Thursday, December 5, 2024

Latest Posts

ಪೊಲೀಸರು-ಪ್ರತಿಭಟನಾಕಾರರ ನಡುವೆ ನೂಕಾಟ-ತಳ್ಳಾಟ…!

- Advertisement -

ಹುಬ್ಬಳ್ಳಿ: ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಬಂದ್ ಗೆ ಬೆಂಬಲಿಸಿ ಕಳಸಾ ಬಂಡೂರಿ ಹೋರಾಟ ಸಮಿತಿ ಸೇರಿದಂತೆ ವಿವಿಧ ರೈತ ಸಂಘಟನೆಗಳು ಪ್ರತಿಭಟನೆ ನಡೆಸಿದವು‌.

ನಗರದ ಚೆನ್ನಮ್ಮ ವೃತ್ತದಲ್ಲಿ ರಸ್ತೆಯ ಮಧ್ಯೆಯೇ ಮಲಗಿ ಪ್ರತಿಭಟನೆ ನಡೆಸಿದರು.‌ ಇದಲ್ಲದೇ ರಸ್ತೆ ಬಂದ್ ಮಾಡಿ ವಾಹನಗಳನ್ನು ತಡೆಯಲು ರೈತರು ಮುಂದಾದಾಗ ಪೊಲೀಸರು ಹಾಗೂ ಪ್ರತಿಭಟನಾನಿರತ ರೈತರ ನಡುವೆ ವಾಗ್ವಾದ ನಡೆಯಿತು‌‌. ಈ ವೇಳೆ ಪೊಲೀಸರು ಹಾಗೂ ರೈತರ ನಡುವೇ ತಳ್ಳಾಟ ನೂಕಾಟ ನಡೆಯಿತು.

ರೈತ ವಿರೋಧಿ ಕೃಷಿ ಕಾಯ್ದೆಯನ್ನು ಕೂಡಲೇ ಕೇಂದ್ರ ಸರ್ಕಾರ ಕೈಬಿಡಬೇಕು ಅಂತ ಪ್ರತಿಭಟನಾಕಾರರು ಕೇಂದ್ರ ಸರ್ಕರವನ್ನು ಒತ್ತಾಯಿಸಿದ್ರು. ಬಳಿಕ ಪೊಲೀಸರು ಶಾಂತ ರೀತಿಯಲ್ಲಿ ಹೋರಾಟ ಮಾಡಿ ಅಂತ ಪ್ರತಿಭಟನಾ ಕಾರರ ಮನವೊಲಿಸುವಲ್ಲಿ ಯಶಸ್ವಿಯಾದ್ರು.

- Advertisement -

Latest Posts

Don't Miss