- Advertisement -
Chikkamagaluru News:
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನಲ್ಲಿ ತಿಂಗಳಲ್ಲಿ ಇಬ್ಬರು ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಹಾಗಾಗಿ ಇಂದು ಮೂಡಿಗೆರೆ ತಾಲೂಕಿನ ಜನ ಅರಣ್ಯ ಇಲಾಖೆ ಮೇಲೆ ಕೆಂಡಾಮಂಡಲರಾಗಿದ್ದರು. ಆಗಸ್ಟ್ ೧೫ರಂದು ದನ ಹುಡುಕುತ್ತಿದ್ದ ವ್ಯಕ್ತಿ ಹಾಗೂ ನಿನ್ನೆ ತೋಟದಿಂದ ಬರುತ್ತಿದ್ದ ೪೫ ರ‍್ಷದ ವ್ಯಕ್ತಿಯನ್ನ ಆನೆ ಬಲಿ ಪಡೆದಿತ್ತು. ಪ್ರತಿ ಬಾರಿ ಆನೆ ದಾಳಿಯಾದಾಗಲೂ ಅಧಿಕಾರಿಗಳು ನಮ್ಮ ಮೂಗಿಗೆ ತುಪ್ಪ ಸವರುತ್ತಾರೆ ಎಂದು ಸ್ಥಳೀಯರ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದರು. ಇಂದು ಮೃತದೇಹವನ್ನ ಅರಣ್ಯ ಇಲಾಖೆ ಬಾಗಿಲಲ್ಲಿ ಇಟ್ಟು ಈ ಸಾವಿಗೆ ಅಧಿಕಾರಿಗಳೇ ಕಾರಣ, ಅಧಿಕಾರಿಗಳು ಮಾಡಿದ ಕೊಲೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ ಅರಣ್ಯ ಇಲಾಖೆಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ಪ್ರತಿಭಟನಾಕಾರರ ಮೇಲೆ ಮನಸ್ಸೋ ಇಚ್ಛೆ ಲಾಠಿ ಬೀಸಿದ್ದಾರೆ ಎಂಬುವುದಾಗಿ ತಿಳಿದು ಬಂದಿದೆ.
- Advertisement -