Chikkamagaluru news:
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಹಾನಿ ಪ್ರದೇಶಗಳನ್ನು ವೀಕ್ಷಣೆ ಮಾಡುವ ನಿಟ್ಟಿನಲ್ಲಿ ನಿನ್ನೆ ಸಿದ್ದರಾಮಯ್ಯ ಚಿಕ್ಕಮಗಳೂರಿನಲ್ಲಿ ವಾಸ್ತವ್ಯ ಹೂಡಿದ್ದರು. ಇಂದು ಶೃಂಗೇರಿ, ಕೊಪ್ಪ, ಮೂಡಿಗೆರೆ ತಾಲೂಕಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರವಾಸ ಕೈಗೊಳ್ಳಲಿದ್ದು,ಬೆಳಗ್ಗೆ ಶೃಂಗೇರಿ, ಕೊಪ್ಪ, ಮಧ್ಯಾಹ್ನ ಮೂಡಿಗೆರೆಯಲ್ಲಿ ಪ್ರವಾಸ ಮಾಡಲಿದ್ದಾರೆ. ಬೆಳಿಗ್ಗೆ 8ಕ್ಕೆ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ ನಿವಾಸದಲ್ಲಿ ಉಪಹಾರ ಸೇವಿಸಿ, ಬಳಿಕ ಶೃಂಗೇರಿ ಕ್ಷೇತ್ರದ ಬಾಳೆಹೊನ್ನೂರು, ಕೊಪ್ಪ, ಶೃಂಗೇರಿ ತಾಲ್ಲೂಕಿನ ನೆರೆ ಪ್ರದೇಶಗಳಿಗೆ ಭೇಟಿ ನೀಡಿ ತದನಂತರ ಶೃಂಗೇರಿಯಿಂದ ಮೂಡಿಗೆರೆ ಕ್ಷೇತ್ರ, ಮೂಡಿಗೆರೆ ಕ್ಷೇತ್ರದ ಹಿರೇಬೈಲು, ಕಳಸ, ಕೊಟ್ಟಿಗೆಹಾರದಲ್ಲಿ ಹಾನಿ ವೀಕ್ಷಣೆ ನಡೆಸಲಿದ್ದಾರೆ. ಇದೇ ವೇಳೆ ಮರ ಬಿದ್ದು ಇಬ್ಬರು ಮಹಿಳೆಯರು ಮೃತಪಟ್ಟ ತಲಗೂರು ಗ್ರಾಮಕ್ಕೂ ಭೇಟಿ ನೀಡಲಿದ್ದಾರೆ. ಪರಿಶೀಲನೆ ನಂತರ ಮೂಡಿಗೆರೆ ಐಬಿಯಲ್ಲಿ ಕಾಫಿ ಬೆಳೆಗಾಗರರೊಂದಿಗೆ ಸಭೆ ನಡೆಸಿ ಬೆಂಗಳೂರಿಗೆ ಪ್ರಯಾಣ ಕೈಗೊಳ್ಳಲಿದ್ದಾರೆ.
ವಿವಾದಾತ್ಮಕ ಹೇಳಿಕೆ ನೀಡಿದ ಸಿದ್ದರಾಮಯ್ಯ ಹಿಂದೂ ಹಾಗೂ ಬಿಜೆಪಿ ಕಾರ್ಯಕರ್ತರ ಆಕ್ರೋಶಕ್ಕೆ ತುತ್ತಾಗಿದ್ದು, ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತ ಪಡಿಸಿದ್ದರು. ಕೊಡಗಿನಲ್ಲಿ ಸಂಭವಿಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆಯಬಾರದು ಎಂಬ ಹಿನ್ನೆಲೆಯಿಂದ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.
ರಸ್ತೆ ಬದಿ ಮತ್ತು ಪಾದಚಾರಿ ಮಾರ್ಗದಲ್ಲಿನ ಕಟ್ಟಡ ನಿರ್ಮಾಣ ವಸ್ತು ತೆರವುಗೊಳಿಸಿ – ಬಿಬಿಎಂಪಿ ಮುಖ್ಯ ಆಯುಕ್ತರ ಆದೇಶ