Chamarajnagara News : ಚಾಮರಾಜನಗರ ಗುಂಡ್ಲುಪೇಟೆ ಸಮಿಪದ ಕುರುಬರಹುಂಡಿಯಲ್ಲಿ ಅಕ್ರಮ ವಿದ್ಯುತ್ ಬೇಲಿ ಸ್ಪರ್ಶಿಸಿ ಸಲಗ ಸಾವಿಗೀಡಾಗಿದೆ. ಪ್ರಸಕ್ತ ವರ್ಷದಲ್ಲಿ ಈವರೆಗೆ 9 ಆನೆಗಳು ವಿದ್ಯುತ್ ಸ್ಪರ್ಶದಿಂದ ಸಾವಿಗೀಡಾಗಿರುವ ಬಗ್ಗೆ ವರದಿಯಾಗಿದೆ. ಇಂತಹ ಅಕ್ರಮ ವಿದ್ಯುತ್ ಬೇಲಿಗಳನ್ನು ತಿಳಿಯದೆ ಮುಟ್ಟಿ ಹಲವರು ಸಾವಿಗೀಡಾಗಿರುವ ಘಟನೆಗಳೂ ಈ ಹಿಂದೆ ನಡೆದಿವೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಸಚಿವ ಈರ್ಶವರ್ ಖಂಡ್ರೆ ಅವರು ಕಟುವಾಗಿ ಟೀಕಿಸಿದ್ದಾರೆ ಜೊತೆಗೆ ಅರಣ್ಯಾಧಿಕಾರಿಗಳಿಗೆ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವಂತೆ ಹೇಳಿದ್ದಾರೆ.
“ರಾಜ್ಯದಾದ್ಯಂತ ಅಕ್ರಮ ವಿದ್ಯುತ್ ಬೇಲಿಗಳ ವಿರುದ್ಧ ಕ್ರಮ ಜರುಗಿಸಲು ಸೂಚನೆ ನೀಡಿದ್ದೇನೆ. ಈ ಭೂಮಿಯಲ್ಲಿ ಪ್ರತಿಯೊಂದು ಜೀವಿಗೂ ಬದುಕುವ ಹಕ್ಕಿದೆ. ಬೆಳೆ ರಕ್ಷಣೆಗೆ ರೈತರು ವೈಜ್ಞಾನಿಕವಾಗಿ ಸೌರ ವಿದ್ಯುತ್ ಬೇಲಿ ಅಳವಡಿಸಿಕೊಳ್ಳಬೇಕೆ ಹೊರತು ಈ ರೀತಿ ವನ್ಯಮೃಗಗಳ ಅಥವಾ ಯಾವುದೇ ವ್ಯಕ್ತಿಯ ಸಾವಿಗೆ ಕಾರಣವಾಗುವುದು ಸರಿಯಲ್ಲ. ಪ್ರತಿಯೊಂದು ಜೀವವೂ ಅಮೂಲ್ಯ ರೈತರೂ ಈ ವಿಷಯದಲ್ಲಿ ಮಾನವೀಯ ನೆಲೆಗಟ್ಟಿನಲ್ಲಿ ಸ್ಪಂದಿಸಬೇಕು.”
ಅರಣ್ಯಾಧಿಕಾರಿಗಳು ತಮ್ಮ ತಮ್ಮ ವಲಯದಲ್ಲಿರುವ ಅಕ್ರಮ ವಿದ್ಯುತ್ ತಂತಿಬೇಲಿಗಳ ತೆರವಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ.” ಎಂದು ಸಚಿವರು ಈ ಬಗ್ಗೆ ಕಠಿಣ ಕ್ರಮ ಕೈಗೊಂಡಿದ್ದಾರೆ.
Shivaraj Thangadagi : ವಿಪಕ್ಷದವರಿಗೆ ಬಾಯಿ ಚಪಲ: ಸಚಿವ ಶಿವರಾಜ್ ತಂಗಡಗಿ
Shivaraj Thangadagi : ಎಂಪಿ ಚುನಾವಣೆಯಲ್ಲಿ ಬಿಜೆಪಿಗೆ ಚಿಪ್ಪು ಗ್ಯಾರಂಟಿ : ಸಚಿವ ಶಿವರಾಜ್ ತಂಗಡಗಿ
Sharavathi :ಶರಾವತಿ ಕಣಿವೆ ಜಲ ವಿದ್ಯುತ್ ಯೋಜನೆ ಸಂತ್ರಸ್ಥ ಕುಟುಂಬಗಳ ಬೇಡಿಕೆಗಳ ಕುರಿತ ಪರಿಶೀಲನಾ ಸಭೆ