ಕಿಚ್ಚ ಅಭಿಮಾನಿಗಳಿಗೆ ಕ್ರಿಸ್‌ಮಸ್ ಗಿಫ್ಟ್, ಡಿಸೆಂಬರ್ 25ಕ್ಕೆ ‘ಮಾರ್ಕ್’ ರಿಲೀಸ್ ಫಿಕ್ಸ್!

ಸುದೀಪ್ ನಟನೆಯ ‘ಮಾರ್ಕ್’ ಚಿತ್ರದ ಶೂಟಿಂಗ್ ಕೇವಲ ನಾಲ್ಕು ತಿಂಗಳಲ್ಲಿ ಪೂರ್ಣಗೊಂಡಿದ್ದು, ಡಿಸೆಂಬರ್ 25ರಂದು ಚಿತ್ರ ಬಿಡುಗಡೆಗೊಳ್ಳಲಿದೆ. ಜುಲೈನಲ್ಲಿ ಸೆಟ್ಟೇರಿದ ಈ ಸಿನಿಮಾ ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ ಎಂದು ತಂಡ ತಿಳಿಸಿದೆ. ಇದು ಇತ್ತೀಚಿನ ವರ್ಷಗಳಲ್ಲಿ ಸುದೀಪ್ ಇಷ್ಟು ವೇಗವಾಗಿ ಪೂರ್ಣಗೊಳಿಸಿದ ಮೊದಲ ಸಿನಿಮಾ.

ಇತ್ತೀಚೆಗೆ ಬಿಡುಗಡೆಯಾದ ಟೀಸರ್‌ನಲ್ಲಿ ಸುದೀಪ್ ಅವರ ಆ್ಯಕ್ಷನ್ ದೃಶ್ಯಗಳು ಪ್ರೇಕ್ಷಕರಲ್ಲಿ ಭಾರಿ ನಿರೀಕ್ಷೆ ಮೂಡಿಸಿವೆ. ‘ಮ್ಯಾಕ್ಸ್’ ನಂತರ ವಿಜಯ್ ಕಾರ್ತಿಕೇಯ ನಿರ್ದೇಶನದ ಈ ಚಿತ್ರದಲ್ಲೂ ಸುದೀಪ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರ ಪಾತ್ರದ ಹೆಸರು ಅಜಯ್ ಮಾರ್ಕಂಡೆ.

‘ಮಾರ್ಕ್’ ಚಿತ್ರಕ್ಕೆ ಶೇಖರ್ ಚಂದ್ರ ಛಾಯಾಗ್ರಹಣ, ಅಜನೀಶ್ ಬಿ. ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ. ‘ಸತ್ಯಜ್ಯೋತಿ ಫಿಲ್ಮ್ಸ್’ ಮತ್ತು ‘ಕಿಚ್ಚ ಕ್ರಿಯೇಷನ್ಸ್’ ಬ್ಯಾನರ್‌ನಡಿ ಚಿತ್ರ ನಿರ್ಮಾಣವಾಗಿದೆ. ಡಿಸೆಂಬರ್‌ನಲ್ಲಿ ‘ಡೆವಿಲ್’ ಮತ್ತು ‘45’ ಚಿತ್ರಗಳೂ ಬಿಡುಗಡೆಯಾಗುತ್ತಿರುವುದರಿಂದ ಬಾಕ್ಸ್ ಆಫೀಸ್‌ ಕ್ಲ್ಯಾಶ್ ಆಗುವ ನಿರೀಕ್ಷೆ ಹೆಚ್ಚಿದೆ.

ವರದಿ : ಲಾವಣ್ಯ ಅನಿಗೋಳ

About The Author