Hubli News: ಹುಬ್ಬಳ್ಳಿ : ಛತ್ರಪತಿ ಶಿವಾಜಿ ಮಹಾರಾಜರ ಜೀವನ ಚರಿತ್ರೆ ಪುಸ್ತಕಕ್ಕೆ ಮಾತ್ರ ಸೀಮಿತವಾಗಬಾರದು. ಮುಂದಿನ ಪೀಳಿಗೆಯು ಶಿವಾಜಿಯವರ ಬಗ್ಗೆ ತಿಳಿದುಕೊಳ್ಳುವಂತಾಗಬೇಕು ಎಂದು ಹುಬ್ಬಳ್ಳಿ ಶಹರ ತಹಶೀಲ್ದಾರರಾದ ಕಲಗೌಡ ಪಾಟೀಲ ಅವರು ಹೇಳಿದರು.
ಇಂದು ತಾಲೂಕು ಆಡಳಿತಸೌಧದ ತಹಶೀಲ್ದಾರ ಕಾರ್ಯಾಲಯದ ಸಭಾ ಭವನದಲ್ಲಿ ನಡೆದ ಶ್ರೀ ಛತ್ರಪತಿ ಶಿವಾಜಿ ಜಯಂತಿ ಕಾರ್ಯಕ್ರಮವನ್ನು ಛತ್ರಪತಿ ಶಿವಾಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಶಿವಾಜಿ ಅವರ ಆದರ್ಶಗಳು, ಅವರು ಮಾಡಿದ ಕಾರ್ಯಗಳು, ಅವರು ದೇಶಕ್ಕೆ ನೀಡಿದ ಕೊಡುಗೆಯ ಬಗ್ಗೆ ನಾವು ತಿಳಿದುಕೊಳ್ಳಬೇಕು. ಅವರ ಒಳ್ಳೆಯ ಸಂದೇಶಗಳನ್ನು ನಮ್ಮ ಜೀವನದಲ್ಲೂ ಅಳವಡಿಸಿಕೊಳ್ಳಬೇಕು ಎಂದರು.
ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಮಾತನಾಡಿ, ರಾಷ್ಟ್ರದ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಶಿವಾಜಿಯವರ ಶ್ರಮ ಅವಿಸ್ಮರಣೀಯವಾದುದಾಗಿದೆ. ಇಂತಹ ಮಹಾನ್ ವ್ಯಕ್ತಿಯು ಯಾವುದೇ ಒಂದು ಜನಾಂಗಕ್ಕೆ ಮಾತ್ರ ಸೀಮಿತಗೊಳ್ಳಬಾರದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಸಮಾಜದ ಮುಖಂಡರಾದ ಸುನೀಲ ದಳವಿ, ಶಿವುಕುಮಾರ ಶಿಂಧೆ, ನಾರಾಯಣ ವೈದ್ಯ, ಗುರುನಾಥ ಉಳ್ಳಿಕಾಶಿ, ಅರುಣ ಶಿರ್ಕೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಇತರರು ಉಪಸ್ಥಿತರಿದ್ದರು. ಮಲ್ಲಿಕಾರ್ಜುನ ನಿಟ್ಟೂರ ಕಾರ್ಯಕ್ರಮವನ್ನು ನಿರೂಪಿಸಿದರು.
ಸುಪ್ರೀಂಕೋರ್ಟ್ ಸೂಚಿಸಿದ ಸ್ಥಳದಲ್ಲಿ ರಾಮ ಮಂದಿರ ಕಟ್ಟಿಲ್ಲ: ವಿವಾದದ ಬೆನ್ನಲ್ಲೇ ಸಂತೋಷ್ ಲಾಡ್ ಸ್ಪಷ್ಟನೆ
‘ಸಂತೋಷ್ ಲಾಡ್ ರಾಹುಲ್ ಗಾಂಧಿ ತರಹ ಮಾತನಾಡುತ್ತಿದ್ದಾರೆ. ಅವರು ಸ್ವಲ್ಪ ಮೆಚ್ಯೂರ್ ಆಗಿ ಮಾತಾಡಲಿ’