ಚಂದ್ರು ಹತ್ಯೆ ಕೇಸ್ ಸಿಐಡಿ ತನಿಖೆಗಾಗಿ ವರ್ಗಾವಣೆ – ಗೃಹ ಸಚಿವ ಅರಗ ಜ್ಞಾನೇಂದ್ರ

ಬೆಂಗಳೂರು: ನಗರದಲ್ಲಿ ಹತ್ಯೆಯಾದಂತ ಚಂದ್ರು ಕೊಲೆ ಪ್ರಕರಣವನ್ನು ಸಿಐಡಿಗೆ ತನಿಖೆಗೆ ವರ್ಗಾವಣೆ ಮಾಡಲಾಗಿದೆ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಚಂದ್ರು ಕೊಲೆ‌ ಪ್ರಕರಣ ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಸಿಎಂ ಜೊತೆ ಚರ್ಚೆ ನಡೆಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಎಲ್ಲ ಆಯಾಮಗಳಲ್ಲಿ ತನಿಖೆಗೆ ಸೂಚನೆ ನೀಡಲಾಗಿದೆ ಎಂದರು.

ಚಂದ್ರುವನ್ನು ಅಮಾನುಷವಾಗಿ ಕೊಲೆ ಮಾಡಿದ್ದಾರೆ. ನಮ್ಮ ಪೊಲೀಸ್ ವಿಭಾಗದ ಮೇಲೆ ನಂಬಿಕೆ ಅಪನಂಬಿಕೆ ವಿಚಾರ ಇಲ್ಲಿ ಬರಲ್ಲ. ಸಿಐಡಿಯೂ ನಮ್ಮದೇ ಪೊಲೀಸರ ಇನ್ನೊಂದು ವಿಭಾಗವಾಗಿದೆ. ಅದರಿಂದ ಸಮಗ್ರ ತನಿಖೆ ಆಗಲಿ. ಗೊಂದಲ ಆಯ್ತು ಅನ್ನೋ ಕಾರಣಕ್ಕೆ ಸಿಐಡಿಗೆ ಕೊಟ್ಟಿಲ್ಲ ಎಂದು ಸ್ಪಷ್ಟ ಪಡಿಸಿದರು.

About The Author