿದ್ದಾರೆ. ಅತಿವೃಷ್ಠಿ ಪರಿಹಾರ ಕುರಿತಾಗಿ ಕೇಂದ್ರ ಸರ್ಕಾರದಿಂದ ಪಡೆಯಬಹುದಾದ ಅನುದಾನ ಹಾಗೂ ಇತರೆ ಮೂಲಭೂತ ಸೌಕರ್ಯಗಳ ಬಗ್ಗೆ ಚರ್ಚಿಸಲು ತಮ್ಮ ಹಂತದ ರಾಜ್ಯದ ಕೇಂದ್ರ ಸಚಿವರ ಸಭೆಯನ್ನು ಕರೆಯಲು ದಿನಾಂಕವನ್ನು ನಿಗದಿಪಡಿಸುವ ಬಗ್ಗೆಯೂ ಪತ್ರದ ಮೂಲಕ ಡಿವಿಎಸ್ ಕೋರಿದ್ದಾರೆ.
ಮೋದಿ ಎಚ್ಚರಿಕೆಗೆ ಕೇಂದ್ರ ಸಚಿವರು ಗಢಗಢ!! ತಪ್ಪದೇ ಈ ವಿಡಿಯೋ ನೋಡಿ