ಶ್ರೀರಂಗಪಟ್ಟಣ ಆಸ್ಪತ್ರೆಯಲ್ಲಿ ಅವ್ಯವಸ್ಥೆ- ಉಗ್ರ ಪ್ರತಿಭಟನೆ

ಶ್ರೀರಂಗಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಅವ್ಯವಸ್ಥೆ ಮುಂದುವರಿದಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಹಾಗೂ ಹೋರಾಟಗಾರರು ಇಂದು ಆಸ್ಪತ್ರೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಆಸ್ಪತ್ರೆಯಲ್ಲಿ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿಲ್ಲ, ವೈದ್ಯರು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂಬ ಆರೋಪಗಳು ವ್ಯಕ್ತವಾದವು.

ಪ್ರತಿಭಟನೆಯಲ್ಲಿ ಭಾಗವಹಿಸಿದವರು, ಆಸ್ಪತ್ರೆಯ ಕೆಲವು ವೈದ್ಯರು ಸಾರ್ವಜನಿಕರು ಹಾಗೂ ರೋಗಿಗಳೊಂದಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಆಸ್ಪತ್ರೆಯ ವೈದ್ಯರನ್ನು ಒಳಗೊಂಡಂತೆ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಲಾಯಿತು. ನಿರ್ಲಕ್ಷ್ಯ ತೋರುತ್ತಿರುವ ವೈದ್ಯರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಹಾಗೂ ಆಸ್ಪತ್ರೆಯ ಮೂಲಭೂತ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಈ ಕುರಿತು ಸರ್ಕಾರ ಮತ್ತು ಸಂಬಂಧಪಟ್ಟ ಜನಪ್ರತಿನಿಧಿಗಳು ಕೂಡಲೇ ಗಮನ ಹರಿಸದಿದ್ದರೆ, ಮುಂದಿನ ದಿನಗಳಲ್ಲಿ ಆಸ್ಪತ್ರೆಗೆ ಬೀಗ ಜಡಿದು ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ವರದಿ: ರಂಜಿತ ರೇವಣ್ಣ ನಾಟನಹಳ್ಳಿ

About The Author