Chaithra Kundapura : ಉದ್ಯಮಿಗೆ ಕೋಟ್ಯಾಂತರ ರೂಪಾಯಿ ವಂಚನೆ : ಚೈತ್ರಾ ಕುಂದಾಪುರ ಅರೆಸ್ಟ್

Udupi News : ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂ. ವಂಚಿಸಿದ ಆರೋಪಕ್ಕೆ ಸಂಬಂಧಿಸಿ ಚೈತ್ರಾ ಕುಂದಾಪುರ ಮತ್ತು ಅವರ ಜತೆಗಾರರನ್ನು ಬೆಂಗಳೂರು ಸಿಸಿಬಿ ಪೊಲೀಸರು ಮಂಗಳವಾರ ರಾತ್ರಿ ಉಡುಪಿಯಲ್ಲಿ ಅರೆಸ್ಟ್ ಮಾಡಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಹಣ ಪಡೆದುಕೊಂಡು ವಂಚಿಸಿರುವುದಾಗಿ ಚೈತ್ರಾ ಸಹಿತ 8 ಮಂದಿಯ ವಿರುದ್ಧ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಬೆಂಗಳೂರು ನಗರದ ಬಂಡೇಪಾಳ್ಯ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು ಎನ್ನಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ ಚೈತ್ರಾ ಕುಂದಾಪುರ ಅವರನ್ನು ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಬೆಂಗಳೂರಿನ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಇದೆ.
ಚೈತ್ರಾ ಕುಂದಾಪುರ ಜೊತೆಗೆ ಗಗನ್ ಕಡೂರು, ಶ್ರೀಕಾಂತ್ ನಾಯಕ್, ಪ್ರಸಾದ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

Congress: ಯಾರೇ ಸೇರಿದರು ನಾವು ಹೆಚ್ಚು ಸೀಟು ಗೆಲ್ಬೇಕು ಗೆಲ್ತಿವಿ..!

Hospital: ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಗಳ ನಿರ್ಲಕ್ಷ್ಯದಿಂದ ಸಾರ್ವಜನಿಕರ ಪರದಾಟ..!

AAP:ರಾಜ್ಯದಲ್ಲಿ ಸ್ಥಳೀಯ ಚುನಾವಣೆಗಳಲ್ಲಿ ಸ್ವಂತ ಬಲದಲ್ಲಿ ಸ್ಪರ್ಧಿಸುತ್ತೇವೆ: ಮುಖ್ಯಮಂತ್ರಿ ಚಂದ್ರು

About The Author