Political News: ಚಿಕ್ಕಬಳ್ಳಾಪುರದ ಬಿಜೆಪಿ ಅಧ್ಯಕ್ಷ ಯಾರಾಗುತ್ತಾರೆ ಎಂಬ ಚರ್ಚೆ ಜೋರಾಗುತ್ತಿರುವ ಬೆನ್ನಲ್ಲೇ, ಸಂದೀಪ್ ರೆಡ್ಡಿ ಕಾಂಗ್ರೆಸ್ ಸೇರುತ್ತಾರಾ ಅನ್ನುವ ಚರ್ಚೆ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಜೋರಾಗಿದೆ.
ಚಿಕ್ಕಬಳ್ಳಾಪುರ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಸಂದೀಪ್ ರೆಡ್ಡಿ ಆಯ್ಕೆಯಾಗುವುದನ್ನು ಬಿಜೆಪಿ ವರಿಷ್ಠರು ತಡೆಹಿಡಿದಿದ್ದಾರೆ. ಈ ಕಾರಣಕ್ಕೆ ಸಂದೀಪ್ ರೆಡ್ಡಿಯವರನ್ನು ಕಾಂಗ್ರೆಸ್‌ಗೆ ಸೇರಿಸಿಕ“ಳ್ಳುವ ಪ್ಲಾನ್ ನಡೀತಿದೆ ಎನ್ನಲಾಗಿದೆ.
ವಿಶೇಷವಾಗಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಪ್ರದೀಪ್ ಈಶ್ವರ್ ವಿರುದ್ಧವಾಗಿರುವ ಕೆಲ ಕಾಂಗ್ರೆಸ್ ನಾಯಕರ ಗುಂಂಪಿನಲ್ಲಿ ಸಂದೀಪ್ ರೆಡ್ಡಿಯವರನ್ನು ಕಾಂಗ್ರೆಸ್‌ಗೆ ಸೇರಿಸಿಕ“ಳ್ಳುವ ಬಗ್ಗೆ ಉತ್ಸಾಹದಲ್ಲಿದ್ದಾರೆ ಎನ್ನಲಾಗಿದೆ.
ಈ ಹಿಂದೆ ಸಂದೀಪ್ ರೆಡ್ಡಿ ಅವರ ತಾಯಿ ಕಾಂಗ್ರೆಸ್‌ನಿಂದ ಮಂಡಿಕಲ್ಲು ಜಿಲ್ಲಾಪಂಚಾಯಿತಿ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಸಂದೀಪ್ ರೆಡ್ಡಿ ಅವರ ಫ್ಯಾಮಿಲಿ ರಾಜಕೀಯ ಶುರು ಮಾಡಿದ್ದು ಕೂಡ ಕಾಂಗ್ರೆಸ್ ಮೂಲದಿಂದಲೇ ಅನ್ನೋದು ವಿಶೇಷ.
ಸಂದೀಪ್ ರೆಡ್ಡಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸಕ್ರೀಯರಾಗಿದ್ದಾರೆ. ಹಳ್ಳಿ ಹಳ್ಳಿಗೆ ಭೇಟಿ ನೀಡುತ್ತಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಅವರು ಭಾಗವಹಿಸುವ ಎಲ್ಲಾ ಸಾಧ್ಯತೆಗಳಿದೆ ಎಂದು ಹೇಳಲಾಗುತ್ತಿದೆ.
ಜನವರಿ 29ರಂದು ಬಿಜೆಪಿ ಜಿಲ್ಲಾ ಅಧ್ಯಕ್ಷರಾಗಿ ಸಂದೀಪ್ ರೆಡ್ಡಿಯವರನ್ನು ಪಕ್ಷವೂ ನೇಮಕ ಮಾಡಿತ್ತು. ಇದಕ್ಕೆ ಡಾ.ಕೆ.ಸುಧಾಕರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ವಿಜಯೇಂದ್ರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ವಾಗ್ದಾಳಿ ನಡೆಸಿದ್ದರು. ಅಲ್ಲದೇ ಬಿಜೆಪಿ ಕೇಂದ್ರ ನಾಯಕರಿಗೆ ದೂರು ಸಹ ನೀಡಿದ್ದರು. ಬಳಿಕ ವಿಜಯೇಂದ್ರ ಬಣದವರು ಸಹ ಸುಧಾಕರ್ ವಿರುದ್ಧ ಹರಿಹಾಯ್ದಿದ್ದರು.
ಫೆಬ್ರವರಿ 10ರಂದು ಬಿಜೆಪಿ ಜಿಲ್ಲಾಧ್ಯಕ್ಷರ ಆಯ್ಕೆಗೆ ಬಿಜೆಪಿ ವರಿಷ್ಠರು ತಡೆನೀಡಿದ್ದರು. ಅಲ್ಲಿಂದ ಇಲ್ಲಿಯವರೆಗೂ ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ನಡೆಯಲಿಲ್ಲ. ಹಾಗಾಗಿ ಈ ಬಗ್ಗೆ ಮತ್ತೆ ಚರ್ಚೆ ಶುರುವಾಗಿದ್ದು, ಸಂದೀಪ್ ರೆಡ್ಡಿಯವರೇ ಅಧ್ಯಕ್ಷರಾಗಿ ಮುಂದುವರಿಯುತ್ತಾರಾ ಅಥವಾ ಸುಧಾಕರ್ ಬಣದವರು ಅಧ್ಯಕ್ಷರಾಗುತ್ತಾರಾ, ಅಥವಾ ಬೇರೆ ಯಾರಾದ್ರೂ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗುತ್ತಾರಾ ಅನ್ನೋ ಕುತೂಹಲ ಮನೆ ಮಾಡಿದೆ.
ಇನ್ನು ಜಿಲ್ಲಾಧ್ಯಕ್ಷ ಸ್ಥಾನದಿಂದ ಕೆಳಗಿಳಿದರೆಂದು ಸಂದೀಪ್ ರೆಡ್ಡಿ ಕೆಲಸ ಮಾಡುವುದನ್ನು ನಿಲ್ಲಿಸಲಿಲ್ಲ. ಅವರ ಭಗತ್ ಸಿಂಗ್ ಚಾರಿಟೇಬಲ್ ಟ್ರಸ್ಟ್ ಮೂಲಕ ಸಮಾಜ ಸೇವೆ ಮಾಡುತ್ತಿದ್ದಾರೆ. ತಮ್ಮದೇ ಆದ ಯುವಪಡೆ ಕಟ್ಟುತ್ತಿದ್ದಾರೆ. ಹೀಗಾಗಿ ಇಷ್ಟು ಆ್ಯಕ್ಟೀವ್ ಆಗಿರುವ ಸಂದೀಪ್ ರೆಡ್ಡಿಯವರನ್ನು ಕಾಂಗ್ರೆಸ್‌ಗೆ ಸೇರಿಸಿಕ“ಳ್ಳಬೇಕು ಎಂಬ ಚರ್ಚೆ ಶುರುವಾಗಿದೆ.