Wednesday, March 12, 2025

Latest Posts

2- 6 ವರ್ಷದೊಳಗಿನ ಮಕ್ಕಳಿಗೆ ಕೊವ್ಯಾಕ್ಸಿನ್ ಲಸಿಕೆಯ ಎರಡನೇ ಡೋಸ್ ನೀಡುವ ಸಾಧ್ಯತೆ

- Advertisement -

www.karnatakatv.net : ಕೋವಿಡ್ 19 ಲಸಿಕಾ ಪ್ರಯೋಗಗಳ ಭಾಗವಾಗಿ, ಭಾರತ್ ಬಯೋಟೆಕ್ ಸಂಸ್ಥೆ ಮುಂದಿನ ವಾರ 2 ರಿಂದ 6 ವರ್ಷದೊಳಗಿನ ಮಕ್ಕಳಿಗೆ ಕೊವ್ಯಾಕ್ಸಿನ್ ಲಸಿಕೆಯ ಎರಡನೇ ಡೋಸ್ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಈಗಾಗಲೆ 6 ರಿಂದ 12 ವರ್ಷದೊಳಗಿನ ಮಕ್ಕಳಿಗೆ ಎರಡನೇ ಡೋಸ್ ನ ಪ್ರಯೋಗ ದೆಹಲಿಯ ಆಲ್ ಇಂಡಿಯಾ ಇನ್ಸ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ನಲ್ಲಿ ಮಾಡಲಾಗಿದೆ.

ಲಸಿಕಾ ಪ್ರಯೋಗಾತ್ಮಕ ಪರೀಕ್ಷೆಗೆ 12 ರಿಂದ 18, 6 ರಿಂದ 12 ಹಾಗೂ 2 ರಿಂದ 6 ವರ್ಷಗಳ ಮೂರು ಗುಂಪುಗಳನ್ನಾಗಿ ಮಾಡಲಾಗಿದ್ದು, ಸದ್ಯ 2 ರಿಂದ 6 ವರ್ಷದ ಮಕ್ಕಳಿಗೆ ಲಸಿಕೆಯ ಎರಡನೇ ಡೋಸ್ ನೀಡುವ ಪ್ರಯೋಗಕ್ಕೆ ಮುಂದಾಗಿದೆ.

- Advertisement -

Latest Posts

Don't Miss