Wednesday, April 16, 2025

Latest Posts

ಗದಗಿನ ಕನ್ನಡ ರಥದ ಮೆರವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಗಿದ ಪರಿ

- Advertisement -

Gadag News: ಗದಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ಕನ್ನಡ ಸಂಭ್ರಮ-50” ರ ಅದ್ಧೂರಿ ಕಾರ್ಯಕ್ರಮಕ್ಕಾಗಿ ಗದಗ ಪ್ರವೇಶಿಸಿ ವೀರನಾರಾಯಣ ದೇವಸ್ಥಾನದಲ್ಲಿ ನಾರಾಯಣನ ದರ್ಶನ ಪಡೆದರು.

ಬಳಿಕ ಕನ್ನಡ ರಥದ ಮೆರವಣಿಗೆಯಲ್ಲಿ ಸಹಸ್ರ ಸಹಸ್ರ “ಅರಿಶಿನ-ಕುಂಕಮ” ಬಣ್ಣದ ಬಾವುಟಗಳು, ಕಲಶಗಳು ಮತ್ತು ಕನ್ನಡ ಶಾಲುಗಳನ್ನು ಹೊದ್ದ ಕನ್ನಡ ಕಾರ್ಯಕರ್ತರ ಜಯಘೋಷಗಳ ನಡುವೆ ಮೆರವಣಿಗೆಯಲ್ಲಿ ತೆರಳಿದರು.

ಗದಗಿನ ಮುಖ್ಯರಸ್ತೆಗಳಲ್ಲಿ ಸಾಗಿದ ಕನ್ನಡ ರಥವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಭಿಮಾನಿಗಳು, ಕಾರ್ಯಕರ್ತರು ಹೂಮಳೆಗರೆದು ಸ್ವಾಗತಿಸಿದರು.

ಹಾದಿಯುದ್ದಕ್ಕೂ ಮನೆಗಳ ಮುಂದೆ ಕನ್ನಡದ ರಂಗೋಲಿ, ಬಾವುಟಗಳು ಕಣನ ಸೆಳೆಯುತ್ತಿದ್ದರೆ, ಮಹಿಳೆಯರು, ಮಕ್ಕಳು ರಥಕ್ಕೆ ಹೂಮಳೆ ಗರೆಯುತ್ತಾ, ರಥದ ಚಕ್ರಗಳಿಗೆ ಹಣ್ಣು ಕಾಯಿ, ಹಾಲಿನ ಅಭಿಷೇಕ ನಡೆಸುತ್ತಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಕೆ.ಪಾಟೀಲ್, ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಮಂಕಳ ವೈದ್ಯ ಸೇರಿ ಹಲವು ಮುಖಂಡರು ಮೆರವಣಿಗೆಯಲ್ಲಿದ್ದರು.

ಪತ್ನಿ ಜತೆ ಅಕ್ರಮ ಸಂಬಂಧ ಹೊಂದಿದ್ದ ಇನ್​ಸ್ಪೆಕ್ಟರ್​ನ ಮರ್ಮಾಂಗ ಕತ್ತರಿಸಿದ ಕಾನ್‌ಸ್ಟೇಬಲ್​

ಗೃಹಿಣಿ ಆತ್ಮಹತ್ಯೆ ಕೇಸ್, ವಾರದ ಬಳಿಕ ಹೊರಬಿತ್ತು ಸಾವಿನ ಹಿಂದಿನ ಅಸಲಿ ಕಹಾನಿ

‘ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕನನ್ನ ನೇಮಕ ಮಾಡುವ ಸಾಮರ್ಥ್ಯ ಇಲ್ಲ’

- Advertisement -

Latest Posts

Don't Miss