- Advertisement -
ಕರ್ನಾಟಕ ಟಿವಿ ಚಿತ್ರದುರ್ಗ : ಗಂಗಾವತಿ ಭಾಗದಲ್ಲಿ ಪ್ರಾಕೃತಿಕ ವಿಕೋಪದಿಂದ ಆದ ಬೆಳೆನಷ್ಟಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಂದಿಸಿದ್ದಾರೆ. ಪರಿಹಾರ ಬಿಡುಗಡೆ ಮಾಡಿದ್ದಾರೆ.ಸಬ್ಸಿಡಿ ದರದಲ್ಲಿ ಬಿತ್ತನೆಬೀಜ – ರಸಗೊಬ್ಬರ ಲಭ್ಯವಾಗುವಂತೆ ಮಾಡಿದ್ದೇವೆ. ರಾಜ್ಯದ್ಯಂತ ಇವುಗಳ ಪೂರೈಕೆಗೆ ಕಿಂಚಿತ್ತೂ ತೊಂದರೆಯಾಗಿಲ್ಲ. ಕೃಷಿಯುತ್ಪನ್ನಗಳ ಸಾಗಣೆ – ಮಾರಾಟಕ್ಕೆ ಅಡ್ಡಿಯಾಗದಂತೆ ನೋಡಿಕೊಂಡಿದ್ದೇವೆ. ಅತ್ಯವಶ್ಯಕ ವಸ್ತುಗಳ ಪೂರೈಕೆಗೆ ತೊಂದರೆಯಾಗಿಲ್ಲ. ಹಾಲನ್ನು ಸರ್ಕಾರವೇ ಖರೀದಿಸಿ ಸಾರ್ವಜನಿಕರಿಗೆ ಉಚಿತವಾಗಿ ಪೂರೈಕೆ ಮಾಡುತ್ತಿದೆ. ಅಂತ ಸಚಿವ ಬಿಸಿ ಪಾಟೀಲ್ ಭರವಸೆ ನೀಡಿದ್ರು.
ಕರ್ನಾಟಕ ಟಿವಿ, ಚಿತ್ರದುರ್ಗ
- Advertisement -