- Advertisement -
ಸ್ಯಾಂಡಲ್‌ವುಡ್ ನಟ ಚಿರಂಜೀವಿ ಸರ್ಜಾ(39) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಚಿರಂಜೀವಿ ಸರ್ಜಾಗೆ ಉಸಿರಾಟದ ಸಮಸ್ಯೆ ಎದುರಾಗಿದ್ದು, ಚಿಕಿತ್ಸೆಗಾಗಿ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಚಿರಂಜೀವಿ ಸರ್ಜಾ ಕೊನೆಯುಸಿರೆಳೆದಿದ್ದಾರೆ.
1980 ಅಕ್ಟೋಬರ್ 17ರಂದು ಜನಿಸಿದ ಚಿರಂಜೀವಿ ಸರ್ಜಾ, ಬೆಂಗಳೂರಿನಲ್ಲೇ ತಮ್ಮ ವಿದ್ಯಾಭ್ಯಾಸ ಮುಗಿಸಿದ್ದರು. 2018ರಲ್ಲಿ ಚಿರಂಜೀವಿ ಸರ್ಜಾ ಮೇಘನಾ ರಾಜ್ ಜೊತೆ ಹಸೆಮಣೆ ಏರಿದ್ದರು.

ವಾಯುಪುತ್ರ ಚಿತ್ರದ ಮೂಲಕ ಚಿರಂಜೀವಿ ಸರ್ಜಾ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಿದ್ದು, ಚಿರು, ಗಂಡೆದೆ, ವರದನಾಯಕ, ದಂಡಂ ದಶಗುಣಂ, ಸಿಂಗ, ಶಿವಾರ್ಜುನ ಸೇರಿ ಹಲವು ಚಿತ್ರಗಳಲ್ಲಿ ಚಿರಂಜೀವಿ ನಟಿಸಿದ್ದಾರೆ.
ಚಿರಂಜೀವಿ ನಿಧನಕ್ಕೆ ಸ್ಯಾಂಡಲ್‌ವುಡ್ ಗಣ್ಯರು ಕಂಬನಿ ಮಿಡಿದಿದ್ದಾರೆ.
- Advertisement -