ಅನ್ಯಾಯದ ಕಾಡ್ಗಿಚ್ಚನ್ನು ಆರಿಸಿ, ನ್ಯಾಯದ ಹಣತೆ ಬೆಳಗುವ ವರೆಗೆ ನಾವು ವಿರಮಿಸುವುದಿಲ್ಲ: ಸಿಎಂ

Political News: ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಟ್ವೀಟ್ ಮೇಲೆ ಟ್ವೀಟ್ ಮಾಡುತ್ತಿದ್ದಾರೆ. ಪ್ರಧಾನಿಗಳಿಗೆ ಸವಾಲ್ ಹಾಕುತ್ತಿದ್ದಾರೆ. ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಇಂದು ಕೂಡ ಸಿಎಂ ಟ್ವೀಟ್ ಮಾಡಿದ್ದು, ರಾಹುಲ್ ಗಾಂಧಿ ನ್ಯಾಯ ಯಾತ್ರೆಗೆ ನನ್ನ ಮತ್ತು ಭಾರತದ ಜನತೆಯ ಸಾಥ್ ಇದೆ ಎಂದು ಹೇಳಿದ್ದಾರೆ.

ಸತ್ಯ, ಧರ್ಮ, ನ್ಯಾಯದ ಹಾದಿಯಲ್ಲಿ ನಡೆಯುವವರು ಯಾವತ್ತಿಗೂ ಭಯ ಪಡಲಾರರು. ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರ ಭಾರತ ಐಕ್ಯತಾ ನ್ಯಾಯ ಯಾತ್ರೆ ಬಿಜೆಪಿಯ ಸರ್ವಾಧಿಕಾರಿ ಸಾಮ್ರಾಜ್ಯದೊಳಗೆ ತಲ್ಲಣ ಸೃಷ್ಟಿಸಿದೆ. ಗೂಂಡಾಗಳನ್ನು ಬಿಟ್ಟು ಕಲ್ಲು ಹೊಡೆಸಿ, ಬೆದರಿಕೆ ಒಡ್ಡುವ ಮೂಲಕ ಭಾರತೀಯರ ನ್ಯಾಯದ ಕೂಗನ್ನು ಅಡಗಿಸಬಹುದು ಎಂದು ಭಾವಿಸಿದ್ದರೆ ಅದು ನಿಮ್ಮ ಭ್ರಮೆ ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ ಅವರೇ. ರಾಹುಲ್ ಗಾಂಧಿ ಅವರ ಜೊತೆ ನಾನಿದ್ದೇನೆ, ನನ್ನಂತಹ ಕೋಟ್ಯಂತರ ಭಾರತೀಯರಿದ್ದಾರೆ. ಅನ್ಯಾಯದ ಕಾಡ್ಗಿಚ್ಚನ್ನು ಆರಿಸಿ, ನ್ಯಾಯದ ಹಣತೆ ಬೆಳಗುವ ವರೆಗೆ ನಾವು ವಿರಮಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಪ್ರತಿ ಭಾರತೀಯನಿಗೂ ಸಿಗಬೇಕಿರುವ ನ್ಯಾಯವನ್ನು ಕೊಡಿಸುವುದೇ ಭಾರತ ಐಕ್ಯತಾ ನ್ಯಾಯ ಯಾತ್ರೆಯ ಮೂಲ ಉದ್ದೇಶ. ಈ ದೇಶದ ಯುವಜನರಿಗೆ, ಮಹಿಳೆಯರಿಗೆ, ರೈತರಿಗೆ, ಕಾರ್ಮಿಕರಿಗೆ ಮತ್ತು ನ್ಯಾಯದ ಭಾರತ ನಿರ್ಮಾಣ ಕಾರ್ಯದಲ್ಲಿ ನಮ್ಮ ಜೊತೆಯಾಗಿರುವ ಭಾಗೀದಾರರಿಗೆ ಕಾಂಗ್ರೆಸ್ ಪಕ್ಷ ಕಾರ್ಯಕ್ರಮವೊಂದನ್ನು ರೂಪಿಸಿದ್ದು, ಇನ್ನೊಂದು ತಿಂಗಳಲ್ಲಿ ಅದನ್ನು ತಮ್ಮೆದುರು ಪ್ರಸ್ತುತಪಡಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಅಸ್ಸಾಂನಲ್ಲಿ ಭಾರತ್ ಜೋಡೋ ನ್ಯಾಯಯಾತ್ರೆ ಮೇಲೆ ದಾಳಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

‘ಕಾಂಗ್ರೆಸ್ ಮೊಸರಲ್ಲಿ ಕಲ್ಲು ಹುಡಕೋದು ಬಿಡಬೇಕು. ಎಲ್ಲದರಲ್ಲೂ ರಾಜಕೀಯ ಬೆರೆಸಬಾರದು’

ಕಾಂಗ್ರೆಸ್‌ನವರು ಏನೇನೋ ಕುಡಿದು ಹೇಗಿದ್ದಾರೆಂದು ಆಶ್ಚರ್ಯವಾಗಿದೆ: ಬೆಲ್ಲದ್ ವ್ಯಂಗ್ಯ

About The Author