Basavaraj Bommai : ಬಿಜೆಪಿಗೂ, ಚೈತ್ರ ಕೇಸ್ ಗೂ ಯಾವುದೇ ಸಂಬಂಧವಿಲ್ಲ : ಬೊಮ್ಮಾಯಿ

State News : ಕರಾವಳಿ ಮೂಲದ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವವರಿಗೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಬಹುಕೋಟಿ ರೂಪಾಯಿ ವಂಚನೆ ಮಾಡಿರುವ ಆರೋಪ ಎಹಿಂದೂಪರ ನಾಯಕಿ ಚೈತ್ರಾ ಕುಂದಾಪುರ ಎದುರಿಸುತ್ತಿದ್ದಾರೆ ಈ ವಿಚಾರವಾಗಿ ಮಾಜಿ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

“ಚೈತ್ರಾ ಕುಂದಾಪುರ ಕೇಸ್ ನ ವ್ಯವಹಾರಕ್ಕೂ ನಮಗೂ ಸಂಬಂಧವಿಲ್ಲ. ಈ ಪ್ರಕರಣದಲ್ಲಿ ಸಮಗ್ರ ತನಿಖೆ ಆಗಬೇಕು, ಯಾರೇ ಇದ್ದರೂ ಉಗ್ರ ಶಿಕ್ಷೆ ಆಗಲಿ. ಸ್ವಾಮೀಜಿ ಅಲ್ಲ, ಯಾರೇ ಇದ್ದರೂ ಅವರನ್ನು ಬಂಧಿಸಿ .ಟಿಕೆಟ್ ಕೊಡಿಸುತ್ತೇವೆ ಎಂದು ಹಣ ಪಡೆದಿರೋದನ್ನ ನಾವು ಗಂಭೀರವಾಗಿ ಪರಿಗಣಿಸ್ತೇವೆ. ಬಿಜೆಪಿಗೆ ಇದರಲ್ಲಿ ಯಾವುದೇ ಸಂಬಂಧ ಇಲ್ಲ ಎನ್ನುವುದು ಸ್ಪಷ್ಟ.

ಹೋರಾಟ ಹಲವರು ಮಾಡ್ತಾರೆ, ಹಾಗಂತ ಅದಕ್ಕೆಲ್ಲವಕ್ಕೂ ಪಕ್ಷಕ್ಕೆ ಸಂಬಂಧ ಇಲ್ಲ. ತನಿಖೆ ಆಗಲಿ, ದೊಡ್ಡ ದೊಡ್ಡ ಹೆಸರನ್ನು ಅಪರಾಧಿ ಸ್ಥಾನದಲ್ಲಿ ಇದ್ದವರು ಹೇಳುತ್ತಾರೆ. ಆದರೆ ತನಿಖೆ ಆಗಿ ಅದರ ಸತ್ಯ ಹೊರ ಬರಲಿ” ಎಂದು ಮಾಜಿ ಸಿಎಂ ಹೇಳಿಕೆ ನೀಡಿದ್ದಾರೆ.

Sugar Import: ಭಾರತದಿಂದ ಸಕ್ಕರೆ ಆಮದು ಮಾಡಿಕೊಳ್ಳಲಿರುವ ನೇಪಾಳ

America Police : ವಿದ್ಯಾರ್ಥಿನಿ ಸಾವಿಗೆ ನಗುತ್ತಿರುವ ಅಮೇರಿಕಾ ಪೊಲೀಸರು; ತನಿಖೆಗೆ ಭಾರತ ಅಗ್ರಹ..!

About The Author