ಕೆಪಿಸಿಸಿ ಹಾಲಿ ಅಧ್ಯಕ್ಷರು ಎಲ್ಲವನ್ನೂ ದೋಚಿಕೊಂಡು ಹೋಗಿದ್ದಾರೆ

ಕರ್ನಾಟಕ ಟಿವಿ ಚಿತ್ರದುರ್ಗ : ಈಗ ಯಾರೂ ರಾಜಕೀಯ ಮಾಡುವ ಸಮಯವಲ್ಲ.‌ಕೊರೊನಾ ಮಹಾಮಾರಿ ವಿರುದ್ಧ ಯುದ್ಧ ಮಾಡುವ ಸಮಯ, ಇಂಥ ಸಂದಿಗ್ಧ ಕಾಲದಲ್ಲಿಯೂ ವಿರೋಧ ಪಕ್ಷದವರು ಅನಗತ್ಯ ಟೀಕೆ – ಟಿಪ್ಪಣಿ ಮಾಡುವುದು ಬೇಸರದ ಸಂಗತಿ ಎಂದು ಕೃಷಿಸಚಿವ ಬಿ.ಸಿ. ಪಾಟೀಲ್ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧಅಸಮಾಧಾನ ವ್ಯಕ್ತಪಡಿಸಿದ್ರು.

ಕೆಪಿಸಿಸಿ ಹಾಲಿ ಅಧ್ಯಕ್ಷರು ಎಲ್ಲವನ್ನೂ ದೋಚಿಕೊಂಡು ಹೋಗಿದ್ದಾರೆ

ಕೊರೊನಾ ವೈರಸ್ ಹಬ್ಬದಂತೆ ತಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಸಮರೋಪಾದಿ ಕಾರ್ಯ ಕೈಗೊಂಡಿವೆ. ಇಂಥ ಸಂದರ್ಭದಲ್ಲಿಯೂ ಕೃಷಿ ಚಟುವಟಿಕೆಗಳಿಗೆ ಅಡ್ಡಿಯಾಗದಂತೆ ಪರಿಶ್ರಮ ವಹಿಸಲಾಗಿದೆ , ಕೆಪಿಸಿಸಿ ಹಾಲಿ ಅಧ್ಯಕ್ಷರು ಎಲ್ಲವನ್ನೂ ದೋಚಿಕೊಂಡು ಹೋಗಿದ್ದಾರೆ. ಆದರೂ ಬಿಜೆಪಿ‌ ಸರ್ಕಾರ ಕಂಗೆಡದೆ ಪರಿಸ್ಥಿತಿಯನ್ನು‌ ನಿಭಾಯಿಸುತ್ತಿದೆ ಎಂದು ತಿರುಗೇಟು ನೀಡಿದರು.

ಕರ್ನಾಟಕ ಟಿವಿ, ಚಿತ್ರದುರ್ಗ

About The Author