Hubballi News: ಹುಬ್ಬಳ್ಳಿ: ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ನೀಡಿದ್ದು, ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.
ಪ್ರಧಾನ ಮಂತ್ರಿ ಸ್ವಾಸ್ಥ ಸುರಕ್ಷಾ ಯೋಜನೆ ಅಡಿ, 72 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಆಸ್ಪತ್ರೆ ನಿರ್ಮಾಣವಾಗಿದ್ದು, ಸೂಪರ್ ಸ್ಪೇಷಾಲಿಟಿ ಕಟ್ಟಡದ ನೂತನ ತುರ್ತು ಚಿಕಿತ್ಸಾ ವಿಭಾಗಕ್ಕೆ ಜೋಶಿ ಭೇಟಿ ನೀಡಿದರು.
ಈ ಕಟ್ಟಡದ ಕಾಮಗಾರಿ ಪೂರ್ಣಗೊಂಡಿದ್ದು, ಕಟ್ಟಡ ಇನ್ನೂ ಉದ್ಘಾಟನೆಯಾಗಬೇಕಿದೆ. ಆದರೆ ನೆಲ ಮಹಡಿಯಲ್ಲಿ ಈಗಾಗಲೇ ಕಿಮ್ಸ್, ತುರ್ತು ಚಿಕಿತ್ಸಾ ಸೇವೆ ಆರಂಭಿಸಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ, ಶಾಸಕ ಮಹೇಶ್ ಟೆಂಗಿನಕಾಯಿ, ಎಮ್.ಆರ್. ಪಾಟೀಲ್, ಮೇಯರ್ ವೀಣಾ ಭಾರದ್ವಾಡ ಸಾಥ್ ನೀಡಿದ್ದಾರೆ.
ಈ ವೇಳೆ ಮಾತನಾಡಿದ ಪ್ರಹ್ಲಾದ್ ಜೋಶಿ, ಕಿಮ್ಸ್ ಸಿಬ್ಬಂದಿ ಹೆಚ್ಚಳಕ್ಕೆ ರಾಜ್ಯ ಸರ್ಕಾರಕ್ಕೆ ಮನವಿ ಮಾತಾಡುತ್ತೇನೆ. 1100 ಸಿಬ್ಬಂದಿಗಳನ್ನು ನೇಮಿಸಲು ಕ್ರಮ ಕೈಗೊಳ್ಳುವಂತೆ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಜೊತೆ ಚರ್ಚಿಸುತ್ತೇನೆ ಎಂದು ಹೇಳಿದ್ದಾರೆ.
ಇನ್ನು ಇವಿಎಮ್ ಹೇಳಿಕೆ ಸಮರ್ಥಿಸಿಕೊಂಡ ಸತೀಶ್ ಜಾರಕಿಹೋಳಿಗೆ ಜೋಶಿ ತಿರುಗೇಟು ನೀಡಿದ್ದು, ರಾಜಕೀಯ ಕಾರಣಕ್ಕೆ ಹಾಗೆ ಹೇಳಿಕೆ ಕೊಡುವುದಾಗಿ ಕಾಂಗ್ರೆಸ್‌ನವರು ಹೇಳುತ್ತಾರೆ. ಐದು ಗ್ಯಾರಂಟಿ ಯೋಜನೆ ವಿಚಾರದಲ್ಲೂ ಹಾಗೆ ಸುಮ್ಮನೆ ಆಶ್ವಾಸನೆ ಕೊಟ್ಟಿದ್ದಾರೆ. ಚೆಲುವರಾಯಸ್ವಾಮಿ ಓಟ್‌ಗಾಗಿ ಗ್ಯಾರಂಟಿಗಳ ಬಗ್ಗೆ ಮಾತನಾಡುತ್ತೇವೆ ಅಂದಿದ್ರು ಎಂದು ಜೋಶಿ ಹೇಳಿದ್ದಾರೆ.
ಸಿದ್ದರಾಮಯ್ಯ ಏಮ್ಸ್‌ನ್ನು ರಾಯಚೂರಿಗೆ ಶಿಫ್ಟ್ ಮಾಡಲು ಕೇಂದ್ರಕ್ಕೆ ಪತ್ರ ಬರೆದ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಜೋಶಿ, ಈ ವಿಚಾರವಾಗಿ ನಾನು ಹೆಚ್ಚಿಗೆ ಮಾತಾಡಲ್ಲಾ. ಧಾರವಾಡ ಜಿಲ್ಲೆಯ ಕಾಂಗ್ರೆಸ್ ನಾಯಕರು ಈ ಬಗ್ಗೆ ಸಿದ್ದರಾಮಯ್ಯನವರಿಗೆ ಏನು ಹೇಳ್ತಾರೆ ಅನ್ನೋದು ನನ್ನ ಪ್ರಶ್ನೆ. ಕಾಂಗ್ರೆಸ್ ಜನಪ್ರತಿನಿಧಿಗಳು ಏನು ಹೇಳ್ತಾರೆ ಅವರೇ ಡಿಸೈಡ್ ಮಾಡಲಿ ಎಂದು ಜೋಶಿ ಹೇಳಿದ್ದಾರೆ.
‘ಗ್ಯಾರಂಟಿ ಹೆಸರಲ್ಲಿ ಮಂಕುಬೂದಿ ಎರಚಿದ್ದಾರೆ: ಸಾಲ ಮನ್ನಾ ವಿಚಾರದಲ್ಲಿ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ದಾರೆ’
ಗಡುವು ನೀಡಿದರೂ ಗಮನ ಕೊಡದ ಸರ್ಕಾರ: ಕರ್ನಾಟಕ ಬಂದ್ ಅಂತಿಮ ನಿರ್ಧಾರ..!