ಬೆಂಗಳೂರು : ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಮಂಡಳಿಯ ಸಭೆಯಲ್ಲಿ ಜಾತಿ ಗಣತಿಗಾಗಿ ದೇಶದಾದ್ಯಂತ ಅಭಿಯಾನ ನಡೆಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬುಧವಾರ ನಗರದ ಶಾಂಗ್ರಿಲಾ ಹೋಟೆಲ್‌ನಲ್ಲಿ ಬುಧವಾರ ನಡೆದ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು. ತೆಲಂಗಾಣದ ಜಾತಿ ಸಮೀಕ್ಷೆಯನ್ನು ಮಾದರಿಯಾಗಿ ತೆಗೆದುಕೊಂಡು ಪ್ರಸ್ತಾವಿತ ರಾಷ್ಟ್ರೀಯ ಜನಗಣತಿಯನ್ನು ನಡೆಸಬೇಕು. ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳನ್ನು ಬೆಂಗಳೂರು ಘೋಷಣೆ ಎಂದು ಕರೆದಿದ್ದಾರೆ.
ಸಾಮಾಜಿಕ ನ್ಯಾಯವನ್ನು ಬೆಂಬಲಿಸಿದ್ದಕ್ಕಾಗಿ ಮತ್ತು ಸಮಾಜದ ಅಂಚಿನಲ್ಲಿರುವ ವರ್ಗಗಳ ಪರವಾಗಿ ಮಾತನಾಡಿದ್ದಕ್ಕಾಗಿ ರಾಹುಲ್ ಗಾಂಧಿ ಅವರನ್ನು ನ್ಯಾಯ ಯೋಧ ಎಂದು ಸಂಬೋಧಿಸಿ ಸಲಹಾ ಮಂಡಳಿಯು ಸರ್ವಾನುಮತದಿಂದ ಧನ್ಯವಾದ ಅರ್ಪಿಸಿದೆ.
ರಾಹುಲ್ ಗಾಂಧಿ ಅವರ ದೃಢ ಸಂಕಲ್ಪವು ಮನುವಾದಿ ಮೋದಿ ಸರ್ಕಾರವನ್ನು ದೇಶದಲ್ಲಿ ಜಾತಿ ಗಣತಿ ನಡೆಸುವ ನ್ಯಾಯಯುತ ಮತ್ತು ಸಾಂವಿಧಾನಿಕ ಬೇಡಿಕೆಗೆ ಮಣಿಯುವಂತೆ ಮಾಡಿದೆ. ಈ ಐತಿಹಾಸಿಕ ಸಾಧನೆಗೆ ರಾಹುಲ್ ಗಾಂಧಿ ಅವರಿಗೆ ಭಾರತದ ಎಲ್ಲ ಹಿಂದುಳಿದ ವರ್ಗಗಳ ಪರವಾಗಿ ಮಂಡಳಿಯು ತನ್ನ ಮುಕ್ತ ಮೆಚ್ಚುಗೆ ಮತ್ತು ಕೃತಜ್ಞತೆಯನ್ನು ವ್ಯಕ್ತಪಡಿಸಿದೆ ಎಂದು ಸಿದ್ದರಾಮಯ್ಯ ತಿಳಿಸಿದೆ.
ಜಾತಿ ಸಮೀಕ್ಷೆ ನಡೆಸುವ ಕೇಂದ್ರದ ನಿರ್ಧಾರವನ್ನು ಒಂದು ಮೈಲಿಗಲ್ಲು. ನಮ್ಮ ಸಂವಿಧಾನವು ಕಲ್ಪಿಸಿರುವಂತೆ ಸಾಮಾಜಿಕ ನ್ಯಾಯವನ್ನು ಖಚಿತಪಡಿಸಿಕೊಳ್ಳುವಲ್ಲಿ ಜಾತಿ ಗಣತಿಯು ಕೇವಲ ಒಂದು ಸಣ್ಣ ಹೆಜ್ಜೆಯಾಗಿದೆ. ಕೈಯಲ್ಲಿ ಕಾಂಗ್ರೆಸ್ ಪಕ್ಷದ ಧ್ವಜ ಮತ್ತು ನಮ್ಮ ಹೃದಯದಲ್ಲಿ ನ್ಯಾಯದೊಂದಿಗೆ, ನಾವು ಈ ಹೋರಾಟವನ್ನು ಮುಂದಕ್ಕೆ ಕೊಂಡೊಯ್ಯುತ್ತೇವೆ ಎಂದು ಸಮಿತಿಗೆ ಭರವಸೆ ನೀಡಿದ್ದಾರೆ.
