Wednesday, December 4, 2024

Latest Posts

ಚಂದ್ರಶೇಖರ್ ಗುರೂಜಿಯನ್ನು ಹತ್ಯೆಗೈದ ಹಂತಕರು ಅರೆಸ್ಟ್

- Advertisement -

ಹುಬ್ಬಳ್ಳಿ: ಸರಳ ವಾಸ್ತು’ ಖ್ಯಾತಿಯ  ಚಂದ್ರಶೇಖರ್ ಗುರೂಜಿ ಅವರನ್ನು ಇಂದು ಅಮಾನುಷವಾಗಿ ಕೊಲೆ ಮಾಡಿರುವ  ಆರೋಪಿಗಳನ್ನು ಬಂಧಿಸಲಾಗಿದೆ.

ಮಹಾಂತೇಶ್ ಮತ್ತು ಮಂಜುನಾಥ್ ಬಂಧಿತ ಆರೋಪಿಗಳು. ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರಿಂದ ವಿಶೇಷ ತಂಡವೊಂದನ್ನು ರಚಿಸಿ ಕೇವಲ 4 ಗಂಟೆಗಳಲ್ಲಿ ಬಂಧಿಸಲಾಗಿದೆ. ಗುರೂಜಿಯನ್ನು ಹತ್ಯೆಗೈದು ಕಾರವೊಂದರಲ್ಲಿ ಪರಾರಿಯಾಗುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ.

ಹಂತಕರನ್ನು ಈಗಾಗಲೇ ವಿದ್ಯಾನಗರ ಪೊಲೀಸರು ತೀವ್ರ ವಿಚಾರಣೆ ನಡೆದಿದ್ದು, ಕೊಲೆಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದು ಬಂದಿಲ್ಲ.

ಹತ್ಯೆ ಹೇಗಾಯ್ತು?
ಚಂದ್ರಶೇಖರ್‌ ಗುರೂಜಿ ಇಂದು ಹೋಟೆಲಿನಲ್ಲಿ ತಂಗಿದ್ದರು. ಹೋಟೆಲಿನಲ್ಲಿ ತಂಗಿದ್ದ ಇವರನ್ನು ಕರೆ ಮಾಡಿದ ಇಬ್ಬರು ರಿಸೆಪ್ಶನಿಸ್ಟ್‌ ಜಾಗಕ್ಕೆ ಬರಲು ಹೇಳಿದ್ದಾರೆ.

ಗುರೂಜಿ ಇವರ ಬಳಿ ಬರುತ್ತಿದ್ದಂತೆ ಇಬ್ಬರು ಎದ್ದು ನಿಂತಿದ್ದಾರೆ. ಗುರೂಜಿ ಕುಳಿತ ಬಳಿಕ ಒಬ್ಬ ಆಶೀರ್ವಾದ ಪಡೆಯುವ ನಾಟಕ ಮಾಡಿದ್ದರೆ ಮತ್ತೊಬ್ಬ ನಿಂತಿದ್ದ. ಕೆಲ ಕ್ಷಣದಲ್ಲೇ ಮುಂದುಗಡೆ ನಿಂತಿದ್ದ ಯುವಕ ಚಾಕುವಿನಿಂದ ಇರಿದಿದ್ದಾನೆ. ಈ ವೇಳೆ ಮತ್ತೊಬ್ಬ ಚಾಕುವಿನಿಂದ ಇರಿದಿದ್ದಾನೆ. ನಂತರ ಇಬ್ಬರು ಮನ ಬಂದಂತೆ ಇರಿದು ಬರ್ಬರವಾಘಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಒಟ್ಟು 20 ಸೆಕೆಂಡ್‌ನಲ್ಲಿ 60 ಬಾರಿ ಚಾಕುವಿನಿಂದ ಇರಿಯಲಾಗಿದೆ.

- Advertisement -

Latest Posts

Don't Miss