- Advertisement -
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ರು. ಕಳೆದ ಎರಡು ದಿನಗಳಿಂದ ಮಹಾರಾಷ್ಟ್ರ ಸೇರಿದಂತೆ ಉತ್ತರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.
ಇಂದು ಮುಂಜಾನೆ ನಗರದ HAL ವಿಮಾನ ನಿಲ್ದಾಣದಿಂದ ಪ್ರಯಾಣ ಬೆಳೆಸಿದ ಸಿಎಂ, ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ಪ್ರಾರಂಭಿಸುವ ಮುನ್ನ, ತೋರಣಗಲ್ ಏರ್ ಸ್ಟ್ರಿಪ್ ನಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಮೈತ್ರಿ ಸರ್ಕಾರ ಪತನ ನಂತರ ಮುಖ್ಯಮಂತ್ರಿ ಗದ್ದುಗೆ ಅಲಂಕರಿಸಿರುವ ಬಿಎಸ್ ವೈ, ಸಚಿವ ಸಂಪುಟ ವಿಸ್ತರಣೆ ಸಲುವಾಗಿ ವರಿಷ್ಠ ರ ಭೇಟಿಗಾಗಿ ದೆಹಲಿಗೆ ತೆರಳುತ್ತಿದ್ದು. ಈ ವೇಳೆ ಕರ್ನಾಟಕದಲ್ಲಿ ಸಂಭವಿಸಿರುವ ಪ್ರವಾಹ ಕುರಿತಂತೆ, ಕೇಂದ್ರ ನಾಯಕರ ಗಮನಕ್ಕೆ ತರುವುದಾಗಿ ತಿಳಿಸಿದ್ದಾರೆ.
- Advertisement -