ನ್ಯಾಯ ಯೋಧ ರಾಹುಲ್ ಗಾಂಧಿ ಅವರ ಅಚಲ ನಾಯಕತ್ವದಲ್ಲಿ, ದೇಶದಲ್ಲಿ ಸಮಾನತೆ ಮತ್ತು ಸಮಾನ ಸಮಾಜಕ್ಕೆ ಕಾರಣವಾಗುವ ಸಾಮಾಜಿಕ ಸಬಲೀಕರಣದ ಅಂತಿಮ ಸಾಂವಿಧಾನಿಕ ಉದ್ದೇಶಗಳನ್ನು ಸಾಧಿಸುವ ಗುರಿಯನ್ನು ಹೊಂದಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಸಮ್ಮಿಶ್ರ ಸರ್ಕಾರದಲ್ಲಿ ನಂತರದ ಮೂರು ವರ್ಷ, ಹತ್ತು ತಿಂಗಳು ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದರೂ, ಆಯೋಗದ ವರದಿಯನ್ನು ಸ್ವೀಕರಿಸುವುದಾಗಲಿ, ಜಾರಿ ಮಾಡುವ ಬಗ್ಗೆಯಾಗಲಿ ಕೈಹಾಕಲಿಲ್ಲ. ನಂತರದ ಹಿಂದುಳಿದ ವರ್ಗದ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ ಹೆಗ್ಗಡೆಯವರು ಶಿಫಾರಸ್ಸುಗಳನ್ನು ಮಾಡಿ ವರದಿಯನ್ನು ಸಿದ್ದಪಡಿಸಿ ಸಲ್ಲಿಸಿದರು. ಈ ವರದಿಯನ್ನು ನಮ್ಮ ಸಚಿವ ಸಂಪುಟದಲ್ಲಿ ಮಂಡಿಸಿ ಚರ್ಚಿಸಿತ್ತು. ಈ ವರದಿಯು ಹತ್ತು ವರ್ಷದ ಹಿಂದಿನ ಸಮೀಕ್ಷೆಯನ್ನು ಆಧರಿಸಿರುವುದರಿಂದ ಪುನ: ಸಮೀಕ್ಷೆ ಮಾಡುವ ನಿರ್ಣಯವನ್ನು ಸಚಿವ ಸಂಪುಟ ಕೈಗೊಂಡಿದೆ ಎಂದು ಮಾಹಿತಿ ನೀಡಿದ್ದಾರೆ.
ಇನ್ನೂ ಸಚಿವ ಸಂಪುಟದ ನಿರ್ಣಯದಂತೆ ಹಿಂದುಳಿದ ವರ್ಗದ ಆಯೋಗಕ್ಕೆ ಮೂರು ತಿಂಗಳ ಕಾಲಾವಕಾಶದಲ್ಲಿ ಮರುಸಮೀಕ್ಷೆ ನಡೆಸಿ ವರದಿ ನೀಡುವಂತೆ ಸೂಚನೆ ನೀಡಲಾಗಿದೆ. ಆಯೋಗವು ನೀಡಿದ ವರದಿಯನ್ನು ಜಾರಿ ಮಾಡಲಾಗುವುದು. 1931 ರ ನಂತರ ಜಾತಿ ಜನಗಣತಿಯನ್ನು ಕೈಗೊಂಡ ಮೊದಲ ರಾಜ್ಯ ಕರ್ನಾಟಕ. ಆದ್ದರಿಂದಲೇ ಅದನ್ನು ಕರ್ನಾಟಕ ಮಾದರಿ ಎಂದು ಕರೆಯಲಾಗುತ್ತದೆ ಎಂದು ಸಿದ್ದರಾಮಯ್ಯ ವಿಪಕ್ಷಗಳ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.