Tuesday, April 15, 2025

Latest Posts

CHENNAI: ಸ್ಟಾಲಿನ್ ಗೆ ಸರ್ಕಾರಕ್ಕೆ ರೇ*ಪ್ ಕೇಸ್ ಬಿಸಿ, ಅಣ್ಣಾಮಲೈ ನೇತೃತ್ವದಲ್ಲಿ ಹೊಸ ಹೋರಾಟ

- Advertisement -

ಅಣ್ಣಾ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ನಡೆದ ವಿದ್ಯಾರ್ಥಿನಿ ಮೇಲಿನ ಲೈಂಗಿಕ ದೌರ್ಜನ್ಯವನ್ನು ಖಂಡಿಸಿ, ಸಂತ್ರಸ್ತೆಗೆ ನ್ಯಾಯ ಕೊಡಿಸುವ ಸಲುವಾಗಿ ಪಕ್ಷದ ಮಹಿಳಾ ಘಟಕದ ನೇತೃತ್ವದಲ್ಲಿ ‘ನ್ಯಾಯ ರ್‍ಯಾಲಿ’ ನಡೆಯಲಿದೆ’ ಎಂದು ತಮಿಳುನಾಡಿನ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ.

‘ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿಗಳು ಡಿಎಂಕೆ ಪಕ್ಷದ ಸದಸ್ಯರಾಗಿದ್ದು, ಸತ್ಯವನ್ನು ಮರೆಮಾಚುವ ಯತ್ನ ನಡೆಯುತ್ತಿದೆ’ ಅಂತ ಅಣ್ಣಾಮಲೈ ಎಕ್ಸ್‌ನಲ್ಲಿ ಆರೋಪಿಸಿದ್ದಾರೆ.

‘ಮಹಿಳೆಯರ ಮೇಲಿನ ದೌರ್ಜನ್ಯವನ್ನು ಖಂಡಿಸಿ ಜನವರಿ 3ರಂದು ಉಮಾರತಿ ರಾಜನ್ ಅವರ ನೇತೃತ್ವದಲ್ಲಿ ಮಧುರೈನಿಂದ ಚೆನ್ನೈವರೆಗೆ ನ್ಯಾಯ ರ್‍ಯಾಲಿ ನಡೆಯಲಿದೆ. ರ್‍ಯಾಲಿ ಪೂರ್ಣಗೊಂಡ ನಂತರ ಮಹಿಳಾ ಘಟಕದ ಬೇಡಿಕೆಗಳ ಕುರಿತು ರಾಜ್ಯಪಾಲರಿಗೆ ಜ್ಞಾಪಕ ಪತ್ರವನ್ನು ಸಲ್ಲಿಸಲು ನಿರ್ಧರಿಸಲಾಗಿದೆ’ ಅಂತ ಮಾಹಿತಿ ನೀಡಿದ್ದಾರೆ.

 

ಡಿಸೆಂಬರ್ 23ರಂದು ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ 19 ವರ್ಷದ ವಿದ್ಯಾರ್ಥಿನಿಯ ಮೇಲೆ ವ್ಯಕ್ತಿಗಳಿಬ್ಬರು ಲೈಂಗಿಕ ದೌರ್ಜನ್ಯ ನಡೆಸಿದ್ದು, ಆಕೆಯ ಸ್ನೇಹಿತನ ಮೇಲೂ ಹಲ್ಲೆ ನಡೆಸಿದ್ದರು. ಪ್ರಕರಣ ಸಂಬಂಧ ಇದುವರೆಗೆ ಒಬ್ಬನನ್ನು ಬಂಧಿಸಲಾಗಿದೆ ಆರೋಪಿಗಳು ಡಿಎಂಕೆ ಸದಸ್ಯರು ಬಿಜೆಪಿ ಆರೋಪವನ್ನು ಪಕ್ಷ (ಡಿಎಂಕೆ ) ಅಲ್ಲಗೆಳೆದಿದೆ.

- Advertisement -

Latest Posts

Don't Miss