Banglore News : ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂ. ವಂಚಿಸಿದ ಆರೋಪಕ್ಕೆ ಸಂಬಂಧಿಸಿ ಚೈತ್ರಾ ಕುಂದಾಪುರ ಮತ್ತು ಅವರ ಜತೆಗಾರರನ್ನು ಬೆಂಗಳೂರು ಸಿಸಿಬಿ ಪೊಲೀಸರು ಮಂಗಳವಾರ ರಾತ್ರಿ ಉಡುಪಿಯಲ್ಲಿ ಅರೆಸ್ಟ್ ಮಾಡಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಹಣ ಪಡೆದುಕೊಂಡು ವಂಚಿಸಿರುವುದಾಗಿ ಚೈತ್ರಾ ಸಹಿತ 8 ಮಂದಿಯ ವಿರುದ್ಧ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಬೆಂಗಳೂರು ನಗರದ ಬಂಡೇಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು ಎನ್ನಲಾಗಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರಿನ ಉದ್ಯಮಿ, ಉದ್ಯಮಿಗೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ವಂಚಿಸಿರುವ ಆರೋಪದಡಿ ಹಿಂದೂ ಮುಖಂಡೆ ಚೈತ್ರಾ ಕುಂದಾಪುರ ಸೇರಿ 7 ಮಂದಿ ಆರೋಪಿಗಳಿಗೆ 14 ದಿನಗಳ ಕಾಲ ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ.
14 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರಿಗೆ ಸಿಸಿಬಿ ಅಧಿಕಾರಿಗಳು ಮನವಿ ಮಾಡಿದ್ದರು ಎನ್ನಲಾಗಿದೆ.
Farmers Protest: ವಿವಿಧ ಬೇಡಿಕೆಗಳ ಈಡೇರಿಕೆಗೆ ಕುಂದಗೋಳ ರೈತರಿಂದ ಪ್ರತಿಭಟನೆ..!