Chhattisgad ಸರ್ಕಾರಿ ಕಚೇರಿಗಳಲ್ಲಿ ಐದು ದಿನ ಮಾತ್ರ ಕೆಲಸ..!

ಛತ್ತೀಸ್ಗಡದ(Chhattisgad) ಮುಖ್ಯಮಂತ್ರಿ ಭೂಪೇಶ್ ಬಘೇಲ್(Bhupesh Baghel) 73ನೇ ಗಣರಾಜ್ಯೋತ್ಸವ(Republic Day)ದ ಅಂಗವಾಗಿ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ವಾರದಲ್ಲಿ ಆರು ದಿನ ಕಾರ್ಯ ನಿರ್ವಹಿಸುವುದನ್ನು ಐದು ದಿನಕ್ಕೆ ಕಡಿತಗೊಳಿಸಿದ್ದಾರೆ. ಈ ಮೂಲಕ ಸರ್ಕಾರಿ ನೌಕರರ ದಕ್ಷತೆ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವ ಕಾರಣದಿಂದ ಸರ್ಕಾರಿ ಕಚೇರಿಗಳಲ್ಲಿ ಐದು ದಿನ ಮಾತ್ರ ಕಾರ್ಯನಿರ್ವಹಿಸಲಿದ್ದಾರೆ ಎಂದು ತಮ್ಮ ಟ್ವಿಟ್ಟರ್(Twitter) ನಲ್ಲಿ ತಿಳಿಸಿದ್ದಾರೆ. ಇದೇ ವೇಳೆ ಪಿಂಚಣಿ ಯೋಜನೆಯನ್ನು ಶೇಕಡ 10% ರಿಂದ 14%ರಂದು ಹೆಚ್ಚಿಸಲಾಗುತ್ತದೆ ಎಂದು ಹೇಳಿದ್ದಾರೆ. ನಂತರ ಮಹಿಳೆಯರ ಸುರಕ್ಷತೆಯನ್ನು ಬಲಪಡಿಸಲು ಎಲ್ಲ ಜಿಲ್ಲೆಗಳಲ್ಲಿ ಮಹಿಳಾ ಸುರಕ್ಷತಾ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಛತ್ತೀಸ್ಗಡದ ಮುಖ್ಯಮಂತ್ರಿ ಭೂಪೇಶ್ ಬಾಘೆಲ್ ತಿಳಿಸಿದ್ದಾರೆ.

About The Author