ರಾಜ್ಯ ವಿಧಾನಸಭೆ ಚುನಾವಣೆಗೆ ಎಲ್ಲ ಪಕ್ಷಗಳು ಭರದಿಂದ ತಯಾರಿ ನಡೆಸುತ್ತಿದೆ. ಕಾಂಗ್ರೆಸ್‌ನ ರಾಹುಲ್ ಆ್ಯಂಡ್ ಟೀಮ್ ಭಾರತ್ ಜೋಡೋ ಯಾತ್ರೆ ಆರಂಭಿಸಿದ್ರೆ, ಜೆಡಿಎಸ್‌ನವರು ಗ್ರಾಮ ವಾಸ್ತವ್ಯಕ್ಕೆ ಸಜ್ಜಾಗುತ್ತಿದ್ದಾರೆ. ಅದೇ ರೀತಿ ಬಿಜೆಪಿಯ ಪ್ರಚಾರದ ಭರಾಟೆ ಜೋರಾಗಿಯೇ ಇದೆ. ಇದೇ ಕಾರಣಕ್ಕೆ ಕೇಂದ್ರ ಬಿಜೆಪಿ ಸಚಿವರು ಮಂಡ್ಯದ ಮದ್ದೂರು ವಿಧಾನ ಸಭೆ ಕ್ಷೇತ್ರಕ್ಕೆ ಭೇಟಿ ನೀಡಿದ್ದರು.
ಕೇಂದ್ರ ಸರ್ಕಾರದ ವಿದ್ಯುತ್ ಮತ್ತು ಬೃಹತ್ ಕೈಗಾರಿಕೆ ಖಾತೆ ರಾಜ್ಯ ಸಚಿವರಾದ ಶ್ರೀ ಕೃಷ್ಣ ಪಾಲ್ ಗುರ್ಜರ್ ಮದ್ದೂರು ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ಕೊಟ್ಟಿದ್ದು, ಹೊಳೆ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಹೋಗಿ, ದೇವರ ದರ್ಶನ ಮಾಡಿ, ವಿಶೇಷ ಪೂಜೆ ನೆರವೇರಿಸಿದರು. ಈ ವೇಳೆ ಎಂಎಲ್‌ಸಿ ಸಿ.ಪಿ.ಯೋಗೇಶ್ವರ್, ಬಿಜೆಪಿಯ ನಿಯೋಜಿತ ಅಭ್ಯರ್ಥಿ ಸ್ವಾಮಿ ಗೌಡ, ಸೇರಿ ಹಲವು ಬಿಜೆಪಿಗರು ಈ ವೇಳೆ ಉಪಸ್ಥಿತರಿದ್ದರು.
ಮಂಡ್ಯ ಮದ್ದೂರು ಕ್ಷೇತ್ರದಲ್ಲಿ ಹೆಚ್ಚಾಗಿ ಜೆಡಿಎಸ್ ಮತ್ತು ಸ್ವಾವಲಂಬಿ ಪಕ್ಷಕ್ಕೆ ಹೆಚ್ಚು ಬೆಂಬಲವಿದೆ. ಆದ್ರೆ ಈ ಬಾರಿ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯನ್ನು ಗೆಲ್ಲಿಸಲೇಬೇಕೆಂದು ಬಿಜೆಪಿ ಹೈಕಮಾಂಡ್ ಪಣ ತೊಟ್ಟಿದೆ. ಹಾಗಾಗಿ ಕೇಂದ್ರ ಸಚಿವ ಶ್ರೀ ಕೃಷ್ಣ ಪಾಲ್ ಗುರ್ಜರ್ ಮದ್ದೂರಿಗೆ ಭೇಟಿ ನೀಡಿದ್ದು, ಇವರ ಉಸ್ತುವಾರಿಯನ್ನು ಹಾಲಿ ಎಂಎಲ್‌ಸಿ ಸಿಪಿ ಯೋಗಿಶ್ವರ್ ವಹಿಸಿಕೊಂಡಿದ್ದರು.