ಯಾವುದೇ ಸಂಭಾವನೆ ಪಡೆಯದೆ ಕೃಷಿ ಇಲಾಖೆಯ ರಾಯಭಾರಿಯಾದ ಚಾಲೆಂಜಿಂಗ್ ಸ್ಟಾರ್ ದರ್ಶನ್…

ರಾಜ್ಯ ಕೃಷಿ‌ ಇಲಾಖೆಯ ರಾಯಭಾರಿಯಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ನೇಮಕ ಆದೇಶವನ್ನು ಹೊರಡಿಸಲಾಗಿದೆ.

ಈ ಕುರಿತು ಅಧಿಕೃತ ಪ್ರಕಟಣೆಯನ್ನು ಹೊರಡಿಸಲಾಗಿದ್ದು, ‘ಕೃಷಿ ಇಲಾಖೆಯು ರೈತರ ಹಿತಕ್ಕಾಗಿ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪ್ರಚುರಪಡಿಸಲು ಹಾಗೂ ಕೃಷಿಕರಲ್ಲಿ ಸ್ಪೂರ್ತಿ ತುಂಬಲು ಕನ್ನಡ ಚಲನಚಿತ್ರರಂಗದ ಖ್ಯಾತ ನಟರಾದ ಶ್ರೀ ದರ್ಶನ್ ಅವರನ್ನು ಕೃಷಿ ಇಲಾಖೆಯ ರಾಯಭಾರಿಯಾಗಿ ನೇಮಿಸಬಹುದಾಗಿದೆಯೆಂದು ಹಾಗೂ ಸದರಿ ಅವರು ಯಾವುದೇ ಸಂಭಾವನೆ ಇಲ್ಲದೆ ಈ ಕೆಲಸವನ್ನು ನಿರ್ವಹಿಸುವುದಾಗಿ ಒಪ್ಪಿಕೊಂಡಿರುತ್ತಾರೆ. ಈ ಹಿನ್ನೆಲೆಯಲ್ಲಿ ನಟ ದರ್ಶನ್ ಅವರನ್ನು ಕೃಷಿ ಇಲಾಖೆಯ ರಾಯಭಾರಿಯನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕೆಲ ದಿನಗಳ ಹಿಂದಷ್ಟೇ ಕೃಷಿ ಸಚಿವ ಬಿ.ಸಿ ಪಾಟೀಲ್, ನಟ ದರ್ಶನ್‌ ಭೇಟಿಯಾಗಿ ಈ ಬಗ್ಗೆ ಚರ್ಚಿಸಿದ್ದರು. ಈ ವೇಳೆ ದರ್ಶನ್‌ ಯಾವುದೇ ಸಂಭಾವನೆ ಪಡೆಯದ ಕೃಷಿ ಇಲಾಖೆಯ ರಾಯಭಾರಿಯಾಗಲು ಒಪ್ಪಿಗೆ ನೀಡಿದ್ದರು. ಇದೀಗ ಡಿಬಾಸ್ ದಚ್ಚು, ರಾಜ್ಯ ಕೃಷಿ ಇಲಾಖೆಗೆ ನೂತನ ರಾಯಭಾರಿಯನ್ನಾಗಿ ನೇಮಕ ಮಾಡಲಾಗಿದೆ.

About The Author