ಚಿಕ್ಕಮಗಳೂರು ಜಿಲ್ಲೆ: ರಾಜ್ಯದಲ್ಲಿ ಕಳೆದ 15 ದಿನಗಳಿಂದ ಸುರಿಯುತ್ತಿರುವ ಸತತ ಮಲೆಗೆ ಮಲೆನಾಡು ಪ್ರದೇಶಗಳು ಬೆಟ್ಟ ಗುಡ್ಡ ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಅಲ್ಲಲ್ಲಿ ರಸ್ತೆಗಳು ಕುಸಿತದಿಂದಾಗಿ ಪ್ರವಾಸಿಗರಿಗೆ ತೊಂದರೆ ಆಗಬಾರದು ಎನ್ನುವ ಕಾರಣಕ್ಕೆ ಜಿಲ್ಲಾಡಳಿತ ಪ್ರವಾಸಕ್ಕೆ ನಿಷೇದ ಮಾಡಿ ಆದೇಶ ಹೊರಡಿಸಿದ್ದಾರೆ ಹಾಗಾಗಿ ಪ್ರಮುಖ ಪ್ರವಾಸಿ ತಾಣಗಳಾದ ಚಂದ್ರದ್ರೋಣ ಪರ್ವತಕ್ಕೆ ಪ್ರವಾಸಿಗಳಿಗೆ ನಿಷೇದ ಹೇರಲಾಗಿದೆ.
ಜಿಲ್ಲೆಯ ಹಲವೆಡೆ ಮಳೆಯ ಅಬ್ಬರ ಮುಂದುವರೆದಿದ್ದು, ಮಳೆಯಿಂದಾಗಿ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಗುಡ್ಡ ಕುಸಿತವಾಗಿದೆ. ಇಂದಿನಿಂದ ಚಂದ್ರದ್ರೋಣ ಪರ್ವತಕ್ಕೆ ಪ್ರವಾಸಿಗರಿಗೆ ನಿರ್ಬಂಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ರಸ್ತೆ ತೆರವು ಕಾರ್ಯ ಹಿನ್ನೆಲೆ ಜು.28ರವರೆಗೆ ಪ್ರವಾಸಿಗರಿಗೆ ನಿರ್ಬಂಧವಿದೆ. ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ಮುಳ್ಳಯ್ಯನಗಿರಿ, ದತ್ತಪೀಠ, ಹೊನ್ನಮ್ಮನಹಳ್ಳ, ಕೆಮ್ಮಣ್ಣುಗುಂಡಿ, ಸೀತಾಳಯ್ಯನಗಿರಿ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ.
ಹಾಗಾಗಿ ಈ ಬಾರಿಯ ವಿಕೆಂಡ್ ನಲ್ಲಿ ಚಂದ್ರದ್ರೋಣ ಪ್ರವಾಸಕ್ಕೆ ಬರುವ ಹೋಗಬೇಕೆಂದಿರುವ ಪ್ರವಾಸಿಗರಿಗೆ ನಿರಾಸೆ ಉಂಟಾಗಲಿದೆ.
Crocodile : ಕೃಷ್ಣಾ ನದಿ ತೀರದಲ್ಲಿ ಮೊಸಳೆಗಳ ದಂಡು : ಆತಂಕದಲ್ಲಿ ಸ್ಥಳೀಯರು