Thursday, April 24, 2025

Latest Posts

Leaopard : ಬಾಲಕನ ಮೇಲೆ ದಾಳಿ  ಮಾಡಿದ ಚಿರತೆ….!

- Advertisement -

Chamaraja Nagara News : ಕಳೆದ ಮೂರು ದಿನಗಳಿಂದ ಯಳಂದೂರು ತಾಲೂಕಿನ ಕೆಸ್ತೂರು, ಮಲ್ಲಿಗಹಳ್ಳಿ, ಕಟ್ನವಾಡಿ, ಹೊಸೂರು ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಅರಣ್ಯ ಇಲಾಖೆ ಮಲ್ಲಿಗೆಹಳ್ಳಿ ಸೇರಿದಂತೆ 6 ಕಡೆ ಬೋನುಗಳನ್ನು ಇಟ್ಟು ಚಿರತೆ ಸೆರೆ ಹಿಡಿಯಲು ಕಾರ್ಯಾಚರಣೆ ನಡೆಸಿದ್ದರು. ಆದರೆ, ಚಿರತೆ ಸೆರೆಯಾಗದೇ ಬಾಲಕನ ಮೇಲೆ ಎರಗಿದ ಆತಂಕಕಾರಿ ಘಟನೆ ನಡೆದಿದೆ.

ಕೆಲವು ದಿನಗಳ ಹಿಂದೆಯಷ್ಟೇ ಹನೂರು ತಾಲೂಕಿನ ಕಗ್ಗಲಿಗುಂದಿ ಗ್ರಾಮದಲ್ಲಿ ಮನೆ ಮುಂದೆ ಆಟ ಆಡುತ್ತಿದ್ದ 6 ವರ್ಷದ ಬಾಲಕಿ ಮೇಲೆ ಚಿರತೆ ದಾಳಿ ಮಾಡಿತ್ತು. ಬಾಲಕಿ 15 ದಿನಗಳ ಕಾಲ ಚಿಕಿತ್ಸೆ ಪಡೆದರೂ ಫಲಕಾರಿಯಾಗದೇ ಅಸುನೀಗಿದ್ದಳು.

ಇದೀಗ ಮಲ್ಲಿಗೆಹಳ್ಳಿ ಗ್ರಾಮದ ಹರ್ಷಿತ್‌(09) ದಾಳಿಗೊಳಗಾಗಿದ್ದಾನೆ. ಗ್ರಾಮದ ಪ್ರಾಥಮಿಕ ಶಾಲೆ ಮುಂಭಾಗದಿಂದ ಮನೆಗೆ ತೆರಳುವಾಗ ಅವಿತು ಕುಳಿತಿದ್ದ ಚಿರತೆ ದಾಳಿ ಮಾಡಿದ್ದು ಇದನ್ನು ಕಂಡ ಜನರು ಚೀರಾಟಿ ಕೂಗಾಡಿದ್ದಾರೆ. ಜನರ ಕಿರುಚಾಟಕ್ಕೆ ಹೆದರಿದ ಚಿರತೆ ಬಾಲಕನ್ನು ಬಿಟ್ಟು ಗದ್ದೆಯತ್ತ ಓಡಿದೆ.

ಹರ್ಷಿತ್‌ ನ ಮುಖ, ಗಂಟಲು, ಕಾಲು, ಹೊಟ್ಟೆಯ ಭಾಗಕ್ಕೆ ಚಿರತೆ ಗೀರಿ ಕಚ್ಚಿ ಗಾಯಗೊಳಿಸಿದ್ದು ಯಳಂದೂರು ಆಸ್ಪತ್ರೆಯಲ್ಲಿ ಬಾಲಕನಿಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

- Advertisement -

Latest Posts

Don't Miss