Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಿಐಡಿ ಡಿಐಜಿ ಸಲೀಂ ಟೀಂ ಬೀಡುಬಿಟ್ಟಿದ್ದು, ಇಂದು ಬೆಳಿಗ್ಗೆ ನೇಹಾ ಹಿರೇಮಠ್ ನಿವಾಸಕ್ಕೆ ಭೇಟಿ ಕೊಟ್ಟು, ಮಾತುಕತೆ ನಡೆಸಿದ್ದಾರೆ.
ನಿನ್ನೆ ನೇಹಾ ತಂದೆ ನಿರಂಜನ್, ಅಧಿಕಾರಿಗಳನ್ನು ಭೇಟಿ ಮಾಡಿ, ಅಪರಾಧಿಗಳಿಗೆ ಶಿಕ್ಷೆಯಾಗಲೇಬೇಕೆಂದು ಹೇಳಿದ್ದರು. ಆಗ ನಾಳೆ ನಾವು ನಿಮ್ಮ ಮನೆಗೆ ಬಂದು ಮಾತನಾಡುತ್ತೇವೆ ಎಂದು ಅಧಿಕಾರಿಗಳು ಹೇಳಿದ್ದರು. ಅದರಂತೆ ಇಂದು ಬೆಳಿಗ್ಗೆ ಸಲೀಂ ಅವರ ಟೀಂ, ನೇಹಾ ಹಿರೇಮಠ್ ಅವರ ಮನೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ನಿನ್ನೆ ಅಂಜಲಿ ಮನೆಗೆ ಭೇಟಿ ನೀಡಿ, ಅಲ್ಲಿ ವಿಚಾರಣೆ ನಡೆಸಿದ್ದರು. ಅಲ್ಲದೇ, ಅಪರಾಧಿ ಗಿರೀಶ್ನನ್ನು ಕೂಡ ಡ್ರಿಲ್ ಮಾಡಿದ್ದರು. ಒಂದೇ ತಿಂಗಳಲ್ಲಿ ಹುಬ್ಬಳ್ಳಿಯಲ್ಲಿ ಅಂಜಲಿ ಮತ್ತು ನೇಹಾ ಹಿರೇಮಠ್ ಕೊಲೆಯಾಗಿದ್ದು, ಎರಡೂ ಪ್ರಕರಣದ ಅಪರಾಧಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ.
ಅಕೌಂಟೆಂಟ್ ಸೂಪರಿಡೆಂಟ್ ಸಾವು: ಕಾಂಗ್ರೆಸ್ ಸಚಿವರನ್ನು ವಜಾಗೊಳಿಸಬೇಕೆಂದು ಬಿಜೆಪಿ ಆಗ್ರಹ

