ಬಿಹಾರ ವಿಧಾನಸಭೆಯ ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭಗೊಳ್ಳುವ ಮುನ್ನ ಎನ್‌ಡಿಎ ಮೈತ್ರಿಕೂಟವು ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಮಾತುಕತೆಯಲ್ಲಿ ತೊಡಗಿದೆ. NDA ಮೈತ್ರಿಕೂಟದ ಅಡಿಯಲ್ಲಿ ಸ್ಪರ್ಧಿಸಲು ಚಿರಾಗ್ ಸಿದ್ದರಾಗಿದ್ದಾರೆ. 235 ವಿಧಾನಸಭಾ ಕ್ಷೇತ್ರಗಳ ಪೈಕಿ 40 ಕ್ಷೇತ್ರ ಬಿಟ್ಟುಕೊಡುವಂತೆ ಚಿರಾಗ್ ಪಟ್ಟು ಹಿಡಿದಿದ್ದು, ಬಿಜೆಪಿ ಕೇವಲ 15 ಕ್ಷೇತ್ರಗಳನ್ನು ಬಿಟ್ಟುಕೊಡಲು ಸಮ್ಮತಿಸಿದೆ.
ಲೋಕಜನಶಕ್ತಿಯ ನಾಯಕ ಚಿರಾಗ್ ಪಾಸ್ವಾನ್ ಅವರು ಮಂಗಳವಾರ ಬಿಹಾರದ ಬಿಜೆಪಿ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಅವರನ್ನು ಭೇಟಿಯಾಗಿ ಸೀಟು ಹಂಚಿಕೆ ವಿಚಾರವಾಗಿ ಮಾತುಕತೆ ನಡೆಸಿದರು. ಬಿಜೆಪಿ ಹಾಗೂ ಜೆಡಿಯು ತಲಾ 100 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಮುಂದಾಗಿದೆ.
ಉಳಿದ 35 ಸ್ಥಾನಗಳಲ್ಲಿ LGP ಜೊತೆಗೆ VIP, ಹಿಂದೂಸ್ತಾನ್ ಅವಾಮಿ ಪಕ್ಷ, ರಾಷ್ಟ್ರೀಯ ಲೋಕ ಸಮತಾ ಪಕ್ಷ ಕಣಕ್ಕಿಳಿಸಲು ಚಿಂತನೆ ನಡೆಸಿದೆ. ಮೈತ್ರಿಪಕ್ಷಗಳಿಗೆ ಕಡಿಮೆ ಕ್ಷೇತ್ರ ಬಿಟ್ಟುಕೊಟ್ಟರೆ, NDA ಒಕ್ಕೂಟಕ್ಕೆ ಅರ್ಥವಿಲ್ಲ ಎಂದು ಚಿರಾಗ್ ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಧರ್ಮೇಂದ್ರ ಪ್ರಧಾನ್ ನಿರ್ಧಾರದ ಕುರಿತು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಮುಂದೆ ಚಿರಾಗ್ ಈಗಾಗಲೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 2020ರ ವಿಧಾನಸಭಾ ಚುನಾವಣೆಯಲ್ಲಿ LPU 143 ಕ್ಷೇತ್ರಗಳಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿ, ಒಂದು ಕ್ಷೇತ್ರದಲ್ಲಿ ಗೆಲುವು ಪಡೆದಿತ್ತು. ಆದರೆ ಹಲವು ಕ್ಷೇತ್ರಗಳಲ್ಲಿ ನಿತೀಶ್ ಕುಮಾರ್ ನೇತೃತ್ವದ JDU ಅಭ್ಯರ್ಥಿಗಳ ಸೋಲಿಗೆ ಕಾರಣವಾಗಿತ್ತು.
2024ರ ಲೋಕಸಭಾ ಚುನಾವಣೆಯಲ್ಲಿ ಚಿರಾಗ್ ಅವರು ಎಲ್‌ಜೆಪಿ ಪಕ್ಷವನ್ನು ವಿಭಜಿಸಿ, LJP ಪಕ್ಷವನ್ನು ಸ್ಥಾಪಿಸಿದ್ದರು. ನಂತರ ನಡೆದ ಲೋಕಸಭಾ ಚುನಾವಣೆಯಲ್ಲಿ 5 ಕ್ಷೇತ್ರಗಳಲ್ಲಿ ಗೆಲುವು ಪಡೆದಿದ್ದರು. ಲೋಕಸಭಾ ಚುನಾವಣೆಯಲ್ಲಿ ಗೆಲುವು ಪಡೆದ ಕ್ಷೇತ್ರಗಳಲ್ಲಿ ತಲಾ 2 ವಿಧಾನಸಭಾ ಕ್ಷೇತ್ರಗಳನ್ನು ಬಿಟ್ಟುಕೊಡಬೇಕು ಎಂದು ಚಿರಾಗ್ ಬೇಡಿಕೆ ಇಟ್ಟಿದ್ದಾರೆ. ಹೀಗಾಗಿ ಈ ವಾರಾಂತ್ಯದಲ್ಲಿ ಬಿಜೆಪಿ ಸೀಟು ಹಂಚಿಕೆ ಕುರಿತು ಮಾತುಕತೆ ನಡೆಸಲಿದೆ.
ಜಿತನ್‌ರಾಮ್ ಮಾಂಜಿ ನೇತೃತ್ವದ ಹಿಂದೂಸ್ತಾನ್ ಅವಾಮಿ ಮೋರ್ಚಾ, ಉಪೇಂದ್ರ ಕುಶ್ವಾಹಾ ನೇತೃತ್ವದ RLSP ತಲಾ 15 ರಿಂದ 20 ಕ್ಷೇತ್ರಗಳಿಗೆ ಪಟ್ಟು ಹಿಡಿದಿವೆ. ಆದರೆ, ಬಿಜೆಪಿ ಮಾತ್ರ ಎರಡು 10ಕ್ಕಿಂತಲೂ ಕಡಿಮೆ ಸೀಟು ನೀಡಲು ನಿರ್ಧರಿಸಿದೆ. ಚಿರಾಗ್ ಅವರಿಗೆ HAM ಹಾಗೂ RLSP ಗಿಂತ ಹೆಚ್ಚಿನ ಸೀಟು ಬಿಟ್ಟು ಕೊಡಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ. ಮಾತುಕತೆ ಯಶಸ್ವಿಯಾಗದಿದ್ದರೆ, ಪ್ರಶಾಂತ್ ಕಿಶೋರ್ ಅವರ ಜನ್ ಸುರಾಜ್ ಪಕ್ಷದ ಜೊತೆಗೂ ಕೈ ಜೋಡಿಸಲು ಹಿಂಜರಿಯುವುದಿಲ್ಲ ಎಂದು ಚಿರಾಗ್ ಸುಳಿವು ನೀಡಿದ್ದಾರೆ.
ವರದಿ : ಲಾವಣ್ಯ ಅನಿಗೋಳ